ಸುದ್ದಿಮೂಲ ವಾರ್ತೆ ರಾಯಚೂರು, ಜ.01:
ಜಿಲ್ಲೆಯ ಸಿಂಧನೂರು ತಾಲೂಕು ಆಡಳಿತ, ತಾಲೂಕು ಪಂಚಾಯತ ಹಾಗೂ ಧಾರ್ಮಿಕ ದತ್ತಿಿ ಇಲಾಖೆಯ ಶ್ರೀ ಅಂಬಾದೇವಿ ವ್ಯವಸ್ಥಾಾಪನಾ ಸಮಿತಿಯ ಸಂಯುಕ್ತಾಾಶ್ರಯದಲ್ಲಿ ಶ್ರೀ ಅಂಬಾ ಮಹೋತ್ಸವ-2026ರ ಭಕ್ತಿಿ ಶಕ್ತಿಿ ಪರಂಪರೆಯ ದಿವ್ಯ ಸಂಗಮ ಜಾತ್ರಾಾ ಮಹೋತ್ಸವ ಹಾಗೂ ಸಿಂಧನೂರು ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿಿ ಕಾಮಗಾರಿಗಳ ಶಂಕುಸ್ಥಾಾಪನೆ ಮತ್ತು ಲೋಕಾರ್ಪಣೆ ಸಮಾರಂಭವು ಜನವರಿ 3ರ ಮಧ್ಯಾಾಹ್ನ 3 ಗಂಟೆಗೆ ಅಂಬಾದೇವಿ ಮಠದ ಆವರಣದಲ್ಲಿ ನಡೆಯಲಿದೆ.
ಕರ್ನಾಟಕ ಸರ್ಕಾರದ ಸನ್ಮಾಾನ್ಯ ಮುಖ್ಯಮಂತ್ರಿಿಗಳಾದ ಸಿದ್ದರಾಮಯ್ಯ ಹಾಗೂ ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಿಗಳಾದ ಡಿ.ಕೆ.ಶಿವಕುಮಾರ ಅವರು ಕಾರ್ಯಕ್ರಮ ಉದ್ಘಾಾಟಿಸುವರು.
ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಾಭಿವೃದ್ಧಿಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಸಚಿವರಾದ ರಾಮಲಿಂಗಾರೆಡ್ಡಿಿ, ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಇಲಾಖೆ ಸಚಿವರಾದ ಕೃಷ್ಣ ಭೈರೇಗೌಡ, ಗ್ರಾಾಮೀಣಾಭಿವೃದ್ಧಿಿ ಮತ್ತು ಪಂಚಾಯತ್ರಾಾಜ್ ಹಾಗೂ ಐಟಿ ಮತ್ತು ಬಿಟಿ ಇಲಾಖೆಯ ಸಚಿವರಾದ ಪ್ರಿಿಯಾಂಕ್ ಖರ್ಗೆ, ಹಿಂದುಳಿದ ವರ್ಗಗಳ ಕಲ್ಯಾಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ಎಸ್.ತಂಗಡಗಿ ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಅವರು ಘನ ಉಪಸ್ಥಿಿತಿ ವಹಿಸುವರು.
ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿಿ ನಿಗಮದ ಅಧ್ಯಕ್ಷರು ಆಗಿರುವ ಸಿಂಧನೂರು ಕ್ಷೇತ್ರದ ಶಾಸಕರಾದ ಹಂಪನಗೌಡ ಬಾದರ್ಲಿ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಾಮೋದ್ಯೋೋಗ ಮಂಡಳಿ ಅಧ್ಯಕ್ಷರು ಆಗಿರುವ ಮಸ್ಕಿಿ ಕ್ಷೇತ್ರದ ಶಾಸಕರಾದ ಆರ್.ಬಸನಗೌಡ ತುರ್ವಿಹಾಳ, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ಹಟ್ಟಿಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷರು ಆಗಿರುವ ಬೀಳಗಿ ಕ್ಷೇತ್ರದ ಶಾಸಕರಾದ ಜೆ.ಟಿ.ಪಾಟೀಲ್, ಕೊಪ್ಪಳ ಲೋಕಸಭಾ ಸಂಸದರಾದ ಕೆ.ರಾಜಶೇಖರ ಹಿಟ್ನಾಾಳ, ರಾಯಚೂರು ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ, ಸೇರಿದಂತೆ ಜಿಲ್ಲೆೆಯ ಶಾಸಕರು ಸೇರಿದಂತೆ ಮತ್ತಿಿತರ ಜನಪ್ರತಿನಿಧಿಗಳು, ಸ್ಥಳಿಯ ಸಂಸ್ಥೆೆಗಳ ಮತ್ತಿಿತರ ಮುಖಂಡರು ಪಾಲ್ಗೊೊಳ್ಳಲಿದ್ದಾಾರೆ.
ಸಂಜೆ 5ಗಂಟೆಗೆ ಅಂಬಾದೇವಿ ಮಹಾರಥೋತ್ಸವ ಮತ್ತು ಜಂಬೂ ಸವಾರಿ ನಡೆಯಲಿದೆ. ಬಳಿಕ ಸರಿಗಮಪ ಖ್ಯಾಾತಿಯ ಗಾಯಕರಾದ ಸುಪ್ರೀೀತ್ ಹಾಗೂ ಪೃಥ್ವಿಿ ಭಟ್ ಅವರಿಂದ ಸಂಗೀತ ಗಾಯನ, ನರಸಿಂಹ ಜೋಶಿ ಮತ್ತು ಶ್ರೀಮತಿ ಇಂದುಮತಿ ಸಾಲಿಮಠ ಅವರಿಂದ ಹಾಸ್ಯ ಸಂಜೆ ಕಾರ್ಯಕ್ರಮ, ಸ್ಥಳೀಯ ಶಾಲಾ-ಕಾಲೇಜು ತಂಡಗಳಿಂದ ಸಾಂಸ್ಕೃತಿಕ ನೃತ್ಯ ಕಾರ್ಯಕ್ರಮ ಹಾಗೂ ನಾರಾಯಣಪ್ಪ ಮಾಡಸಿರವಾರ ತಂಡದವರಿಂದ ಅಹೋರಾತ್ರಿಿ ತತ್ವಪದ ಗಾಯನ ಕಾರ್ಯಕ್ರಮ ಹಮ್ಮಿಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಜನವರಿ 3ರಂದು ಶ್ರೀ ಅಂಬಾದೇವಿ ಮಹಾರಥೋತ್ಸವ ಸಿಂಧನೂರು ವಿಧಾನಸಭಾ ; ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಾಪನೆ, ಲೋಕಾರ್ಪಣೆ

