ಸುದ್ದಿಮೂಲ ವಾರ್ತೆ ಬೆಂಗಳೂರು, ಡಿ.19
ರಾಜ್ಯ ರಾಜಧಾನಿ ಬೆಂಗಳೂರು ಸಮೀಪ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಈಗ ಇರುವ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಾಣದ ಅನುಮತಿ ಅನುಮತಿ ಬೇಕೆನ್ನುವುದು ನಮ್ಮ ಗಮನದಲ್ಲಿ ಇದೆ. ಅನುಮತಿ ಪಡೆಯಲು 2033ರವರೆಗೂ ಕಾಲಾವಕಾಶವಿದೆ. ಹೀಗಾಗಿಯೇ, ದೂರದೃಷ್ಟಿಿ ಇಟ್ಟುಕೊಂಡು ಈಗಿನಿಂದಲೇ ಉಳಿದ ಕೆಲಸಗಳನ್ನು ನಾವು ಆರಂಭಿಸಿದ್ದೇವೆ ಎಂದು ಮೂಲಸೌಕರ್ಯ ಅಭಿವೃದ್ಧಿಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.
ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಾಣ ಕುರಿತು ಸಂಸತ್ ಅಧಿವೇಶನದಲ್ಲಿ ಪ್ರಸ್ತಾಾಪವಾಗಿರುವ ಹಿನ್ನೆೆಲೆಯಲ್ಲಿ ಅವರು ಪ್ರತಿಕ್ರಿಿಯಿಸಿದ್ದಾರೆ.
ಈ ವರದಿಯನ್ನು ಸರಕಾರಕ್ಕೆೆ ಸಲ್ಲಿಸಲು 5 ತಿಂಗಳ ಕಾಲಾವಕಾಶ ಕೊಡಲಾಗುವುದು. ಇದನ್ನು ಸಿದ್ಧಪಡಿಸುವಾಗ ಪ್ರಯಾಣಿಕರ ದಟ್ಟಣೆ, ಕೈಗಾರಿಕೆ ಮತ್ತು ಪ್ರವಾಸೋದ್ಯಮ ಬೆಳವಣಿಗೆಗೆ ಇರುವ ಅವಕಾಶ, ಮೂಲಸೌಕರ್ಯ, ಭೌಗೋಳಿಕ ಲಕ್ಷಣಗಳು, ಮಳೆಯ ಪ್ರಮಾಣ, ಒಳಚರಂಡಿ, ಶಬ್ದ ಮಾಲಿನ್ಯ, ತ್ಯಾಾಜ್ಯ ನಿರ್ವಹಣೆ ಮುಂತಾದ ಅಂಶಗಳನ್ನು ಪರಿಗಣಿಸಬೇಕಾಗುತ್ತದೆ. ಇದೇನೇ ಇದ್ದರೂ ಬೆಂಗಳೂರಿಗೆ ಮತ್ತೊೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಾಣದ ಅಗತ್ಯವಿದೆ ಎಂಬುದನ್ನು ಸರಕಾರ ಮನಗಂಡಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಕನಕಪುರ ರಸ್ತೆೆಯಲ್ಲಿರುವ ಚೂಡಹಳ್ಳಿಿ ಮತ್ತು ಸೋಮನಹಳ್ಳಿಿ ಹಾಗೂ ನೆಲಮಂಗಲ-ಕುಣಿಗಲ್ ರಸ್ತೆೆಯಲ್ಲಿ ಇರುವ ಮತ್ತೊೊಂದು ಸ್ಥಳವನ್ನು ಭಾರತೀಯ ವಿಮಾನ ನಿಲ್ದಾಾಣ ಪ್ರಾಾಧಿಕಾರದ ಉನ್ನತ ತಂಡ ಪರಿಶೀಲಿಸಿ, ತನ್ನ ವರದಿಯನ್ನು ನಮಗೆ ನೀಡಿದೆ. ಇದಾದ ನಂತರವೇ ಈಗ ಟೆಂಡರ್ ಆಹ್ವಾಾನಿಸಲಾಗಿದೆ ಎಂದು ಪಾಟೀಲ ಹೇಳಿದ್ದಾರೆ.

