ಸುದ್ದಿಮೂಲ ವಾರ್ತೆ ಬಳ್ಳಾರಿ, ಡಿ.11:
ಬಳ್ಳಾಾರಿ ಜಿಲ್ಲಾಾ ಕಾನೂನು ಸೇವೆಗಳ ಪ್ರಾಾಧಿಕಾರವು ಡಿಸೆಬರ್ 13ರ ಶನಿವಾರ ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ ಎಂದು ಪ್ರಧಾನ ಜಿಲ್ಲಾಾ ಮತ್ತು ಸತ್ರ ನ್ಯಾಾಯಾಧೀಶರು ಹಾಗೂ ಜಿಲ್ಲಾಾ ಕಾನೂನು ಸೇವೆಗಳ ಪ್ರಾಾಧಿಕಾರದ ಅಧ್ಯಕ್ಷರೂ ಆಗಿರುವ ಕೆ.ಜಿ.ಶಾಂತಿ ಅವರು ತಿಳಿಸಿದ್ದಾಾರೆ.
ಜಿಲ್ಲಾಾ ನ್ಯಾಾಯಾಲಯ ಸಂಕೀರ್ಣದ ಮೊದಲನೇ ಮಹಡಿಯ ವಿಡೀಯೋ ಸಭಾಂಗಣದಲ್ಲಿ ಬುಧವಾರ ಸುದ್ದಿಗೋಷ್ಠಿಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಬಳ್ಳಾಾರಿ ಜಿಲ್ಲೆೆಯಲ್ಲಿ ಅದಾಲತ್ ದಿನದಂದು 15 ಬೆಂಚ್ ಗಳಲ್ಲಿ ಅದಾಲತ್ ನಡೆಯಲಿದೆ. ಬಗೆಹರಿಸಬಹುದಾದ ವಿವಿಧ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು ಹಾಗೂ ನ್ಯಾಾಯಾಲಯದ ಶುಲ್ಕ ಮರು ಪಾವತಿಸಲಾಗುತ್ತದೆ ಎಂದು ಹೇಳಿದರು.
ಬಳ್ಳಾಾರಿ ಜಿಲ್ಲೆೆಯಲ್ಲಿ ಒಟ್ಟು 35,533 ಬಾಕಿ ಪ್ರಕರಣಗಳಲ್ಲಿ ಡಿಸೆಂಬರ್ 13 ರಂದು ನಡೆಯಲಿರುವ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ 8,961 ಪ್ರಕರಣಗಳನ್ನು ರಾಜಿ ಸಂಧಾನಕ್ಕೆೆ ಗುರುತಿಸಲಾಗಿದೆ. ಈ ಪೈಕಿ 4,178 ಪ್ರಕರಣಗಳ ಉಭಯ ಕಕ್ಷಿದಾರರು ರಾಜಿ ಮಾತುಕತೆಯ ಮೂಲಕ ಇತ್ಯರ್ಥಕ್ಕೆೆ ಒಪ್ಪಿಿಕೊಂಡಿದ್ದಾಾರೆ ಎಂದರು.
ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳು ಹಾಗೂ ಸಾರಿಗೆ ಇಲಾಖೆಯಲ್ಲಿ 1991-92 ರಿಂದ 2019-20ರ ಅವಧಿಯಲ್ಲಿ ದಾಖಲಾಗಿ ಪಾವತಿಗೆ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಿದ್ದು, ಡಿ.12 ರ ವರೆಗೆ ಈ ರಿಯಾಯಿತಿ ಸೌಲಭ್ಯ ಇರಲಿದೆ. ಡಿಸೆಂಬರ್ 13 ರಂದು ನಡೆಯಲಿರುವ ರಾಷ್ಟ್ರೀಯ ಲೋಕ್ ಅದಾಲತ್ ಪ್ರಯುಕ್ತ ಈ ರಿಯಾಯಿತಿ ನೀಡಲಾಗಿದೆ. ಸಾರ್ವಜನಿಕರು ಈ ಸೌಲಭ್ಯ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾಾ ಕಾನೂನು ಸೇವೆಗಳ ಪ್ರಾಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಸೇರಿದಂತೆ ಜಿಲ್ಲಾಾ ನ್ಯಾಾಯಾಲಯದ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.

