ಸುದ್ದಿಮೂಲ ವಾರ್ತೆ ಬೆಳಗಾವಿ/ಬಳ್ಳಾರಿ, ಡಿ.09:
ಒಂದು ಸಾವಿರದ ಎಂಭತ್ತೊೊಂಬತ್ತು ದಿನಗಳಿಂದ ಕುಡತಿನಿಯಲ್ಲಿ ಪ್ರತಿಭಟನೆ ನಡೆಸುತ್ತಿಿರುವ 12000 ಎಕರೆ ಭೂಮಿಯ ಭೂ ಸಂತ್ರಸ್ತ ರೈತರ ಬೇಡಿಕೆಗಳನ್ನು ಮಾನವೀಯತೆಯ ಆಧಾರದ ಮೇಲೆ ಶೀಘ್ರದಲ್ಲೇ ಈಡೇರಿಸಬೇಕು ಎಂದು ಬಳ್ಳಾಾರಿ – ವಿಜಯನಗರ ಸ್ಥಳೀಯ ಸಂಸ್ಥೆೆಗಳ ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ಸರ್ಕಾರಕ್ಕೆೆ ಮನವಿ ಮಾಡಿದ್ದಾಾರೆ.
ಬೆಳಗಾವಿಯ ‘ಸುವರ್ಣ ವಿಧಾನಸೌಧ’ದಲ್ಲಿ ನಡೆಯುತ್ತಿಿರುವ ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಮಂಗಳವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಭೂತ ಅಭಿವೃದ್ಧಿಿ ಸಚಿವ ಎಂ.ಬಿ. ಪಾಟೀಲ್ ಅವರಲ್ಲಿ ಪ್ರಶ್ನೆೆ ಕೇಳಿದ ಶಾಸಕ ವೈ.ಎಂ. ಸತೀಶ್ ಅವರು, ಕುಡತಿನಿ, ವೇಣಿವೀರಾಪುರ, ಸಿದ್ದಮ್ಮನಹಳ್ಳಿಿ, ಹರಗಿನಡೋಣಿ ಸೇರಿ ಸುತ್ತಲಿನ ವಿವಿಧ ಗ್ರಾಾಮಗಳ ಭೂಮಿಗಳನ್ನು ಸರ್ಕಾರ (ಕೆಐಡಿಬಿ) ಸ್ವಾಾಧೀನ ಮಾಡಿಕೊಂಡು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳಿಗೆ ನೀಡಿದೆ. ಆದರೆ, ಕೈಗಾರಿಕೆಗಳು ಪ್ರಾಾರಂಭವಾಗದೇ ಉದ್ಯೋೋಗ ಸಿಗದೇ ಭೂ ಸಂತ್ರಸ್ತರ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆೆ ಈಡಾಗುತ್ತಿಿವೆ. ಅಲ್ಲದೇ, ಹೆಚ್ಚಿಿನ ಪರಿಹಾರ ನೀಡಲು ವಿವಿಧ ನ್ಯಾಾಯಾಲಯಗಳು ಆದೇಶ ನೀಡಿದ್ದು, ಪ್ರತಿಭಟನೆ ನಡೆಸುತ್ತಿಿರುವ ಭೂ ಸಂತ್ರಸ್ತರ ಬೇಡಿಕೆಗಳನ್ನು ಸರ್ಕಾರ ಮಾನವೀಯತೆಯ ಆಧಾರದ ಮೇಲೆ ತ್ವರಿತವಾಗಿ ಈಡೇರಿಸಬೇಕು ಎಂದು ಆಗ್ರಹಿಸಿದರು.
ಆಗ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಭೂತ ಅಭಿವೃದ್ಧಿಿ ಸಚಿವ ಎಂ.ಬಿ. ಪಾಟೀಲ್ ಅವರು, ಮೆ. ಆರ್ಸೆಲರ್ ಮಿತ್ತಲ್ ಇಂಡಿಯಾ ಲಿ, ಮೆ. ಉತ್ತಮ್ ಗಾಲ್ವಾಾ ೆರೋಸ್ ಲಿ, ಮೆ. ಕರ್ನಾಟಕ ವಿಜಯನಗರ ಸ್ಟೀಲ್ ಲಿ, (ಎನ್ಎಂಡಿಸಿ) ಯೋಜನೆಗಳಿಗಾಗಿ ಭೂಮಿ ಸ್ವಾಾಧೀನಕ್ಕೆೆ ಪಡೆಯಲಾಗಿದೆ. ಈ ಮೂರೂ ಕೈಗಾರಿಗಳ ಭೂ ಸಂತ್ರಸ್ತರು ಹೆಚ್ಚುವರಿ ಪರಿಹಾರಕ್ಕಾಾಗಿ ನ್ಯಾಾಯಾಲಯಗಳಲ್ಲಿ ದಾವೆ ಹೂಡಿದ್ದಾಾರೆ. ಆರ್ಸೆಲರ್ ಮಿತ್ತಲ್ ಇಂಡಿಯಾವು ಪ್ರತಿ ಎಕರೆಗೆ 1.30 ಕೋಟಿ ರೂಪಾಯಿ ಪರಿಹಾರ ಪಾವತಿಗೆ ಆದೇಶ ನೀಡಿದೆ. ಈ ಮೊತ್ತವನ್ನು ಕಂಪನಿಯು ದಾವೆದಾರರಿಗೆ ಪಾವತಿಸಿದೆ. ಅಲ್ಲದೇ, ವಿವಿಧ ನ್ಯಾಾಯಾಲಯಗಳಲ್ಲಿ ಬಾಕಿ ಇರುವ 657 ಎಕರೆ ಜಮೀನುಗಳಿಗೂ ಆರ್ಸೆಲರ್ ಮಿತ್ತಲ್ ಕಂಪನಿಯು ಇದೇ ರೀತಿಯಲ್ಲಿ ಪರಿಹಾರ ಪಾವತಿ ಮಾಡಬೇಕಿದೆ ಎಂದು ವಿವರಿಸಿದರು.
ಉತ್ತಮ್ ಗಾಲ್ವಾಾ ೆರೋಸ್ ಲಿಮಿಟೆಡ್ ಕಂಪನಿಯು ಸ್ವಾಾಧೀನ ಮಾಡಿಕೊಂಡಿರುವ ಒಟ್ಟು ಭೂಮಿಯ ಪೈಕಿ 441 ಎಕರೆ ಭೂಮಿಗೆ ಸಾಮಾನ್ಯ ಐ ತೀರ್ಪು ರಚಿಸಲಾಗಿದೆ. ಈ ಪೈಕಿ 298 ಎಕರೆ ಜಮೀನಿನ ಮಾಲೀಕರು ಹೆಚ್ಚಿಿನ ಪರಿಹಾರ ಕೋರಿ ನ್ಯಾಾಯಾಲಯಗಳಲ್ಲಿ ದಾವೆ ದಾಖಲಿಸಿದ್ದು, ನವೆಂಬರ್ – 2024 ರಲ್ಲಿ ಹೈಕೋರ್ಟ್ ನೀಡಿದ್ದ ತೀರ್ಪಿನ ಪ್ರಕಾರ ಕಂಪನಿಯು 17 ಕೋಟಿ ರೂಪಾಯಿ ಮೊತ್ತ ನ್ಯಾಾಯಾಲಯದಲ್ಲಿ ಠೇವಣಿ ಇರಿಸಿದೆ. ಅಲ್ಲದೆ, ಮುಖ್ಯಮಂತ್ರಿಿಗಳ ಜೊತೆ ಭೂ ಸಂತ್ರಸ್ತರ ಸಭೆ ನಡೆದಿದೆ. ಈ ಸಭೆಯಲ್ಲಿ ಪ್ರತಿಭಟನಾ ನಿರತರಲ್ಲಿ ಸಮಯಾವಕಾಶ ಕೇಳಲಾಗಿದೆ ಎಂದರು.
ಆಗ, ವೈ.ಎಂ. ಸತೀಶ್ ಅವರು, ‘15 ವರ್ಷಗಳಿಂದ ಭೂ ಸಂತ್ರಸ್ತ ಕುಟುಂಬದ ಸದಸ್ಯರು ಉದ್ಯೋೋಗ – ಹೆಚ್ಚಿಿನ ಪರಿಹಾರ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಯ ನಿರೀಕ್ಷೆಯಲ್ಲಿದ್ದಾಾರೆ. ಮಾನವೀಯತೆಯ ಆಧಾರದ ಮೇಲೆ ಹೆಚ್ಚಿಿನ ಪರಿಹಾರ ಅಥವಾ ಸ್ವಾಾಧೀನ ಮಾಡಿಕೊಂಡಿರುವ ಭೂಮಿ ಹಿಂದಿರುಗಿಸಿ ಕೃಷಿಯನ್ನು ನಡೆಸಲು ಸಹಕಾರ ನೀಡಬೇಕು’ ಎಂದು ಮನವಿ ಮಾಡಿದ್ದಾಾರೆ.
ಉತ್ತರವಾಗಿ, ಸಚಿವ ಎಂ.ಬಿ. ಪಾಟೀಲ್ ಅವರು, ಮುಖ್ಯಮಂತ್ರಿಿಗಳ ನೇತೃತ್ವದಲ್ಲಿ ಅಡ್ವೊೊಕೇಟ್ ಜನರಲ್ ಅವರ ಜೊತೆಯಲ್ಲಿ ಸಭೆ ನಡೆದಿದೆ. ಆಡಳಿತಾತ್ಮಕ ಮತ್ತು ತಾಂತ್ರಿಿಕ ಸಮಸ್ಯೆೆಗಳಿವೆ. ಉತ್ತಮ್ ಗಾಲ್ವಾಾ ೆರೋಸ್ ಲಿಮಿಟೆಡ್ ಕೈಗಾರಿಕೆಯ ಸ್ವರೂಪ ಬದಲಾವಣೆ ಮಾಡಲು ಕೋರಿದ್ದು, ಅರ್ಜಿ ಸಲ್ಲಿಸಲು ಸರ್ಕಾರ ಕೋರಿದೆ. ಆರ್ಸೆಲರ್ ಮಿತ್ತಲ್ ಇಂಡಿಯಾ ಬೇರೆ ರಾಜ್ಯದಲ್ಲಿ 1 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮಾಡಿ ಭಾರತದಲ್ಲಿಯೇ ಅತಿ ದೊಡ್ಡದಾದ ಉಕ್ಕು ಕಾರ್ಖಾನೆ ನಿರ್ಮಾಣ ಮಾಡುತ್ತಿಿದೆ. ಪ್ರತಿಭಟನಾ ನಿರತರ ಬೇಡಿಕೆಗಳನ್ನು ಮಾನವೀಯತೆಯ ಆಧಾರದ ಮೇಲೆ ಪರಿಹರಿಸಲು ಪ್ರಯತ್ನಿಿಸಲಾಗುತ್ತದೆ ಎಂದರು.
ಕುಡತಿನಿ ಭೂ ಸಂತ್ರಸ್ತರ ಬೇಡಿಕೆ ಪರಿಹರಿಸಿ : ವೈ.ಎಂ. ಸತೀಶ್

