ಸುದ್ದಿಮೂಲ ವಾರ್ತೆ ರಾಯಚೂರು , ಡಿ.16:
ಹಾವೇರಿ ಜಿಲ್ಲೆಯಲ್ಲಿ ಜನವರಿ 14 ಮತ್ತು 15ರಂದು ಅಂಬಿಗರ 10ನೇ ಶರಣ ಸಂಸ್ಕೃತಿ ಉತ್ಸವ ಹಾಗೂ ವಚನ ಗ್ರಂಥ ಮಹಾರಥೋತ್ಸವ ಹಮ್ಮಿಿಕೊಳ್ಳಲಾಗಿದೆ ಎಂದು ನರಸೀಪುರದ ನಿಜಶರಣ ಅಂಬಿಗರ ಚೌಡಯ್ಯ ಗುರು ಪೀಠದ ಪೀಠಾಧಿಪತಿ ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಾಮೀಜಿ ಹೇಳಿದರು.
ನಗರದ ಪತ್ರಿಿಕಾ ಭವನದಲ್ಲಿ ಸುದ್ದಿಗೋಷ್ಠಿಿಯಲ್ಲಿ ಮಾತನಾಡಿ, ಎರಡು ದಿನಗಳ ಈ ಕಾರ್ಯಕ್ರಮದಲ್ಲಿ ಜ.14ರಂದು ನಿಜಶರಣ ಅಂಬಿಗರ ಚೌಡಯ್ಯನವರ ತೊಟ್ಟಿಿಲೋತ್ಸವ, ಐಕ್ಯ ಮಂಟಪ ಪೂಜೆ, ಸಾಮೂಹಿಕ ರಕ್ತದಾನ ಶಿಬಿರ, ಸಾಮೂಹಿಕ ಸರಳ ವಿವಾಹ, ಶಾಂತಮುನಿ ಸ್ವಾಾಮೀಜಿ 10ನೇ ಸ್ಮರಣೋತ್ಸವ, ರಾಜ್ಯಮಟ್ಟದ ಪ್ರತಿಭಾ ಪುರಸ್ಕಾಾರ ಹಾಗೂ ವಚನ ಕಂಠಪಾಠ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ.
ಜ.15ರಂದು ಧರ್ಮ ಧ್ವಜಾರೋಹಣ, ಧರ್ಮಸಭೆ,ನಿಜಶರಣ ಶಿಲಾಮಂಟಪ, ಕಂಚಿನ ಪುತ್ಥಳಿ, ಮಹರ್ಷಿ ವೇದವ್ಯಾಾಸ ಕಲ್ಯಾಾಣ ಮಂಟಪ, ಕಂಚಿನ ಪುತ್ಥಳಿ ಲೋಕಾರ್ಪಣೆ ಹಾಗೂ ಮಹರ್ಷಿ ವೇದವ್ಯಾಾಸ ಕಲ್ಯಾಾಣ ಮಂಟಪವನ್ನು ಮುಖ್ಯಮಂತ್ರಿಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಿ ಡಿ.ಕೆ.ಶಿವಕುಮಾರ್ ಉದ್ಘಾಾಟಿಸಲಿದ್ದಾಾರೆ ಎಂದರು. ರಾಜ್ಯದ ಎಲ್ಲಾ ಪಕ್ಷದ ಮುಖಂಡರು ಕಾರ್ಯಕ್ರಮಕ್ಕೆೆ ಆಗಮಿಸಲಿದ್ದಾರೆ ಎಂದು ವಿವರಿಸಿದರು.
ಚೌಡಯ್ಯನವರ 906ನೇ ಜಯಂತಿ ಉತ್ಸವ, ಶಾಂತಭೀಷ್ಮ ಚೌಡಯ್ಯ ಸ್ವಾಾಮೀಜಿ ಪೀಠಾರೋಹಣದ ದಶಮಾನೋತ್ಸವ, ವಚನಗ್ರಂಥ ಮಹಾರಥೋತ್ಸವ ಕಾರ್ಯಕ್ರಮ ಜರುಗಲಿದೆ ಎಂದರು. ಪ್ರತಿ ವರ್ಷದಂತೆ ಈ ವರ್ಷವೂ ಜಾತ್ರಾಾ ಮಹೋತ್ಸವ ಸಂಭ್ರಮದಿಂದ ನೆರವೇರಲಿದೆ. ರಾಜ್ಯದ ವಿವಿಧ ಜಿಲ್ಲೆೆಗಳಿಂದ ಹೆಚ್ಚಿಿನ ಸಂಖ್ಯೆೆಯಲ್ಲಿ ಜನ ಪಾಲ್ಗೊೊಳ್ಳುವ ನಿರೀಕ್ಷೆ ಇದೆ ಎಂದರು.
ಸುದ್ದಿಗೋಷ್ಠಿಿಯಲ್ಲಿ ಸಮಾಜದ ಅಧ್ಯಕ್ಷ ಕೆ. ಶಾಂತಪ್ಪ, ಮುಖಂಡರಾದ ಕಲ್ಮಲಾ ಶರಣಪ್ಪ, ಜಂಬಣ್ಣ ನಿಲೋಗಲ್, ಕಡಗೋಲ್ ಶರಣಪ್ಪಘಿ, ಕಡಗೋಲು ಆಂಜನೇಯ, ಹೊನ್ನಪ್ಪ ಮತ್ತಿಿತರರಿದ್ದರು.
ಜ.14 ಹಾಗೂ 15 ರಂದು ಅಂಬಿಗರ ಶರಣ ಸಂಸ್ಕೃತಿ ಉತ್ಸವ- ಶಾಂತಭೀಷ್ಮ ಶ್ರೀ

