ಸುದ್ದಿಮೂಲ ವಾರ್ತೆ ರಾಯಚೂರು, ಡಿ.18:
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ 2025-26ನೇ ಸಾಲಿನಲ್ಲಿ ರೈತರಿಂದ ಎ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನ ಖರೀದಿಸಲು ರಾಯಚೂರು ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ಸ್ಥಾಾಪಿಸಲಾಗಿದ್ದು, ತೊಗರಿ ಮಾರಾಟ ಮಾಡಿ ಸರ್ಕಾರದ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ನಿತೀಶ್ ಕೆ. ಅವರು ಜಿಲ್ಲೆಯ ರೈತರಲ್ಲಿ ಮನವಿ ಮಾಡಿದ್ದಾರೆ.
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ, ರೈತರಿಂದ ತೊಗರಿ ಉತ್ಪನ್ನವನ್ನು ಪ್ರತಿ ಎಕರೆಗೆ 4 ಕ್ವಿಿಂಟಾಲ್ ಹಾಗೂ ತೊಗರಿ ಬೆಳೆದ ಜಮೀನಿನ ವಿಸ್ತೀರ್ಣಕ್ಕೆೆ ಅನುಗುಣವಾಗುವಂತೆ ಖರೀದಿ ಪ್ರಮಾಣ ನಿಗದಿಪಡಿಸಿದ್ದು, ಎ್.ಎ.ಕ್ಯೂ ಗುಣಮಟ್ಟದ ಪ್ರತಿ ಕ್ವಿಿಂಟಾಲ್ ಗೆ 8000 ರೂ.ಗಳಂತೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಖರೀದಿಸಲಾಗುವುದು.
ಆಸಕ್ತ ರೈತರಿಗೆ ದಿನಾಂಕ 17-12-2025 ರಿಂದ ರೈತರ ನೋಂದಣಿ ಕಾಲಾವಧಿಯನ್ನು 80 ದಿನಗಳವರೆಗೆ ನಿಗದಿ ಮಾಡಿದೆ. ರೈತ ಬಾಂಧವರು ್ರೂಟ್ಸ್ ಐ.ಡಿ, ಆಧಾರ್ ಕಾರ್ಡ, ಪಹಣಿಯೊಂದಿಗೆ ತಮ್ಮ ಹತ್ತಿಿರದ ಖರೀದಿ ಕೇಂದ್ರಗಳಲ್ಲಿ ಹೆಸರು ನೋಂದಾಯಿಸಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.
ರಾಯಚೂರು ಜಿಲ್ಲೆಯಲ್ಲಿ ತೊಗರಿ ಖರೀದಿ ಕೇಂದ್ರಗಳು ಆರಂಭ

