ಸುದ್ದಿಮೂಲ ವಾರ್ತೆ ಬೆಂಗಳೂರು, ಡಿ.20
ದೇಶದ ಐಕ್ಯತೆ ಹಾಗೂ ಸ್ವಾತಂತ್ರ್ಯಕ್ಕೆೆ ಪ್ರಾಣ ತ್ಯಾಗ ಮಾಡಿದ ಮಹಾತ್ಮ ಗಾಂಧೀಜಿ ಅವರ ಹೆಸರನ್ನು ನಾಥೂರಾಮ್ ಗೋಡ್ಸೆೆ ಪಕ್ಷದವರು ತೆಗೆಯಲು ಮುಂದಾಗಿದ್ದಾರೆ. ಗಾಂಧಿ ಭಾರತವನ್ನು ಗೋಡ್ಸೆ ಭಾರತವನ್ನಾಾಗಿ ಮಾಡಲು ಕಾಂಗ್ರೆೆಸಿಗರು ಬಿಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಿಜೆಪಿಗೆ ಸಂದೇಶ ರವಾನಿಸಿದರು.
ಸ್ವಾಾತಂತ್ರ್ಯ ಉದ್ಯಾನದಲ್ಲಿ ಶನಿವಾರ ನಡೆದ ಸತ್ಯಮೇವ ಜಯತೆ ಪ್ರತಿಭಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ದೇಶದ ಸ್ವಾಾತಂತ್ರ್ಯದ ನಾಯಕತ್ವ ವಹಿಸಿದ ಮಹಾತ್ಮಾ ಗಾಂಧೀಜಿ ಅವರು ನೂರು ವರ್ಷಗಳ ಹಿಂದೆ ಕನ್ನಡ ನೆಲ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾಾನದ ಜವಾಬ್ದಾಾರಿ ವಹಿಸಿದರು. ಮಹಾತ್ಮಾ ಗಾಂಧೀಜಿ ಅವರ ಹೆಸರಿನಲ್ಲಿ ನಮ್ಮ ಸರ್ಕಾರ ಗ್ರಾಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಗೆ ತಂದಿತು ಎಂದರು.
ಈ ಯೋಜನೆಯಿಂದ ಗ್ರಾಮೀಣ ಭಾಗದಲ್ಲಿ ಭೂಮಿ ಮಟ್ಟ ಮಾಡಲು, ಕೊಟ್ಟಿಗೆ ನಿರ್ಮಾಣ, ಆಶ್ರಯಮನೆ ನಿರ್ಮಾಣ ಮಾಡಲು ಸರ್ಕಾರ ಕೂಲಿ ನೀಡುತ್ತದೆ. ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ಮನಮೋಹನ್ ಸಿಂಗ್ ಅವರು ಈ ಐತಿಹಾಸಿಕ ತೀರ್ಮಾನ ಕೈಗೊಂಡಿದ್ದಾರೆ. ಮಹಾತ್ಮಾಾ ಗಾಂಧೀಜಿ ಅವರ ಹೆಸರಿನಲ್ಲಿ ತಂದ ಈ ಯೋಜನೆಯಲ್ಲಿ ಈ ಸರ್ಕಾರ ಗಾಂಧೀಜಿ ಅವರ ಹೆಸರು ತೆಗೆಯುತ್ತಿದೆ. ಬಿಜೆಪಿಗೆ ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧಿ ಚಿತ್ರವನ್ನು ತೆಗೆಯಿರಿ. ಮಹಾತ್ಮಾ ಗಾಂಧಿ ಅವರ ಹೆಸರು ಅಜರಾಮರ ಎಂದು ತಿಳಿಸಿದರು.
ಬಿಜೆಪಿಗರು ಗಾಂಧಿ ಪ್ರತಿಮೆ ಮುಂದೆ ನಿಂತು ಹೋರಾಟ ಮಾಡುವ ಹಕ್ಕನ್ನು ಕಳೆದುಕೊಂಡಿದ್ದಾರೆ. ಹೀಗಾಗಿ ಬಿಜೆಪಿ ನಾಯಕರು ಹಾಗೂ ಶಾಸಕರು ಇನ್ನು ಮುಂದೆ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಮಾಡಬಾರದು. ಬಡವರಿಗೆ ಉದ್ಯೋೋಗ ನೀಡುವ ಯೋಜನೆಯ ಹೆಸರಿನಿಂದ ನೀವು ಗಾಂಧೀಜಿ ಅವರ ಹೆಸರು ತೆಗೆಯುತ್ತಿಿದ್ದೀರಿ ಎಂದರೆ ನೀವು ದೇಶದ್ರೋಹಿಗಳು. ಬೇರೆ ದೇಶದ ನಾಯಕರು ನಮ್ಮ ದೇಶಕ್ಕೆ ಬಂದರೆ ಮೊದಲು ಅವರು ಗಾಂಧಿ ಸಮಾಧಿಗೆ ಹೋಗಿ ಪೂಜೆ ಮಾಡುತ್ತಾಾರೆ. ಗಾಂಧಿ ಭಾವಚಿತ್ರಕ್ಕೆೆ ನಮಿಸುತ್ತಾರೆ. ಆದರೆ ಗಾಂಧಿ ಅವರ ಹೆಸರು ತೆಗೆಯುವ ಮೂಲಕ ಮತ್ತೊಮ್ಮೆ ಗಾಂಧಿ ಅವರನ್ನು ಕೊಲ್ಲುತ್ತಿದ್ದೀರಿ ಎಂದರು.
ಈ ದೇಶದ ಉಕ್ಕಿನ ಮಹಿಳೆ ಇಂದಿರಾ ಗಾಂಧಿ ಅವರು ಬ್ಯಾಾಂಕ್ ರಾಷ್ಟ್ರೀಕರಣ, ಉಳುವವನಿಗೆ ಭೂಮಿ, ಮನಮೋಹನ್ ಸಿಂಗ್ ಅವರು ಆಹಾರ ಭದ್ರತಾ ಕಾಯ್ದೆೆ ಜಾರಿಗೆ ತಂದರು. ರಾಜ್ಯದಲ್ಲಿ ಕಾಂಗ್ರೆೆಸ್ ಸರ್ಕಾರ ಮೋಟಮ್ಮ ಅವರ ನೇತೃತ್ವದಲ್ಲಿ ಸೀಶಕ್ತಿಿ ಸಂಘ ಪ್ರಾಾರಂಭಿಸಿದರು. ನಮ್ಮ ಈ ಯೋಜನೆಗಳನ್ನು ಬೇರೆ ಸರ್ಕಾರಗಳು ತೆಗೆದುಹಾಕಲು ಸಾಧ್ಯವಾಯಿತಾ ಇಲ್ಲ. ನಮ್ಮ ಐದು ಗ್ಯಾಾರಂಟಿಗಳನ್ನೂ ಕೂಡ ತೆಗೆದುಹಾಕಲು ಸಾಧ್ಯವಿಲ್ಲ. ಇದು ಕಾಂಗ್ರೆೆಸ್ ಸರ್ಕಾರಗಳ ಕಾರ್ಯಕ್ರಮ. ಅಮಿತ್ ಶಾ ಅವರು ಬಾಬಾ ಸಾಹೇಬ್ ಅಂಬೇರ್ಡ್ಕ ಅವರ ಹೆಸರು ಹೇಳುವುದನ್ನು ಟೀಕಿಸಿದ್ದರು. ಅದಕ್ಕೆೆ ನಾವು ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಮಾಡಿದೆವು ಎಂದರು.
ನ್ಯಾಾಷನಲ್ ಹೆರಾಲ್ಡ್ ಈ ದೇಶದ ಸ್ವಾಾತಂತ್ರ್ಯ ಹೋರಾಟದ ವೇಳೆ ಹುಟ್ಟಿಿಕೊಂಡ ಪತ್ರಿಿಕೆ. 1937ರಲ್ಲಿ ನೆಹರು ಅವರು ಈ ಪತ್ರಿಿಕೆ ಆರಂಭಿಸಿದರು. ಇದು ಕಾಂಗ್ರೆೆಸ್ ಪಕ್ಷದ ಆಸ್ತಿ. ಇದು ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರ ಆಸ್ತಿಿಯಲ್ಲ. ನಾನು ಕಾಂಗ್ರೆೆಸ್ ಪಕ್ಷದ ಅಧ್ಯಕ್ಷನಾಗಿದ್ದು, ಕೆಲವು ಸಂಸ್ಥೆೆಗಳ ಅಧ್ಯಕ್ಷನಾಗಿದ್ದು, ಆ ಸಂಸ್ಥೆೆಗಳ ಆಸ್ತಿಗಳೆಲ್ಲವೂ ನನ್ನ ವೈಯಕ್ತಿಿಕ ಆಸ್ತಿಿಯಾಗಲು ಸಾಧ್ಯವೇ. ನಾನು ಈ ಹುದ್ದೆಯಲ್ಲಿ ಇರುವವರೆಗೂ ಈ ಸಂಸ್ಥೆಗಳು ನನ್ನ ಜವಾಬ್ದಾಾರಿ, ನನ್ನ ನಂತರ ಎಐಸಿಸಿ ಅವರು ಈ ಸ್ಥಾಾನಕ್ಕೆ ಯಾರನ್ನು ಕೂರಿಸುತ್ತಾಾರೋ, ಅವರಿಗೆ ಈ ಸಂಸ್ಥೆೆಯ ಆಸ್ತಿಗಳ ಜವಾಬ್ದಾಾರಿ ಹೋಗುತ್ತದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೋತಿಲಾಲ್ ವೋಹ್ರಾ ಆಸ್ಕರ್ ರ್ನಾಂಡೀಸ್ ಅವರ ಹೆಸರಿನಲ್ಲಿ ಸ್ವಲ್ಪ ಷೇರುಗಳನ್ನು ನೀಡಲಾಗಿತ್ತು. ಅದಕ್ಕೆ ಇವರ ಮೇಲೆ ಪಿಎಂಎಲ್ಎ ಪ್ರಕರಣ ದಾಖಲಿಸಿ ಕೊಡಬಾರದ ಕಿರುಕುಳ ನೀಡುತ್ತಿದ್ದಾರೆ ಎಂದು ಹೇಳಿದರು.
ಮೊನ್ನೆ ಹೊಸದಾಗಿ ನನ್ನ ವಿರುದ್ಧ ಹೊಸದಾಗಿ ಎ್ಐಆರ್ ದಾಖಲಿಸಿ ನೋಟೀಸ್ ನೀಡಿದ್ದಾರೆ. ಅವರ ವಿಚಾರಣೆಗೆ ಹಾಜರಾಗಲು ನಾನು ದೆಹಲಿಗೆ ತೆರಳುತ್ತಿಿದ್ದೇನೆ. ಅವರಿಗೆ ಎ್ಐಆರ್ ಪ್ರತಿ ನೀಡುವಂತೆ ಕೇಳಿದ್ದೇನೆ ಎಂದರು.

