ಸುದ್ದಿಮೂಲ ವಾರ್ತೆ ಬೆಳಗಾವಿ, ಡಿ.16:
ಬಳ್ಳಾಾರಿ ಜಿಲ್ಲೆೆಯ ಸಂಡೂರಿನಲ್ಲಿ ಕೌಶಲ್ಯಾಾಭಿವೃದ್ಧಿಿ ವಿಶ್ವವಿದ್ಯಾಾಲಯವನ್ನು ಮುಖ್ಯಮಂತ್ರಿಿಗಳು 2026-27ರ ಸಾಲಿನ ಬಜೆಟ್ನಲ್ಲಿ ಘೋಷಣೆ ಮಾಡುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿಿಗಳ ಆರ್ಥಿಕ ಸಲಹೆಗಾರ ಶಾಸಕ ಬಸವರಾಜ ರಾಯರಡ್ಡಿಿ ತಿಳಿಸಿದ್ದಾಾರೆ.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿಿರುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿಿ ಕುರಿತಂತೆ ವಿಧಾನಸಭೆಯಲ್ಲಿ ಚರ್ಚೆ ನಡೆಯುವ ವೇಳೆ ಮಾತನಾಡಿದರು.
ಉತ್ತರ ಕರ್ನಾಟಕದಲ್ಲಿ ಉನ್ನತ ಶಿಕ್ಷಣಕ್ಕೆೆ ಮತ್ತು ಕೈಗಾರಿಕೆಗಳ ಬೇಡಿಕೆಯಾನುಸಾರವಾಗಿ ಉತ್ತಮ ತರಬೇತಿ ಹೊಂದಿರುವ ಮಾನವ ಸಂಪನ್ಮೂಲ ಒದಗಿಸಲು ಆದ್ಯತೆ ದೊರಕಿಸುವ ನಿಟ್ಟಿಿನಲ್ಲಿ ಸಂಡೂರಿನಲ್ಲಿ ಕೌಶಲ್ಯಾಾಭಿವೃದ್ಧಿಿ ವಿಶ್ವವಿದ್ಯಾಾಲಯ ಸ್ಥಾಾಪಿಸುವ ಉದ್ದೇಶವಿದೆ. ಏಷ್ಯನ್ ಡೆವಲಪ್ಮೆಂಟ್ ಬ್ಯಾಾಂಕ್ನಲ್ಲಿ ಆರ್ಥಿಕ ನೆರವು ಪಡೆದು 500 ಕರ್ನಾಟಕ ಪಬ್ಲಿಿಕ್ ಶಾಲೆಗಳನ್ನು ಪ್ರಾಾರಂಭಿಸಿದ್ದು, ಈ ಭಾಗದ ಶಿಕ್ಷಣ ಕ್ಷೇತ್ರದಲ್ಲಿ ಐತಿಹಾಸಿಕ ಕಾರ್ಯವಾಗಿದೆ. ಕಲ್ಯಾಾಣ ಕರ್ನಾಟಕ ಪ್ರದೇಶಾಭಿವೃದ್ಧಿಿ ಮಂಡಳಿಯಿಂದ 400 ಹೊಸ ಕೆಪಿಎಸ್ ಶಾಲೆಗಳನ್ನು ಪ್ರಾಾರಂಭಿಸಲಾಗಿದೆ. ಮಕ್ಕಳಿಗೆ ಇಂಗ್ಲೀಷ್ ಭಾಷೆಯ ಜ್ಞಾಾನ ದೊರಕುವಂತಾಗಲು ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 35 ಎಲ್ಕೆಜಿ ಶಾಲೆಗಳನ್ನು ಪ್ರಾಾರಂಭಿಸಲಾಗುತ್ತಿಿದೆ.ೆ ಉತ್ತರ ಕರ್ನಾಟಕದಲ್ಲಿ ಶಿಕ್ಷಣ ಕ್ಷೇತ್ರಕ್ಕೆೆ ಹೆಚ್ಚಿಿನ ಆದ್ಯತೆ ನೀಡಿ, ಈ ಭಾಗದಲ್ಲಿಯೂ ಸಾಕ್ಷರತೆ ಪ್ರಮಾಣವನ್ನು ಹೆಚ್ಚಿಿಸುವ ಯತ್ನವನ್ನು ನಮ್ಮ ಸರ್ಕಾರ ಮಾಡುತ್ತಿಿದೆ ಎಂದರು.
ಸಂಡೂರಿನಲ್ಲಿ ಕೌಶಲ್ಯಾಭಿವೃದ್ಧಿ ವಿವಿ : ಬಜೆಟ್ನಲ್ಲಿ ಘೊಷಣೆ- ಬಸವರಾಜ ರಾಯರಡ್ಡಿ

