ಸುದ್ದಿಮೂಲ ವಾರ್ತೆ ರಾಯಚೂರು, ಡಿ.18:
ಕಲಬುರಗಿ ನಗರದ ಡಾ.ಎಸ್.ಎಂ ಪಂಡಿತ್ ರಂಗಮಂದಿರದಲ್ಲಿ ಡಿ.23 ರಂದು ವಿಶ್ವ ರೈತ ದಿನಾಚರಣೆ ಅಂಗವಾಗಿ ರಾಜ್ಯ ಮಟ್ಟದ ರೈತರ ಹಬ್ಬ, ಸಮಾವೇಶ ಹಮ್ಮಿಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಕೃಷಿ ಸಂರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ಮಸ್ತಾಾನ್ ನಾಯಕ್ ತಿಳಿಸಿದರು.
ನಗರದ ಪತ್ರಿಿಕಾ ಭವನದಲ್ಲಿ ಸುದ್ದಿಗೋಷ್ಠಿಿಯಲ್ಲಿ ಮಾತನಾಡಿ, ಸಮಾವೇಶಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ರೈತ ಸಂಘ ಹಾಗೂ ಕಬ್ಬು ಬೆಳೆಗಾರರ ಸಂಘದ ಸಂಯುಕ್ತಾಾಶ್ರಯದಲ್ಲಿ ಈ ಸಮಾವೇಶ ನಡೆಯಲಿದ್ದು ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ. ಕಲ್ಯಾಾಣ ಕರ್ನಾಟಕ ಭಾಗದಲ್ಲಿ ಅತಿವೃಷ್ಟಿಿಯಿಂದ ಹಾನಿಯಾದ ಬೆಳೆಗಳಿಗೆ ಸರ್ಕಾರ ಪ್ರತಿ ಎಕರೆಗೆ 25 ಸಾವಿರ, ನೀರಾವರಿ ಬೆಳೆ ಹಾನಿಗೆ 40 ಸಾವಿರ, ತೋಟಗಾರಿಕೆ ಬೆಳೆಗೆ 60 ಸಾವಿರ ಪರಿಹಾರ ನೀಡಬೇಕು, ಎಲ್ಲ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಕಾನೂನು ಜಾರಿ ಮಾಡಬೇಕು, ರೈತನ ಮಗನ ಮದುವೆ ಆಗುವ ಹೆಣ್ಣುಮಗಳಿಗೆ ಸರ್ಕಾರಿ ಕೆಲಸದಲ್ಲಿ ಶೇ.20ರಷ್ಟು ಮೀಸಲಾತಿ ನೀಡಬೇಕು,ದಲ್ಲಾಾಳಿಗಳು ರೈತರಿಂದ ಶೇ.10ರಷ್ಟು ಕಮಿಷನ್ ವಸೂಲಿ ನಿಲ್ಲಿಸಲು ಎನ್ಡಿಆರ್ಎ್ ನಿಯಮ ಬದಲಿಸಬೇಕು, ಪಂಪ್ಸೆಟ್ಗಳಿಗೆ ಹಗಲು 10 ಗಂಟೆ ವಿದ್ಯುತ್ ಪೂರೈಸಬೇಕು ಸೇರಿ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದೆ ಮಂಡಿಸಲು ಈ ಸಮಾವೇಶದಲ್ಲಿ ತೀರ್ಮಾನಿಸಿ ಒತ್ತಾಾಯಿಸುತ್ತೇವೆ ಎಂದರು.
ಸುದ್ದಿಗೋಷ್ಠಿಿಯಲ್ಲಿ ಸಂಗಮೇಶ ನಾಯಕ ಇದ್ದರು.
ಡಿ.23ರಂದು ಕಲಬುರಗಿಯಲ್ಲಿ ರಾಜ್ಯ ಮಟ್ಟದ ರೈತರ ಸಮಾವೇಶ – ಮಸ್ತಾನ್ ನಾಯಕ

