ಸುದ್ದಿಮೂಲ ವಾರ್ತೆ ಬೆಂಗಳೂರು, ಡಿ.22:
ಚಿನ್ನಸ್ವಾಾಮಿ ಕ್ರೀೆಡಾಂಗಣದಲ್ಲಿ ರದ್ದಾಗಿರುವ ಕ್ರಿಿಕೆಟ್ ಪಂದ್ಯಾಾವಳಿಗಳನ್ನು ಮತ್ತೆೆ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು.
ವಿಧಾನಸೌಧದ ಉಪಸಮಿತಿ ಕೊಠಡಿಯಲ್ಲಿ ಸೋಮವಾರ ಕರ್ನಾಟಕ ರಾಜ್ಯ ಕ್ರಿಿಕೆಟ್ ಸಂಸ್ಥೆೆಯ ಪದಾಧಿಕಾರಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಿ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಡಿಸೆಂರ್ಬ 24ರಂದು ಕೆಎಸ್ಸಿಎ ವಿಜಯ್ ಹಜಾರೆ ಅವರು ಕ್ರಿಿಕೆಟ್ ಪಂದ್ಯ ನಡೆಸಲು ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ. ಸಾರ್ವಜನಿಕರ ವೀಕ್ಷಣೆಗೆ ಅವಕಾಶ ನೀಡುವುದಿಲ್ಲ. ಕೇವಲ ಪಂದ್ಯ ಮಾತ್ರ ನಡೆಸುತ್ತೇವೆ ಎಂದು ಕೆಎಸ್ಸಿಎ ಅವರು ಕೇಳಿದ್ದಾರೆ ಎಂದರು.
ಕ್ರೀೆಡಾಪಟುಗಳ ಸುರಕ್ಷತೆಯೆ ಹಿತದೃಷ್ಟಿಿಯಿಂದ ಜಿಬಿಎ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರು, ಲೋಕೋಪಯೋಗಿ, ಅಗ್ನಿಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆ, ಆರೋಗ್ಯ ಇಲಾಖೆಯನ್ನೊೊಳಗೊಂಡ ಸಮಿತಿಯು ಮಧ್ಯಾಾಹ್ನ 3 ಗಂಟೆಗೆ ಚಿನ್ನಸ್ವಾಾಮಿ ಸ್ಟೇಡಿಯಂಗೆ ಭೇಟಿ ನೀಡಿ, ಪರಿಶೀಲಿಸಿ ಸರ್ಕಾರಕ್ಕೆೆ ವರದಿ ನೀಡಲಿದೆ. ಸಮಿತಿ ನೀಡುವ ವರದಿ ಆಧರಿಸಿ, ಸರ್ಕಾರ ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.
ಈಗಾಗಲೇ ಬೆಂಗಳೂರು ನಗರ ಪೊಲೀಸ್ ಆಯುಕ್ತರು 17 ಅಂಶಗಳ ಸಲಹೆ ಸೂಚನೆಗಳನ್ನು ಪಾಲಿಸುವುದು ಅಗತ್ಯ ಎಂದು ಸೂಚಿಸಿ ಪತ್ರ ಬರೆದಿದ್ದರು. ಅದರಲ್ಲಿ ಏನೆಲ್ಲ ಪೂರ್ಣಗೊಳಿಸಿದ್ದಾರೆ ಎಂಬುದನ್ನು ಪರಿಶೀಲಿಸಿ, ಇಂದು ಸಂಜೆ 5 ಗಂಟೆಯೊಳಗೆ ಸಮಿತಿಯು ಸರ್ಕಾರಕ್ಕೆೆ ತಿಳಿಸಲಿದೆ. ಕೆಲ ದಿನಗಳ ಹಿಂದೆಯಷ್ಟೇ ಕೆಎಸ್ಸಿಿಎ ಹೊಸ ಸಮಿತಿ ರಚನೆಯಾಗಿದೆ. ಎಲ್ಲವನ್ನು ಪೂರ್ಣಗೊಳಿಸುವುದಾಗಿ ಕೆಎಸ್ಸಿಎ ಅವರು ಹೇಳಿದ್ದಾರೆ ಎಂದು ಸಚಿವರು ತಿಳಿಸಿದರು.
ಕೆಎಸ್ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ತುರ್ಷಾ ಗಿರಿನಾಥ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ, ಗೃಹ ಇಲಾಖೆಯ ಕಾರ್ಯದರ್ಶಿ ಕೆ.ವಿ.ಶರತ್ ಚಂದ್ರ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಾಂತ್ ಕುಮಾರ್ ಸಿಂಗ್, ಎಡಿಜಿಪಿ ಆರ್.ಹಿತೇಂದ್ರ ಹಾಗೂ ಕೆಎಸ್ಸಿಎ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿಿತರಿದ್ದರು.
ಆರ್ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ದುರಂತದ ಹಿನ್ನೆೆಲೆಯಲ್ಲಿ ನಗರದ ಚಿನ್ನಸ್ವಾಾಮಿ ಕ್ರೀೆಡಾಂಗಣದಲ್ಲಿ ಅಂತಾರಾಷ್ಟ್ರೀಯ ಕ್ರಿಿಕೆಟ್ ಪಂದ್ಯಗಳಿಗೆ ನಿರ್ಬಂಧ ಹೇರಲಾಗಿತ್ತು. ಬಳಿಕ ಡಿ.12 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಕೆಲ್ ಡಿಕುನ್ಹಾಾ ವಿಚಾರಣಾ ಆಯೋಗದ ಮಾರ್ಗಸೂಚಿಯನ್ವಯ ಚಿನ್ನಸ್ವಾಾಮಿ ಸ್ಟೇಡಿಯಂನಲ್ಲಿ ಕ್ರಿಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಒಮ್ಮತದ ಅಭಿಪ್ರಾಾಯ ಕೇಳಿಬಂದಿತ್ತು.
ಕೆಎಸ್ಸಿಎ ಆಡಳಿತ ಮಂಡಳಿ, ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ಚಿನ್ನಸ್ವಾಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾಾವಳಿ ಕುರಿತು ಪರಿಶೀಲನೆಗೆ ಸಮಿತಿ ರಚನೆ

