ಸುದ್ದಿಮೂಲ ವಾರ್ತೆ ರಾಯಚೂರು, ಡಿ.24:
ಕರ್ನಾಟಕ ಕಾರ್ಯನಿರತ ಪರ್ತ್ರಕರ್ತರ ಸಂಘದ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಗರದ ಕನ್ನಡ ಭವನದಲ್ಲಿ ಡಿ.25ರ ಸಂಜೆ 4 ಗಂಟೆಗೆ ಆಯೋಜಿಸಲಾಗಿದೆ.
ಸಂಘದ ರಾಜ್ಯಾಾಧ್ಯಕ್ಷ ಶಿವಾನಂದ ತಗಡೂರು ಕಾರ್ಯಕ್ರಮ ಉದ್ಘಾಾಟಿಸಲಿದ್ದು ಪ್ರಧಾನ ಕಾರ್ಯದರ್ಶಿ ಜೆ.ಸಿ.ಲೋಕೇಶ ಜಿಲ್ಲಾ ಮತ್ತು ತಾಲೂಕು ಘಟಕಗಳ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧನೆ ಮಾಡುವರು. ಜಿಲ್ಲಾಾಧ್ಯಕ್ಷ ಆರ್.ಗುರುನಾಥ ಅಧ್ಯಕ್ಷತೆ ವಹಿಸಲಿದ್ದಾಾರೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ಧಯ್ಯಸ್ವಾಾಮಿ ಕುಕನೂರು ತಿಳಿಸಿದ್ದಾಾರೆ.

