ಸುದ್ದಿಮೂಲ ವಾರ್ತೆ ಬೆಂಗಳೂರು, ಜ.01:
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ವಾಯುಮಾಲಿನ್ಯ ಅತಿಯಾಗಿದ್ದು, ಬೆಂಗಳೂರಿಗೂ ಈ ಸ್ಥಿಿತಿ ಬಾರದಂತೆ ಎಲ್ಲ ಅಗತ್ಯ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆೆ ಸೂಚನೆ ನೀಡಿದ್ದಾರೆ.
ವಿವಿಧ ಯೋಜನೆಗಳ ಅನುಷ್ಠಾಾನದಿಂದ ಪರಿಸರದ ಮೇಲಾಗುವ ಪರಿಣಾಮಗಳ ಕುರಿತಂತೆ ಪರಾಮರ್ಶಿಸಲು ನೇಮಕಗೊಂಡಿರುವ ರಾಜ್ಯ ತಜ್ಞರ ನಿಷ್ಕರ್ಷ ಸಮಿತಿ ಮತ್ತು ಎಸ್ಇಐಎಎ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಔಪಚಾರಿಕವಾಗಿ ಮಾತನಾಡಿದ ಅವರು, ನೂತನ ವರ್ಷದಲ್ಲಿ ಪ್ರಕೃತಿ, ಪರಿಸರ ಸಂರಕ್ಷಣೆಗೆ ಸಂಕಲ್ಪ ಮಾಡಿ ಎಂದರು.
ಇತ್ತೀಚೆಗೆ ದೆಹಲಿಗೆ ಹೋಗಿದ್ದಾಗ ಹೊಗೆ ಮತ್ತು ಮಂಜಿನಿಂದ ಕೂಡಿದ ವಾತಾವರಣದಲ್ಲಿ ಉಸಿರಾಡಲೂ ಕಷ್ಟವಾಯಿತು ಎಂದ ಅವರು, ಬೆಂಗಳೂರು ನಗರದ ರಕ್ಷಣೆಗೆ ಕಟಿಬದ್ಧರಾಗಿ, ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಪರಿಸರ ಸಂರಕ್ಷಣೆಗಾಗಿ ರೂಪಿಸಿರುವ ಎಲ್ಲ ಕಾಯಿದೆಗಳನ್ನು ಕಟ್ಟುನಿಟ್ಟಾಾಗಿ ಪಾಲಿಸುವಂತೆ ತಿಳಿಸಿದರು.
ಅರಣ್ಯ ಇಲಾಖೆ ದೇಶಕ್ಕೆೆ ಮಾದರಿ : ಇದೇ ವೇಳೆ ಹೊಸವರ್ಷದ ಮೊದಲ ದಿನ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಔಪಚಾರಿಕ ಸಭೆ ನಡೆಸಿದ ಅವರು, ಅಧಿಕಾರಿಗಳ ಮಾರ್ಗದರ್ಶನದಲ್ಲಿ ಮುಂಚೂಣಿ ಸಿಬ್ಬಂದಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿಿದ್ದು, ಕರ್ನಾಟಕ ಅರಣ್ಯ ಇಲಾಖೆ ದೇಶಕ್ಕೇ ಮಾದರಿಯಾಗಿದೆ ಎಂಬುದು ಅತಿಶಯೋಕ್ತಿಿಯಲ್ಲ ಎಂದು ಹೇಳಿದರು.
ಕೊಡಗಿನಲ್ಲಿ ಇಂದು ಆನೆ ದಾಳಿಗೆ ವ್ಯಕ್ತಿಿಯೊಬ್ಬರು ಮೃತಪಟ್ಟಿಿರುವುದು ಅತ್ಯಂತ ನೋವಿನ ಸಂಗತಿ, ಮಾನವ-ವನ್ಯಜೀವಿ ಸಂಘರ್ಷ ದೊಡ್ಡ ಸವಾಲಾಗಿದ್ದು, ಇದಕ್ಕೆೆ ಶಾಶ್ವತ ಪರಿಹಾರ ಒದಗಿಸಲು ತಜ್ಞರ ಸಲಹೆ ಪಡೆದು ಎಲ್ಲರೂ ಪ್ರಾಾಮಾಣಿಕವಾಗಿ ಮತ್ತು ಶ್ರದ್ಧೆೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.
ಅಮೂಲ್ಯವಾದ ಮಾನವ ಜೀವಕ್ಕೂ ತೊಂದರೆ ಆಗದಂತೆ ಹಾಗೂ ವನ್ಯಜೀವಿಗಳಿಗೂ ಹಾನಿ ಆಗದಂತೆ ಮತ್ತು ವನ್ಯಜೀವಿಗಳಿಂದ ರೈತರು ಕಷ್ಟಪಟ್ಟು ಬೆಳೆದ ಬೆಳೆ ಹಾನಿ ಆಗದಂತೆ ಅಧಿಕಾರಿಗಳು ಕಾರ್ಯಯೋಜನೆ ರೂಪಿಸಬೇಕು ಎಂದು ಸೂಚಿಸಿದರು.
ತಾವು ಸಚಿವರಾದ ಬಳಿಕ ಅರಣ್ಯ ಒತ್ತುವರಿ ತೆರವಿಗೆ ಹಾಗೂ ಪ್ರಕೃತಿ ಪರಿಸರ ಸಂರಕ್ಷಣೆಗೆ ಒತ್ತು ನೀಡಿದ್ದು, ನಿಮ್ಮೆೆಲ್ಲರ ಸಹಕಾರದಿಂದ ಕೋಟ್ಯಂತರ ರೂಪಾಯಿ ಬೆಲೆಬಾಳುವ ಅರಣ್ಯ ಒತ್ತುವರಿ ತೆರವುಗೊಳಿಸಲಾಗಿದೆ. ವೃಕ್ಷ ಸಂರಕ್ಷಣೆ, ಸಂವರ್ಧನೆ ಆಗುತ್ತಿಿದೆ ಎಂದು ಸಂತೃಪ್ತಿಿ ವ್ಯಕ್ತಪಡಿಸಿದರು.
ಮುಖ್ಯಮಂತ್ರಿಿ ಸಿದ್ದರಾಮಯ್ಯನವರು ಇಲಾಖೆಯ ವತಿಯಿಂದ ಕೈಗೊಳ್ಳುವ ಪ್ರತಿಯೊಂದು ಕಠಿಣ ನಿರ್ಧಾರಕ್ಕೂ ಸಂಪೂರ್ಣ ಬೆಂಬಲ ನೀಡಿದ್ದಾರೆ. ಒತ್ತುವರಿ ತೆರವಿನ ವೇಳೆ ಪೊಲೀಸ್ ಸಹಕಾರ ನೀಡುವಂತೆ ಆದೇಶ ನೀಡಿದ್ದಾರೆ. ಜೊತೆಗೆ ಹೆಚ್ಚುವರಿ ಅನುದಾನವನ್ನೂ ಬಿಡುಗಡೆ ಮಾಡಿದ್ದಾರೆ ಎಂದು ಕೃತಜ್ಞತೆ ಅರ್ಪಿಸಿದರು.
ಎಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಯೇ ಇರಲಿ, ಬ್ರಿಿಟಿಷರ ಕಾಲದಲ್ಲಿ ನೀಡಲಾಗಿರುವ ಅರಣ್ಯ ಭೂಮಿ ಗುತ್ತಿಿಗೆಯೇ ಇರಲಿ 50 ಸಾವಿರ ಕೋಟಿಗೂ ಹೆಚ್ಚು ಮೌಲ್ಯದ ಅರಣ್ಯ ಭೂಮಿಯ ವಿವಾದ ಹೈಕೋರ್ಟ್, ಸುಪ್ರೀೀಂಕೋರ್ಟ್ ನಲ್ಲಿದ್ದು ಅಧಿಕಾರಿಗಳು ಇದರ ಬೆನ್ನುಹತ್ತಿಿ ಅರಣ್ಯ ಉಳಿಸಲು ಶ್ರಮಿಸಬೇಕು ಎಂದರು.
ಸಭೆಯಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕರಾದ ಪಿ.ಸಿ. ರೇ, ಎ.ಪಿ.ಸಿಸಿ.ಎ್ ಕುಮಾರ್ ಪುಷ್ಕರ್ ಮತ್ತು ಮನೋಜ್ ರಂಜನ್ ಮತ್ತಿಿತರರು ಪಾಲ್ಗೊೊಂಡಿದ್ದರು.

