ಸುದ್ದಿಮೂಲ ವಾರ್ತೆ ಬೆಂಗಳೂರು, ಡಿ.26
ಕೆಎಸ್ಡಿಎಲ್ ಮತ್ತು ಕೃಷಿ ಮಾರಾಟ ಇಲಾಖೆಯ ವಿವಿಧ ಹುದ್ದೆಗಳಿಗೆ ಜನವರಿ 10 ಮತ್ತು 12ರ ಬದಲಿಗೆ ಜನವರಿ 18ರಂದು ಲಿಖಿತ ಪರೀಕ್ಷೆ ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಕೃಷಿ ಮಾರಾಟ ಇಲಾಖೆಯ ಮಾರುಕಟ್ಟೆೆ ಮೇಲ್ವಿಿಚಾರಕ ಹುದ್ದೆಗೆ ಜನವರಿ 10ರಂದು ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಲಿಮಿಟೆಡ್ ನ ಕಿರಿಯ ಅಧಿಕಾರಿ (ಉತ್ಪಾಾದನೆ ಮತ್ತು ನಿರ್ವಹಣೆ), ಕಿರಿಯ ಅಧಿಕಾರಿ (ಸಾಮಗ್ರಿ ಮತ್ತು ಉಗ್ರಾಾಣ) ಹುದ್ದೆಗಳಿಗೆ ಜ.12ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಕೆಲವು ತಾಂತ್ರಿಿಕ ಕಾರಣಗಳಿಂದಾಗಿ ಈ ದಿನಾಂಕಗಳ ಬದಲಿಗೆ ಜ.18 ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಉಳಿದಂತೆ ಜ.19ರ ವೇಳಾಪಟ್ಟಿಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಹೆಚ್ಚಿಿನ ವಿವರಗಳಿಗೆ ಕೆಇಎ ವೆಬ್ ಸೈಟ್ ನೋಡಲು ಅವರು ಕೋರಿದ್ದಾರೆ.
ಕೆಪಿಸಿಎಲ್: 622 ಹುದ್ದೆಗೆ ಮರು ಪರೀಕ್ಷೆ
ಕರ್ನಾಟಕ ವಿದ್ಯುತ್ ನಿಗಮದ (ಕೆಪಿಸಿಎಲ್) ಒಟ್ಟು 622 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಾಧಿಕಾರವು ಡಿ.27 ಮತ್ತು 28ರಂದು ನಗರದಲ್ಲಿ ಮರು ಪರೀಕ್ಷೆ ನಡೆಸುತ್ತಿಿದ್ದು, ಬಿಗಿ ಕ್ರಮಗಳನ್ನು ಕೈಗೊಂಡಿದೆ.
ಸುಪ್ರೀೀಂ ಕೋರ್ಟ್ ಆದೇಶದ ಮೇರೆಗೆ ಈ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲಾಗುತ್ತಿಿದೆ ಎಂದು ಪ್ರಾಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಕೆಮಿಕಲ್ ಸೂಪರ್ ವೈಸರ್, ವಿವಿಧ ವಿಭಾಗಗಳ ಸಹಾಯಕ ಎಂಜಿನಿರ್ಯ ಗಳ ನೇಮಕಕ್ಕೆ ಬೆಂಗಳೂರಿನ 17 ಕೇಂದ್ರಗಳಲ್ಲಿ ಡಿ.27ರಂದು ಲಿಖಿತ ಪರೀಕ್ಷೆ ನಡೆಯಲಿದೆ. ಒಟ್ಟು 8,622 ಮಂದಿ ಪರೀಕ್ಷೆ ಬರೆಯಲು ಅರ್ಹತೆ ಪಡೆದಿದ್ದಾರೆ ಎಂದು ವಿವರಿಸಿದ್ದಾರೆ.
ಡಿ.28ರಂದು ಕೆಮಿಸ್ಟ್, ವಿವಿಧ ವಿಭಾಗಗಳ ಕಿರಿಯ ಎಂಜಿನಿಯರ್ ಹುದ್ದೆಗಳಿಗೆ ಬೆಂಗಳೂರಿನ 21 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟು 10,136 ಮಂದಿ ಪರೀಕ್ಷೆ ಬರೆಯಲಿದ್ದಾರೆ. ಡಿ.28ರಂದು ಕನ್ನಡ ಭಾಷಾ ಪರೀಕ್ಷೆ ಕೂಡ ನಡೆಯಲಿದೆ ಎಂದು ಅವರು ಹೇಳಿದರು.

