ಸುದ್ದಿಮೂಲ ವಾರ್ತೆ ಬೆಂಗಳೂರು, ಜ.01:
ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ 2025-26ನೇ ಸಾಲಿನಲ್ಲಿ 6,322 ರೈತ ಕುಟುಂಬಗಳಿಗೆ ವಿದ್ಯುತ್ ಸಂಪರ್ಕದೊಂದಿಗೆ ಕೊಳವೆಬಾವಿ ಸೌಲಭ್ಯ ಒದಗಿಸಲು ಅನುಮೋದನೆ ನೀಡಲಾಗಿದೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್. ಭೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಂದು ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಎಸ್ಸಿಿಪಿ ಮತ್ತು ಟಿಎಸ್ಪಿಿ ಅನುದಾನದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದ ಅವರು, ಮಂಜೂರಾಗಿರುವ ಕಾಮಗಾರಿಗಳನ್ನು ವಿಳಂಬವಿಲ್ಲದೆ ಚುರುಕುಗೊಳಿಸಬೇಕು ಎಂದು ಸೂಚನೆ ನೀಡಿದರು.
2025-26ನೇ ಆರ್ಥಿಕ ಸಾಲಿನಲ್ಲಿ ಎಸ್ಸಿಿಪಿ-ಟಿಎಸ್ಪಿಿ ಅಡಿಯಲ್ಲಿ 3,939 ಪರಿಶಿಷ್ಟ ಜಾತಿ ಮತ್ತು 2,383 ಪರಿಶಿಷ್ಟ ಪಂಗಡದ ಕುಟುಂಬಗಳು ಸೇರಿದಂತೆ ಒಟ್ಟು 6,322 ರೈತ ಕುಟುಂಬಗಳಿಗೆ ವಿದ್ಯುತ್ ಸಂಪರ್ಕದೊಂದಿಗೆ ಕೊಳವೆಬಾವಿ ಸೌಲಭ್ಯ ಒದಗಿಸಲು ಅನುಮೋದನೆ ನೀಡಲಾಗಿದೆ. ಈ ಕಾಮಗಾರಿಗಳ ಟೆಂಡರ್ ಪ್ರಕ್ರಿಿಯೆಯನ್ನು ಶೀಘ್ರದಲ್ಲಿ ಮುಗಿಸಿ, ನಿಗದಿತ ಸಮಯದಲ್ಲಿ ರೈತರಿಗೆ ಸೌಲಭ್ಯ ತಲುಪಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದರು.
ಜಲ ಸಂರಕ್ಷಣೆಗೆ ವಿಶೇಷ ಒತ್ತು:
ಅಂತರ್ಜಲ ಮಟ್ಟ ವೃದ್ಧಿಿಸುವ ದೃಷ್ಟಿಿಯಿಂದಲೂ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದೆ. ಪರಿಶಿಷ್ಟ ಸಮುದಾಯಗಳ ಕೃಷಿ ಪ್ರದೇಶಗಳಲ್ಲಿ ಚೆಕ್ ಡ್ಯಾಾಮ್ಗಳ ನಿರ್ಮಾಣ ಮತ್ತು ಸಾಮೂಹಿಕ ಏತ ನೀರಾವರಿ ಯೋಜನೆಗಳಂತಹ ’ಜಲ ಸಂರಕ್ಷಣಾ ರಚನೆ’ಗಳನ್ನು ನಿರ್ಮಿಸಲು ಆದ್ಯತೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.
ಕಳೆದ ವರ್ಷದ ಸಾಧನೆ:
2024-25ನೇ ಸಾಲಿನಲ್ಲಿ 365 ಕೋಟಿ ರೂ. ವೆಚ್ಚದಲ್ಲಿ ಒಟ್ಟು 5,371 ರೈತ ಕುಟುಂಬಗಳಿಗೆ (3,388 ಎಸ್ಸಿಿ ಮತ್ತು 1,983 ಎಸ್ಟಿಿ) ಯಶಸ್ವಿಿಯಾಗಿ ವಿದ್ಯುತ್ ಸಂಪರ್ಕಿತ ಕೊಳವೆಬಾವಿ ಸೌಲಭ್ಯ ಕಲ್ಪಿಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಸಭೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ಕಾರ್ಯದರ್ಶಿಗಳಾದ ಬಿ.ಕೆ. ಪವಿತ್ರ ಹಾಗೂ ಉತ್ತರ ಮತ್ತು ದಕ್ಷಿಣ ವಲಯದ ಮುಖ್ಯ ಅಭಿಯಂತರರು ಉಪಸ್ಥಿಿತರಿದ್ದರು.
6,322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ

