ಸುದ್ದಿಮೂಲ ವಾರ್ತೆ ರಾಯಚೂರು, ಜ.10:
ಗರ್ಭಕಂಠದ ಕ್ಯಾಾನ್ಸರ್ ತಡೆಗೆ 09 ರಿಂದ 14 ವರ್ಷದೊಳಗಿನ ಶಾಲಾ ಹೆಣ್ಣು ಮಕ್ಕಳಿಗೆ ಜಿಲ್ಲೆಯಲ್ಲಿ ಉಚಿತ ಹ್ಯೂಮನ್ ಪ್ಯಾಾಪಿಲೋಮ ವೈರಸ್ (ಹೆಚ್ಪಿವಿ) ಲಸಿಕೆ ಹಾಕುವ ಕುರಿತು ವ್ಯಾಾಪಕ ಮಾಹಿತಿ ಶಾಲಾ ಮಟ್ಟದಲ್ಲಿ ನೀಡಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಾಣಾಧಿಕಾರಿ ಡಾ.ಸುರೇಂದ್ರ ಬಾಬು ಹೇಳಿದರು.
ಶುಕ್ರವಾರ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಾಣ ಇಲಾಖೆಯ ಕೃಷ್ಣ ಸಭಾಂಗಣದಲ್ಲಿ ಜರುಗಿದ ಹೆಚ್ಪಿವಿ ಲಸಿಕೆ ಕುರಿತು ತರಬೇತಿ ಕಾರ್ಯಾಗಾರಕ್ಕೆೆ ಚಾಲನೆ ನೀಡಿ ಮಾತನಾಡಿದರು.
ಸಾಮಾನ್ಯವಾಗಿ ವೈಯಕ್ತಿಿಕ ಶುಚಿತ್ವ, ಜನನಾಂಗಗಳಲ್ಲಿ ತೊಂದರೆ, ಹುಣ್ಣು ಹಾಗೂ ಲೈಂಗಿಕ ಸಂಪರ್ಕದಿಂದ ಹರಡುವ ಹ್ಯೂಮನ್ ಪ್ಯಾಾಪಿಲೋಮವೈರಸ್ (ಹೆಚ್ಪಿಿವಿ) ಸೋಂಕು ನಿರಂತರವಾಗಿ ಇದ್ದು, ಕ್ರಮೇಣ ಗರ್ಭಕಂಠದ ಜೀವಕೋಶಗಳಲ್ಲಿ ಬದಲಾವಣೆಗಳಾಗಿ ಕ್ಯಾಾನ್ಸರ್ಆಗಿ ಬದಲಾಗುತ್ತದೆ ಎಂದರು.
ಈ ವೇಳೆ ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ.ನಂದಿತಾ ಎಮ್.ಎನ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಗಣೇಶ ಕೆ, ಜಿಲ್ಲಾ ಎನ್ಫೋೋರ್ಸ್ಮೆಂಟ್ ಅಧಿಕಾರಿ ಡಾ.ಶಿವಕುಮಾರ ನಾರಾ, ತಾಲೂಕಾ ಆರೋಗ್ಯ ಅಧಿಕಾರಿ ಡಾ.ಪ್ರಜ್ವಲ್ ಕುಮಾರ, ಮನೋವೈದ್ಯ ಡಾ.ಮನೋಹರ್ ಪತ್ತಾಾರ, ಜಿಲ್ಲಾ ಆರೋಗ್ಯ ಶಿಕ್ಷಣಧಿಕಾರಿ ಈಶ್ವರ ಹೆಚ್. ದಾಸಪ್ಪವರ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸಯ್ಯ, ಆಪ್ತ ಸಹಾಯಕ ಲೇಪಾಕ್ಷಯ್ಯ, ಐಎ್ವಿ ಕೊಪ್ರೇಶ್, ರಾಘವೇಂದ್ರ ಸೇರಿದಂತೆ ಜಿಲ್ಲೆಯ ಎಲ್ಲ ವೈದ್ಯಾಾಧಿಕಾರಿಗಳು, ತಾಲೂಕಾ ಮೇಲ್ವಿಿಚಾರಕರು, ಬಿಪಿಎಮ್, ಆಶಾ ಮೇಲ್ವಿಿಚಾರಕರು ಇದ್ದರು.
ಹೆಚ್ಪಿವಿ ಲಸಿಕೆ; ಡಿಎಚ್ಒ ಸಲಹೆ

