ಸುದ್ದಿಮೂಲ ವಾರ್ತೆ ಕಲಬುರಗಿ, ಡಿ.22:
ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ತಿಂಗಳಿಗೆ 30 ಹೆರಿಗೆ ಮಾಡಿಸದೇ ಹೋದಲ್ಲಿ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿಿರುವ ಸೀ ರೋಗ ತಜ್ಞರು, ಅರವಳಿಕೆ ತಜ್ಞರು ಹಾಗೂ ಮಕ್ಕಳು ತಜ್ಞರನ್ನು ವರ್ಗಾವಣೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರ ಹೊರಡಿಸಿರುವ ಸುತ್ತೋೋಲೆಯನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಬಿಜೆಪಿ ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್ ಆಗ್ರಹಿಸಿದರು.
ನಗರದ ಪತ್ರಿಿಕಾ ಭವನದಲ್ಲಿ ಸುದ್ದಿಗೋಷ್ಠಿಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಗಾಣಗಾಪುರ, ಗಡಿಕೇಶ್ವರ, ಗುಂಡಗೂರತಿ, ಹೆಬ್ಬಾಾಳ, ಮಳಖೇಡ ಮಾದನ ಹಿಪ್ಪರಗಿ, ವಾಡಿ, ಯಡ್ರಾಾಮಿ ಸೇರಿದಂತೆ ಜಿಲ್ಲೆಯಾದ್ಯಂತ ಒಟ್ಟು 16 (ಸಿ.ಹೆಚ್.ಸಿ) ಸಮುದಾಯ ಆರೋಗ್ಯ ಕೇಂದ್ರಗಳು ಕಾರ್ಯ ನಿರ್ವಹಣೆ ಮಾಡುತ್ತಿಿದ್ದು, ಈ ಕೇಂದ್ರಗಳಲ್ಲಿ ಎಲ್ಲಿಯೂ ಕೂಡ ತಿಂಗಳಿಗೆ 30 ಹೆರಿಗೆಗಳು ಆಗುವುದಿಲ್ಲ. ಹೀಗಾಗಿ 30 ಹೆರಿಗೆ ಮಾಡಿಸದೇ ಹೋದಲ್ಲಿ ಅಲ್ಲಿನ ಸಿಬ್ಬಂದಿಗೆ ವರ್ಗಾವಣೆ ಮಾಡುವ ಮೂಲಕ ಸಮುದಾಯ ಆರೋಗ್ಯ ಕೇಂದ್ರ ಮುಚ್ಚಿಿಸುವ ಪ್ರಯತ್ನ ಸರ್ಕಾರದ ಸುತ್ತೋೋಲೆಯಲ್ಲಿದೆ ಎಂದು ಹೇಳಿದರು.
ಜಿಲ್ಲೆಯನ್ನು ಹೆಲ್ತ್ ಹಬ್ ಮಾಡಲು ಹೊರಟಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಿಯಾಂಕ್ ಖರ್ಗೆ ಇತ್ತ ಗಮನ ಹರಿಸಿ, ಸಮುದಾಯ ಆರೋಗ್ಯ ಕೇಂದ್ರವನ್ನು ಮೊದಲು ಉಳಿಸಬೇಕು, ಇಲ್ಲವಾದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಿಯಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ, ಶಾಸಕ ಬಸವರಾಜ ಮತ್ತಿಿಮಡು, ಎಂಎಲ್ಸಿಿ ಶಶೀಲ್ ನಮೋಶಿ, ಜಿಲ್ಲಾಧ್ಯಕ್ಷ ಅಶೋಕ್ ಬಗಲಿ, ಶಿವರಾಜ ಪಾಟೀಲ್ ಸೇರಿ ಮತ್ತಿಿತರರು ಇದ್ದರು.
ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ತಿಂಗಳಿಗೆ 30 ಹೆರಿಗೆ ಗುರಿ

