ಸುದ್ದಿಮೂಲ ವಾರ್ತೆ ನವದೆಹಲಿ, ಡಿ.29:
ಉನ್ನಾಾವೋ ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್ ಸಿಂಗ್ ಸಿಂಗಾರ್ಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ ಷರತ್ತುಬದ್ಧ ಜಾಮೀನು ನೀಡಿದ್ದ ದೆಹಲಿ ಹೈಕೋರ್ಟ್ ಆದೇಶಕ್ಕೆೆ ಸುಪ್ರೀೀಂ ಕೋರ್ಟ್ ಸೋಮವಾರ ತಡೆ ನೀಡಿದೆ.
ಹೈಕೋರ್ಟ್ ಆದೇಶ ಪ್ರಶ್ನಿಿಸಿ ಕೇಂದ್ರೀೀಯ ತನಿಖಾ ದಳ (ಸಿಬಿಐ) ಹಾಗೂ ವಕೀಲರಾದ ಅಂಜಲಿ ಪಟೇಲ್, ಪೂಜಾ ಶಿಲ್ಪಕರ್ ಅವರು ಮೇಲ್ಮನವಿ ಸಲ್ಲಿಸಿದ್ದರು.
ಮುಖ್ಯ ನ್ಯಾಾಯಮೂರ್ತಿ ಸೂರ್ಯಕಾಂತ ಮತ್ತು ನ್ಯಾಾಯಮೂರ್ತಿಗಳಾದ ಜಿ.ಕೆ. ಮಹೇಶ್ವರಿ ಹಾಗೂ ಅಗಸ್ಟಿಿನ್ ಜಾರ್ಜ್ ಮಸೀಹ್ ಅವರನ್ನು ಒಳಗೊಂಡ ಪೀಠ, ಹೈಕೋರ್ಟ್ ಆದೇಶದ ವಿರುದ್ಧ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಗೆ ಸಂಬಂಧಿಸಿದಂತೆ ಸೆಂಗಾರ್ಗೆ ನೋಟಿಸ್ ನೀಡಿದೆ.
2017ರಲ್ಲಿ ನಡೆದ ಅತ್ಯಾಾಚಾರ ಪ್ರಕರಣಕ್ಕೆೆ ಸಂಬಂಧಿಸಿದಂತೆ ದೆಹಲಿಯ ವಿಚಾರಣಾ ಕೋರ್ಟ್ 2019ರಲ್ಲಿ ಸೆಂಗರ್ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.
ಶಿಕ್ಷೆ ಪ್ರಶ್ನಿಿಸಿ ಸೆಂಗರ್ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್ ಅರ್ಜಿ ಇತ್ಯರ್ಥವಾಗುವವರೆಗೆ ಶಿಕ್ಷೆಯನ್ನು ಅಮಾನತಿನಲ್ಲಿರಿಸಿ ಡಿಸೆಂಬರ್ 23ರಂದು ಷರತ್ತುಬದ್ಧ ಜಾಮೀನು ನೀಡಿತ್ತು.
ಅತ್ಯಾಾಚಾರ ಪ್ರಕರಣದಲ್ಲಿ ಶಿಕ್ಷೆ ಅಮಾನತುಗೊಂಡಿದ್ದರೂ ಸಂತ್ರಸ್ತೆೆ ತಂದೆಯ ಕಸ್ಟಡಿ ಸಾವು ಪ್ರಕರಣದಲ್ಲಿ ಸೆಂಗರ್ಗೆ 10 ವರ್ಷಗಳ ಶಿಕ್ಷೆಯಾಗಿದೆ. ಹೀಗಾಗಿ ಅವರು ಜೈಲಿನಲ್ಲೇ ಇರುತ್ತಾಾರೆ ಎಂದು ದೆಹಲಿ ಹೈಕೋರ್ಟ್ ಹೇಳಿತ್ತು.
ಸೆಂಗರ್ಗೆ ವಿಧಿಸಿದ್ದ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿರುವುದನ್ನು ಖಂಡಿಸಿ ಸಂತ್ರಸ್ತೆೆ ಹಾಗೂ ಅವರ ಅವರ ತಾಯಿ ಮತ್ತು ಮಹಿಳಾ ಪರ ಹೋರಾಟಗಾರರು ದೆಹಲಿ ಹೈಕೋರ್ಟ್ ಎದುರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಜಾಮೀನು ರದ್ದುಪಡಿಸುವಂತೆ ಆಗ್ರಹಿಸಿದ್ದರು.
ಬಾಕ್ಸ್
ದೆಹಲಿಗೆ ಪ್ರಕರಣ ವರ್ಗಾವಣೆ
ಉನ್ನಾಾವೋ ಅತ್ಯಾಾಚಾರ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗೆ ಬಂದಿದ್ದ ಐವರು ಆರೋಪಿಗಳು ಸಂತ್ರಸ್ತೆೆ ಮೇಲೆ ಪೆಟ್ರೋೋಲ್ ಸುರಿದು ಬೆಂಕಿ ಹಚ್ಚಿಿ ಸಾಯಿಸಲು ಯತ್ನಿಿಸಿದ್ದು, ಈ ಪಾತಕ ಕೃತ್ಯದಲ್ಲಿ ಸಂತ್ರಸ್ತೆೆಗೆ ಶೇ.90ರಷ್ಟು ಸುಟ್ಟ ಗಾಯಗಳಾಗಿದ್ದವು. ಹೀಗಾಗಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸುಪ್ರೀೀಂ ಕೋರ್ಟ್ ಲಖನೌ ಕೋರ್ಟ್ನಿಂದ ದೆಹಲಿಗೆ ವರ್ಗಾಯಿಸಿತ್ತು. ಸಂತ್ರಸ್ತೆೆ ಮೇಲೆ ಪೆಟ್ರೋೋಲ್ ಸುರಿದು ಬೆಂಕಿ ಹಚ್ಚಿಿದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿ ಜೈಲಿಗೆ ಅಟ್ಟಿಿದ್ದಾರೆ.

