ಸುದ್ದಿಮೂಲ ವಾರ್ತೆ ಬೆಂಗಳೂರು, ಡಿ.30:
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜೈಲಿನಲ್ಲಿದ್ದ ಚಿತ್ರದರ್ಗುದ ಕಾಂಗ್ರೆೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.
ಹಣ ಅಕ್ರಮ ವರ್ಗಾವಣೆ ಆರೋಪದಡಿ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಪ್ರಕರಣ ದಾಖಲಿಸಿ ಅವರನ್ನು ಬಂಧಿಸಿದ್ದರು.
ಕ್ರಿಿಮಿನಲ್ ಪ್ರಕರಣದ ಅಡಿ ಅವರನ್ನು ನ್ಯಾಾಯಾಂಗ ಬಂಧನದಲ್ಲಿಡಲಾಗಿತ್ತು. ವೀರೇಂದ್ರ ಪಪ್ಪಿಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಶಾಸಕರು, ಸಂಸದರ ವಿರುದ್ಧದ ಕ್ರಿಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಾಯಾಲಯದ ನ್ಯಾಾಯಾಧೀಶ ಸಂತೋಷ ಗಜಾನನ ಭಟ್ ಪುರಷ್ಕರಿಸಿ ಷರತ್ತು ಬದ್ಧ ಜಾಮೀನು ನೀಡಿ ಆದೇಶಿಸಿದರು.
ಅರ್ಜಿದಾರ ಕೆ.ಸಿ.ವೀರೇಂದ್ರ ಅಪ್ಪಿಿ ಅವರು 5 ಲಕ್ಷ ರೂ ಮೊತ್ತದ ಬಾಂಡ್ ಹಾಗೂ ಅಷ್ಟೇ ಮೊತ್ತಕ್ಕೆೆ ಇಬ್ಬರ ಖಾತ್ರಿಿ ಒದಗಿಸುವುದೂ ಸೇರಿದಂತೆ ಸಾಂಪ್ರದಾಯಿಕ ಷರತ್ತುಗಳನ್ನು ನ್ಯಾಾಯಾಲಯ ವಿಧಿಸಿದೆ.
ವೀರೇಂದ್ರ ಪಪ್ಪಿಿ ಅವರಿಗೆ ಜಾಮೀನು ಸಿಗುತ್ತಿಿದ್ದಂತೆ ಸ್ವಕ್ಷೇತ್ರದಲ್ಲಿ ಕಾಂಗ್ರೆೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ನಾಲ್ಕು ತಿಂಗಳಿಂದ ಸರೆಯಲ್ಲಿದ್ದ ಪಪ್ಪಿಿ
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿವೀರೇಂದ್ರ ಪಪ್ಪಿಿ ಕಳೆದ 4 ತಿಂಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಅಕ್ರಮ ಆನ್ಲೈನ್ ಮತ್ತು ಆ್ಲೈನ್ ಬೆಟ್ಟಿಿಂಗ್ ಪ್ರಕರಣ ವಿಚಾರವಾಗಿ ಚಿತ್ರದುರ್ಗದ ಕಾಂಗ್ರೆೆಸ್ ಶಾಸಕ ವೀರೇಂದ್ರ ಪಪ್ಪಿಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಬೆಂಗಳೂರು, ಚಿತ್ರದುರ್ಗ, ಹುಬ್ಬಳ್ಳಿಿ, ಗೋವಾ, ಮುಂಬೈ ಸೇರಿದಂತೆ ಪಪ್ಪಿಿಗೆ ಸಂಬಂಧಿಸಿದ ಎಲ್ಲ ಸ್ಥಳಗಳ ಮೇಲೆ ದಾಳಿ ನಡೆದಿತ್ತು. ಸತತ 18 ಗಂಟೆಗೂ ಹೆಚ್ಚು ಕಾಲ ಪರಿಶೀಲಿಸಿದ್ದ ಅಧಿಕಾರಿಗಳು, ಕೆ.ಸಿ.ವೀರೇಂದ್ರ ಪಪ್ಪಿಿ ಮನೆಯಲ್ಲಿ ಕೋಟ್ಯಂತರ ರೂಪಾಯಿ ನಗದು, ವಿದೇಶಿ ಕರೆನ್ಸಿಿ ಸೇರಿದಂತೆ ಚಿನ್ನಾಾಭರಣ ಮತ್ತು ವಾಹನಗಳನ್ನು ಜಪ್ತಿಿ ಮಾಡಿದ್ದರು.
ಎಂಜಿಎಂ ಕ್ಯಾಾಸಿನೊ, ಮೆಟ್ರೋೋಪಾಲಿಟನ್ ಕ್ಯಾಾಸಿನೊ, ಬೆಲ್ಲಾಜಿಯೊ ಕ್ಯಾಾಸಿನೊ, ಮರೀನಾ ಕ್ಯಾಾಸಿನೊ, ಕ್ಯಾಾಸಿನೊ ಜ್ಯುವೆಲ್ ಹೀಗೆ ಅಂತಾರಾಷ್ಟ್ರೀಯ ಕ್ಯಾಾಸಿನೊ ಸದಸ್ಯತ್ವ, ವಿವಿಧ ಬ್ಯಾಾಂಕ್ಗಳ ಕ್ರೆೆಡಿಟ್ ಮತ್ತು ಡೆಬಿಟ್ ಕಾರ್ಡ್ಗಳು, ತಾಜ್, ಹಯಾತ್, ಲೀಲಾ ಐಷಾರಾಮಿ ಆತಿಥ್ಯ ಸದಸ್ಯತ್ವ ಕಾರ್ಡ್ಗಳನ್ನು ಪಪ್ಪಿಿ ಹೊಂದಿರುವುದು ದಾಳಿ ವೇಳೆ ಬಯಲಾಗಿತ್ತು. ಹೀಗಾಗಿ ವ್ಯವಹಾರ ಸಂಬಂಧ ಜಾಗ ಭೋಗ್ಯ ಪಡೆಯಲು ಸಿಕ್ಕಿಿಂನ ಗ್ಯಾಾಂಗ್ಟಕ್ಗೆೆ ತೆರಳುತ್ತಿಿದ್ದ ವೇಳೆಯೇ ಪಪ್ಪಿಿ ಅವರನ್ನು ಅರೆಸ್ಟ್ ಮಾಡಲಾಗಿತ್ತು.

