ಸುದ್ದಿಮೂಲ ವಾರ್ತೆ ಬೆಂಗಳೂರು, ಡಿ.27:
’ಮುಸ್ಲಿಿಂ ವಸತಿಗಳನ್ನು ನೆಲಸಮ ಮಾಡಿರುವುದು ತುಂಬಾ ದುಃಖಕರ ವಿಚಾರ. ಉತ್ತರ ಪ್ರದೇಶದಂತೆ ಕರ್ನಾಟಕವೂ ಬುಲ್ಡೋೋಜರ್ ರಾಜ್ಯವಾಗುತ್ತಿಿದೆ’ ಎಂದು ಕೇರಳ ಮುಖ್ಯಮಂತ್ರಿಿ ಪಿಣರಾಯಿ ವಿಜಯನ್ ಹೇಳಿಕೆ ನೀಡಿದ್ದಾರೆ. ಮತ್ತೊೊಂದೆಡೆ ಈ ಹೇಳಿಕೆಯನ್ನು ಮುಖ್ಯಮಂತ್ರಿಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಿ ಡಿ.ಕೆ. ಶಿವಕುಮಾರ್ತೀಕ್ಷಣವಾಗಿ ಖಂಡಿಸಿದ್ದಾರೆ.
‘ಬೆಂಗಳೂರಿನ ಯಲಹಂಕದ ಕೋಗಿಲು ಗ್ರಾಾಮದ ಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್ನಲ್ಲಿರುವ ಮುಸ್ಲಿಿಂರ ಮನೆಗಳನ್ನು ನೆಲಸಮ ಮಾಡಿರುವುದು ತುಂಬಾ ದುಃಖಕರ ವಿಚಾರ. ಅಲ್ಲಿ ಮುಸ್ಲಿಿಂ ಕುಟುಂಬಗಳು ಹಲವು ವರ್ಷಗಳಿಂದ ವಾಸಿಸುತ್ತಿಿದ್ದವು. ಇದೀಗ ಏಕಾಏಕಿ ಈ ಚಳಿಗಾಲದಲ್ಲಿ ಮನೆಗಳನ್ನು ನೆಲಸಮ ಮಾಡಿದರೆ ಅವರು ಎಲ್ಲಿಗೆ ಹೋಗಬೇಕು. ಈ ಚಳಿಯಲ್ಲಿ ಮಕ್ಕಳು, ಮಹಿಳೆಯರನ್ನು ಬೀದಿಗೆ ಹಾಕಿದ್ದಾರೆ,’ ಎಂದು ಪಿಣರಾಯಿ ವಿಜಯನ್ ಅವರು ಸಾಮಾಜಿಕ ಮಾಧ್ಯಮಗಳ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.
‘ಬೆಂಗಳೂರಿನ ಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್ನಲ್ಲಿ ವರ್ಷಗಳಿಂದ ವಾಸಿಸುತ್ತಿಿದ್ದ ಮುಸ್ಲಿಿಂ ಕುಟುಂಬಗಳನ್ನು ಬೀದಿಗೆ ಹಾಕಿ, ಬುಲ್ಡೋೋಜರ್ ರಾಜ್ ಕ್ರಮವನ್ನು ಕರ್ನಾಟಕ ಕಾಂಗ್ರೆೆಸ್ ಸರ್ಕಾರ ಅನುಸರಿಸುತ್ತಿಿದೆ’ ಎಂದು ಮುಖ್ಯಮಂತ್ರಿಿ ಪಿಣರಾಯಿ ವಿಜಯನ್ ’ಎಕ್ಸ್’ ಮೂಲಕ ಆಕ್ರೋೋಶ ತೋಡಿಕೊಂಡಿದ್ದಾರೆ.
ದುಃಖಕರ ವಿಚಾರವೆಂದರೆ ಸಂಘ ಪರಿವಾರದ ಅಲ್ಪಸಂಖ್ಯಾಾತ ವಿರೋಧಿ ರಾಜಕೀಯವನ್ನು ಈಗ ಕರ್ನಾಟಕದ ಕಾಂಗ್ರೆೆಸ್ ಸರ್ಕಾರ ಕೂಡ ಮಾಡುತ್ತಿಿದೆ. ಭಯ ಮತ್ತು ಕ್ರೂರತೆಯ ಬಲದ ಮೂಲಕ ಆಡಳಿತ ನಡೆಸುವಾಗ, ಸಾಂವಿಧಾನಿಕ ಮೌಲ್ಯಗಳು ಮತ್ತು ಮಾನವ ಘನತೆಯು ಮೊದಲ ಬಲಿಪಶುಗಳಾಗುತ್ತವೆ. ಈ ಮೋಸದ ಪ್ರವೃತ್ತಿಿ ವಿರೋಧಿಸಲು ಮತ್ತು ಸೋಲಿಸಲು ಎಲ್ಲಾ ಜಾತ್ಯತೀತ ಮತ್ತು ಪ್ರಜಾಪ್ರಭುತ್ವ ಶಕ್ತಿಿಗಳು ಒಟ್ಟಾಾಗಿ ಒಟ್ಟುಗೂಡಬೇಕು ಎಂದು ಪಿಣರಾಯಿ ಹೇಳಿದ್ದಾರೆ.
ಕೇರಳ ಸಿಎಂ ಹೇಳಿಕೆಗೆ ಖಂಡನೆ:
ಸತ್ಯಾಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಅವರು ರಾಜ್ಯದ ವಿಚಾರದಲ್ಲಿ ಹಸ್ತಕ್ಷೇಪ ಮಾಡಬಾರದು. ಚುನಾವಣೆ ಸಮಯದಲ್ಲಿ ರಾಜಕೀಯ ಗಿಮಿಕ್ ಮಾಡುತ್ತಿಿದ್ದಾರೆ. ಲ್ಯಾಾಂಡ್ ಮಾಫಿಯಾದವರು ಏಕಾಏಕಿ ಒತ್ತುವರಿ ಮಾಡಿ ಸ್ಲಂ ನಿರ್ಮಾಣ ಮಾಡಲು ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿಿ ಡಿ.ಕೆ. ಶಿವಕುಮಾರ್ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಿಗೆ ತೀಕ್ಷ್ಣ ತಿರುಗೇಟು ನೀಡಿದ್ದಾರೆ.
ಡಿಸಿಎಂ ಡಿ.ಕೆ. ಶಿವಕುಮಾರ್
ಸದಾಶಿವನಗರ ನಿವಾಸದ ಬಳಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಿಣರಾಯಿ ವಿಜಯನ್ರಂತಹ ಹಿರಿಯ ನಾಯಕರು ಸತ್ಯಾಾಸತ್ಯತೆ ಅರಿಯದೇ ಮಾತನಾಡಿರುವುದು ದುರಾದೃಷ್ಟಕರ. ಬೆಂಗಳೂರಿನ ವಿಚಾರ ಏನು ಎಂದು ಅವರು ತಿಳಿಯಬೇಕು. ಈ ಜಾಗ ಘನತ್ಯಾಾಜ್ಯ ವಿಲೇವಾರಿ ಮಾಡುವ ಕ್ವಾಾರಿ ಪಿಟ್ ಆಗಿದೆ. ಈ ಪ್ರದೇಶದಲ್ಲಿ ಅನೇಕ ಆರೋಗ್ಯ ಸಂಬಂಧಿತ ಸಮಸ್ಯೆೆಗಳಿವೆ. ಕೆಲವರು ಕಾನೂನು ಬಾಹಿರವಾಗಿ ಆ ಜಾಗ ಅತಿಕ್ರಮಣ ಮಾಡಿದ್ದಾರೆ. ನಮಗೂ ಮಾನವೀಯತೆ ಇದೆ. ಅವರಿಗೆ ಬೇರೆ ಜಾಗಗಳಿಗೆ ಹೋಗಲು ಸರ್ಕಾರ ಹಾಗೂ ಸ್ಥಳೀಯ ಶಾಸಕರು ಅವಕಾಶ ನೀಡಿದ್ದೆವು ಎಂದು ಹೇಳಿದ್ದಾರೆ.
ಅಲ್ಲಿದ್ದವರ ಪೈಕಿ ಕೆಲವರು ಮಾತ್ರ ಸ್ಥಳೀಯರಾಗಿದ್ದು ಉಳಿದವರು ಏಕಾಏಕಿ ಅತಿಕ್ರಮಣ ಮಾಡಿದ್ದಾರೆ. ಇದು ಘನತ್ಯಾಾಜ್ಯ ವಿಲೇವಾರಿ ಘಟಕವಾಗಿದ್ದು 9 ವರ್ಷಗಳ ಹಿಂದೆಯೇ ಅಧಿಸೂಚನೆ ಹೊರಡಿಸಲಾಗಿದೆ. ನಮಗೆ ಬೆಂಗಳೂರು ಬಗ್ಗೆೆ ಚೆನ್ನಾಾಗಿ ಗೊತ್ತಿಿದೆ. ಲ್ಯಾಾಂಡ್ ಮಾಫಿಯಾದವರು ಸ್ಲಂಗಳನ್ನು ನಿರ್ಮಿಸಲು ನಾವು ಬಿಡುವುದಿಲ್ಲ. ನಾವು ನಮ್ಮ ಭೂಮಿಯನ್ನು ರಕ್ಷಣೆ ಮಾಡಿಕೊಳ್ಳುತ್ತೇವೆ. ಅವರಲ್ಲಿ ಯಾರೆಲ್ಲಾ ಅರ್ಹರಿದ್ದಾರೆ, ಅವರಿಗೆ ರಾಜೀವ್ ಗಾಂಧಿ ಯೋಜನೆಯಲ್ಲಿ ಮನೆಗಳನ್ನು ನೀಡಲು ಬದ್ಧವಾಗಿದ್ದೇವೆ ಎಂದು ತಿಳಿಸಿದರು.
ಪ್ರಕರಣದ ಸತ್ಯಾಾಸತ್ಯತೆ ತಿಳಿಯದೇ ಪಿಣರಾಯಿ ಅವರು ಈ ರೀತಿ ಮಾತನಾಡಬಾರದು ಎಂದು ಮನವಿ ಮಾಡುತ್ತೇನೆ. ಬುಲ್ಡೋೋಜರ್ ಸಂಸ್ಕೃತಿ ನಮ್ಮಲ್ಲಿ ಇಲ್ಲ. ನಗರದ ಹೃದಯ ಭಾಗದಲ್ಲಿರುವ ಸರ್ಕಾರಿ ಜಮೀನನ್ನು ರಕ್ಷಣೆ ಮಾಡಿಕೊಳ್ಳಲಾಗಿದೆ. ತ್ಯಾಾಜ್ಯ ವಿಲೇವಾರಿ ಘಟಕಕ್ಕೆೆ ನಿಗದಿಯಾಗಿರುವ ಜಾಗವನ್ನು ಒತ್ತುವರಿ ಮಾಡಿಕೊಳ್ಳಲು ಬಿಡುವುದಿಲ್ಲ. ಈ ಬಗ್ಗೆೆ ನಮ್ಮ ಪಕ್ಷ ಹಾಗೂ ಕೇರಳದ ನಾಯಕರಿಗೆ ವರದಿ ರವಾನೆ ಮಾಡುತ್ತೇನೆ ಎಂದರು.
ಪಿಣರಾಯಿ ಅವರ ಹೇಳಿಕೆ ಬೆನ್ನಲ್ಲೇ ಕೆಲವರು ಪ್ರತಿಭಟನೆ ಮಾಡುತ್ತಿಿದ್ದಾರೆ ಎಂದು ಕೇಳಿದಾಗ, ‘ಇದೆಲ್ಲವೂ ರಾಜಕೀಯ ಹೇಳಿಕೆ ಹಾಗೂ ರಾಜಕೀಯ ಪ್ರೇೇರಿತ ಪ್ರತಿಭಟನೆಗಳು. ಸತ್ಯಾಾಸತ್ಯತೆ ಅರಿಯದೇ ನಮ್ಮ ರಾಜ್ಯದ ವಿಚಾರದಲ್ಲಿ ಹಸ್ತಕ್ಷೇಪ ಮಾಡಬಾರದು. ಚುನಾವಣೆ ಸಮಯದಲ್ಲಿ ಇಂತಹ ರಾಜಕೀಯ ಗಿಮಿಕ್ ಮಾಡುತ್ತಿಿದ್ದಾರೆ’ ಎಂದರು.
ನಿರಾಶ್ರಿತರಿಗೆ ಪರ್ಯಾಯ ವ್ಯವಸ್ಥೆೆ: ಸಿಎಂ
‘ಬೆಂಗಳೂರಿನ ಯಲಹಂಕದ ಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್ ಪ್ರದೇಶ ತ್ಯಾಾಜ್ಯ ನಿರ್ವಹಣೆಗೆ ಸಂಬಂಧಿಸಿದ ಪ್ರದೇಶವಾಗಿದ್ದು, ಅದು ಜನವಸತಿಗೆ ಸೂಕ್ತವಾದ ಪ್ರದೇಶವಲ್ಲ. ಆದ್ದರಿಂದ ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನೆಲೆಸಿದ್ದವರಿಗೆ ನೋಟೀಸ್ ನೀಡಿ ತೆರವುಗೊಳಿಸಲು ಸೂಚನೆ ನೀಡಲಾಗಿತ್ತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಸರ್ಕಾರದ ಸೂಚನೆಗೆ ಮಣಿಯದೇ ಇದ್ದ ಕಾರಣ, ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಬಹುತೇಕ ಜನರು ವಲಸಿಗರಾಗಿದ್ದು, ಮಾನವೀಯತೆಯ ದೃಷ್ಟಿಿಯಿಂದ ನಿರಾಶ್ರಿತರಿಗೆ ಉಳಿದುಕೊಳ್ಳಲು ಪರ್ಯಾಯ ವ್ಯವಸ್ಥೆೆ ಇಲಾಖೆಯ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ಸೂಚಿಸಲಾಗಿದೆ ಎಂದರು.

