ಸುದ್ದಿಮೂಲ ವಾರ್ತೆ ರಾಯಚೂರು, ಡಿ.20
2026ರ ಜನವರಿಯಲ್ಲಿ ರಾಯಚೂರು ಉತ್ಸವ ಕಾರ್ಯಕ್ರ ಹಮ್ಮಿಿಕೊಳ್ಳಲಾಗಿದ್ದು, ಈ ಉತ್ಸವದ ಸಿದ್ಧತೆಗಾಗಿ ಜಿಲ್ಲಾಧಿಕಾರಿ ನಿತೀಶ್ ಕೆ. ಅವರ ಅಧ್ಯಕ್ಷತೆಯಲ್ಲಿ ಡಿಸೆಂಬರ್ 22ರ ಬೆಳಿಗ್ಗೆೆ 10.30ಕ್ಕೆೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ. ಈ ಸಭೆಗೆ ಜಿಲ್ಲೆಯ ಎಲ್ಲಾ ಅಧಿಕಾರಿ, ಸಿಬ್ಬಂದಿ ಖುದ್ದಾಗಿ ಹಾಜರಾಗುವಂತೆ ಅಪರ ಜಿಲ್ಲಾಧಿಕಾರಿ ಶಿವಾನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

