ಸುದ್ದಿಮೂಲ ವಾರ್ತೆ ಮಾನ್ವಿ, ಡಿ.30:
ಸತ್ಯ ನಿಷ್ಠ ವರದಿ, ನಿರ್ಭಯ ಪತ್ರಿಿಕೋದ್ಯಮ ಮತ್ತು ಸಾಮಾಜಿಕ ಜವಾಬ್ದಾಾರಿ ಪತ್ರಕರ್ತರ ಮೂಲ ಮೌಲ್ಯಗಳಾಗಿವೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆರ್. ಗುರುನಾಥ ಹೇಳಿದರು.
ಮಂಗಳವಾರ ಪಟ್ಟಣದ ಪತ್ರಿಿಕಾ ಭವನದಲ್ಲಿ ಹಮ್ಮಿಿಕೊಂಡಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಾಟಿಸಿ ಮಾತನಾಡುತ್ತಿಿದ್ದರು.
ಪತ್ರಕರ್ತರು ಯಾವುದೇ ಒತ್ತಡಗಳಿಗೆ ಒಳಗಾಗದೆ ನೈಜ ಸುದ್ದಿಯನ್ನು ಜನರಿಗೆ ತಲುಪಿಸಬೇಕು. ಸುಳ್ಳು ಸುದ್ದಿ ಹಾಗೂ ಅಪಪ್ರಚಾರಗಳಿಂದ ಸಮಾಜವನ್ನು ರಕ್ಷಿಸುವ ಹೊಣೆಗಾರಿಕೆ ಪತ್ರಕರ್ತರ ಮೇಲಿದೆ. ಪತ್ರಕರ್ತರ ಹಿತಕ್ಕಾಾಗಿ ಮುಂದಿನ ದಿನಗಳಲ್ಲಿ ಪತ್ರಿಿಕಾ ಭವನ ನಿರ್ಮಿಸಿಕೊಳ್ಳಲು ಎಲ್ಲರೂ ಒಗ್ಗಟ್ಟಾಾಗಿ ಪ್ರಯತ್ನಿಿಸಿ. ಇದಕ್ಕೆೆ ಜಿಲ್ಲಾ ಸಮಿತಿ ಸಹಕಾರ ನೀಡಲಿದೆ ಎಂದು ಹೇಳಿದರು.
ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ತಾಯಪ್ಪ ಬಿ.ಹೊಸೂರು ಪ್ರಾಾಸ್ತಾಾವಿಕವಾಗಿ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದಯ್ಯಸ್ವಾಾಮಿ ಕುಕನೂರು ಪತ್ರಕರ್ತರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪತ್ರಕರ್ತರ ಸಂಘದ ತಾಲೂಕಾಧ್ಯಕ್ಷ ಅಶೋಕ ತಡಕಲ್ ಮಾತನಾಡಿದರು.
ವೇದಿಕೆಯ ಮೇಲೆ ರಾಜ್ಯ ಸಮಿತಿ ಸದಸ್ಯ ಬಸವರಾಜ ನಾಗಡದಿನ್ನಿಿ, ಜಿಲ್ಲಾ ಸಮಿತಿಯ ಕಾರ್ಯದರ್ಶಿ ಬಸವರಾಜ ಭೋಗಾವತಿ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಲಕ್ಷ್ಮಣ ಕಪಗಲ್, ಜಿಲ್ಲಾ ನಾಮ ನಿರ್ದೇಶನ ಸದಸ್ಯ ಶರಣಬಸವ ನೀರಮಾನ್ವಿಿ, ಹಿರಿಯ ಪತ್ರಕರ್ತ ಹನುಮಂತಪ್ಪ ಕೊಟ್ನೆೆಕಲ್, ತಾಲೂಕಾ ಪ್ರಧಾನ ಕಾರ್ಯದರ್ಶಿ ರವಿಕುಮಾರ ಆಲ್ದಾಾಳ್, ನಿಕಟ ಪೂರ್ವ ಅಧ್ಯಕ್ಷ ಮಾರೆಪ್ಪ ದೊಡ್ಡಮನಿ, ನಿಕಟ ಪೂರ್ವ ಪ್ರಧಾನ ಕಾರ್ಯದರ್ಶಿ ಗೂಳಪ್ಪ ನೀರಮಾನ್ವಿಿ ಉಪಸ್ಥಿಿತರಿದ್ದರು. ಆನಂದಸ್ವಾಾಮಿ ಸ್ವಾಾಗತಿಸಿದರು. ಶ್ರೀನಿವಾಸರೆಡ್ಡಿಿ ನಿರೂಪಿಸಿದರು.
ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ನಿಷ್ಠೆ, ಸಾಮಾಜಿಕ ಜವಾಬ್ದಾರಿ ಪತ್ರಕರ್ತರ ಮೂಲ ಮೌಲ್ಯಗಳಾಗಿವೆ – ಗುರುನಾಥ

