ಸುದ್ದಿಮೂಲ ವಾರ್ತೆ ಕವಿತಾಳ, ಡಿ.15
ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪೊಲೀಸ್ ಇಲಾಖೆ ವತಿಯಿಂದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಕವಿತಾಳ ಠಾಣೆ ಪಿ ಎಸ್ ಐ ಗುರುಚಂದ್ರ ಯಾದವ್ ಮಾತನಾಡಿ, ಯುವಜನತೆ, ವಿದ್ಯಾಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಬೇಕು ಶಾಲಾ ಕಾಲೇಜುಗಳ ಹತ್ತಿಿರ ಗುಟುಕಾ ತಂಬಾಕು ಬೀಡಿ ಸಿಗರೇಟು ಮಾರಾಟ ಮಾಡುವುದು ಕಾನೂನು ಪ್ರಕಾರ ನಿಷೇಧಿಸಲಾಗಿದೆ.
ಅಂತಹ ಘಟನೆಗಳು ಕಂಡು ಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡಬೇಕು ಮಕ್ಕಳ ಮೇಲಿನ ದೌರ್ಜನ್ಯ ತಡೆ ಕುರಿತು ಮಕ್ಕಳಿಗೆ ಮಾಹಿತಿ ನೀಡಬೇಕು ಯಾವುದೇ ಅಹಿತಕರ ಘಟನೆಗಳ ಕಂಡು ಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವುದು ಅಥವಾ 1್ಡ12 ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದಲ್ಲಿ ಮಾಹಿತಿ ನೀಡಿದವರ ಗುರುತು ಗೌಪ್ಯತೆ ಕಾಪಾಡಲಾಗುವುದು ಎಂದರು.
ಮಲ್ಲಿಕಾರ್ಜುನ, ರಾಜಶೇಖರ, ದುರುಗಪ್ಪ, ನಾಗರಾಜ, ವೆಂಕಟೇಶ ಹೂಗಾರ, ಅಮರಮ್ಮ, ಹನುಮಂತ ಇದ್ದರು.
ಕವಿತಾಳ : ಮೊರಾರ್ಜಿ ಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ

