ಸುದ್ದಿಮೂಲ ವಾರ್ತೆ ಮಸ್ಕಿ, ಜ.01:
ಪಟ್ಟಣದ ಶ್ರೀ ಕಾಳಿಕಾದೇವಿ ರಸ್ತೆೆ ಯಲ್ಲಿ ಅಮರಶಿಲ್ಪಿಿ ಜಕಣಾಚಾರಿ ಜಯಂತಿ ಆಚರಿಸಲಾಯಿತು.
ಜಕಣಾಚಾರಿಯವರ ಭಾವಚಿತ್ರಕ್ಕೆೆ ಪುಷ್ಪಾಾರ್ಚನೆ ಪುರಸಭೆ ಅಧ್ಯಕ್ಷ ಸುರೇಶ್ ಹರಸೂರ ಮಾಡಿದರು. ಸೃಷ್ಟಿಿಯ ಮೂಲಕರ್ತೃವಾಗಿರುವ ಜಕಣಾಚಾರಿಯವರ ಶಿಲ್ಪಕಲಾ ಕುಶಲತೆ ಇಂದು ಜಗತ್ತಿಿನ ಎಲ್ಲೆಡೆ ಪಸರಿಸಿದೆ. ಪ್ರಪಂಚದ ಎಲ್ಲ ವಿದ್ಯೆೆಗಳ ಮೂಲವಾಗಿರುವ ಜಕಣಾಚಾರಿ ಅವರನ್ನು ಜಗತ್ತಿಿನ ಮೊದಲ ಮುಖ್ಯ ಎಂಜಿನಿಯರ್ ಎನ್ನಬಹುದು.ಜಕಣಾಚಾರಿಯವರು ಸಾಮಾನ್ಯ ಜನರಿಗೆ ದೇವರ ಪರಿಕಲ್ಪನೆ ನೀಡುವ ಮಧ್ಯಸ್ಥಿಿಕೆದಾರರಾಗಿದ್ದರು. ವಿಶ್ವಕರ್ಮರ ಶಿಲ್ಪಕಲೆ ಅಮರವಾಗಿದೆಎಂದು ಪುರಸಭೆಯ ನೂತನ ಅಧ್ಯಕ್ಷ ಸುರೇಶ ಹರಸೊರ ತಿಳಿಸಿದರು.
ನಂತರ ಮಾತನಾಡಿದ ಉದಯಕುಮಾರ ಪತ್ತಾಾರ, ನಮ್ಮೆೆಲ್ಲರಲ್ಲಿ ಒಗ್ಗಟ್ಟಿಿದ್ದರೆ ಮಾತ್ರ ಸಮಾಜದ ಏಳಿಗೆ ಸಾಧ್ಯ’ ಎಂದರು.
ಸರ್ಕಾರವು ವಿಶ್ವಕರ್ಮ ಸಮಾಜದ ಅಭಿವೃದ್ಧಿಿಗೆ ವಿಶೇಷ ಯೋಜನೆಗಳನ್ನು ರೂಪಿಸಬೇಕು ಅಷ್ಟೇ ಅಲ್ಲದೇ, ಪ್ರತಿ ತಾಲ್ಲೂಕು ಕೇಂದ್ರದಲ್ಲಿ ವಿಶ್ವಕರ್ಮ ಜನಾಂಗದವರ ಅನುಕೂಲಕ್ಕಾಾಗಿ ಹೊಸ ಲೇಔಟ್ ಒಂದಕ್ಕೆೆ ವಿಶ್ವಕರ್ಮ ಅಥವಾ ಜಕಣಾಚಾರಿ ಎಂದು ನಾಮಕರಣ ಮಾಡಬೇಕು, ಮತ್ತು ಸಮುದಾಯ ಭವನದ ನಿರ್ಮಾಣಕ್ಕಾಾಗಿ ನಿವೇಶನ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.ಶಿಲ್ಪಕಲೆಯಲ್ಲಿ ಶ್ರೀಮಂತ ಪರಂಪರೆ ಹೊಂದಿರುವ ವಿಶ್ವಕರ್ಮ ಸಮುದಾಯ ತಮ್ಮ ಕುಲಕಸುಬುಗಳ ಜೊತೆಗೆ ಶಿಕ್ಷಣ ಪಡೆದು ಸಂಘಟಿತರಾಗಬೇಕು. ಶೈಕ್ಷಣಿಕವಾಗಿ ಮುಖ್ಯವಾಹಿನಿಗೆ ಬರಬೇಕು. ಸಮುದಾಯದ ಇತರರಲ್ಲೂ ಜಾಗೃತಿ ಮೂಡಿಸಬೇಕು. ಜೀವನ ಸಾರ್ಥಕ ಪಡಿಸಿಕೊಳ್ಳಬೇಕು. ಈ ನಿಟ್ಟಿಿನಲ್ಲಿ ಸಮುದಾಯ ಎಚ್ಚೆೆತ್ತುಕೊಳ್ಳಬೇಕಾಗಿದೆ ಎಂದು ತಹಶೀಲ್ದಾಾರ್ ಕಾರ್ಯಾಲಯದ ಗುರುಲಿಂಗಯ್ಯ ಶಿರಸ್ತೆೆದಾರ ತಿಳಿಸಿದರು.
ಈ ಸಂದರ್ಭದಲ್ಲಿ ಪುರಸಭೆಯ ನೂತನ ಅಧ್ಯಕ್ಷ ಸುರೇಶ್ ಹರಸೂರ,ಶಿರಸ್ತೆೆದಾರ ಗುರುಲಿಂಗಯ್ಯ, ಪುರಸಭೆ ಸಿಇಓ ನರಸರೆಡ್ಡಿಿ, ಪುರಸಭೆಯ ಸದಸ್ಯರು, ವಿಶ್ವಕರ್ಮ ಸಮಾಜದವರು, ಪಟ್ಟಣದ ಪ್ರಮುಖ ಮುಖಂಡರು ಉಪಸ್ಥಿಿತರಿದ್ದರು.
ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನ ಆಚರಣೆ

