ಸುದ್ದಿಮೂಲ ವಾರ್ತೆ ಕಲಬುರಗಿ, ಜ.11:
ಕಲ್ಯಾಾಣ ಕರ್ನಾಟಕ ಭಾಗದ ಪ್ರತಿಭಾವಂತ ಅಭ್ಯರ್ಥಿಗಳಿಗಳು ಐಎಎಸ್, ಐಪಿಎಸ್ ಹಾಗೂ ಕೆಎಎಸ್ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗೆ ಬೇಕಾಗುವ ಅಗತ್ಯ ತರಬೇತಿ ನೀಡುವ ಕನಸು ಇಂದು ನನಸಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಿಯಾಂಕ್ ಖರ್ಗೆ ಹರ್ಷ ವ್ಯಕ್ತಪಡಿಸಿದರು.
ನಗರದ ಹೊರವಲಯದ ವಾಜಪೇಯಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪ್ರಬುದ್ಧ ಪರೀಕ್ಷಾ ಪೂರ್ವ ತರಬೇತಿ ಅಕಾಡೆಮಿ (ಕೇಂದ್ರ) ಉದ್ಘಾಾಟನೆ ನೆರವೇರಿಸಿ ಮಾತನಾಡಿದರು.
ಪ್ರಬುದ್ಧ ಅಕಾಡೆಮಿ ಒಂದು ಉತ್ಕೃಷ್ಟ ತರಬೇತಿ ಕೇಂದ್ರವಾಗಿ ಬಲಗೊಳ್ಳಬೇಕು ಎಂದು ಅಭಿಪ್ರಾಾಯಪಟ್ಟ ಸಚಿವರು, ಈ ಭಾಗದ ಐಎಎಸ್ ಅಧಿಕಾರಿಗಳು ಇಲ್ಲಿನ ಅಭ್ಯರ್ಥಿಗಳಿಗೆ ಪಾಠ ಮಾಡಲು ಮುಂದೆ ಬರಬೇಕು. ಅದಕ್ಕೆೆ ಅನುಕೂಲವಾಗುವಂತೆ ರೋಸ್ಟರ್ ಪದ್ದತಿ ರೂಪಿಸಿ ಎಂದು ವೇದಿಕೆಯ ಮೇಲಿದ್ದ ಅಧಿಕಾರಿಗಳಿಗೆ ಸಲಹೆ ನೀಡಿದರು.
ಸಚಿವ ಡಾ.ಶರಣಪ್ರಕಾಶ ಪಾಟೀಲ್ ಮಾತನಾಡಿ ನಮ್ಮ ಭಾಗದ ಪ್ರತಿಭಾವಂತ ವಿದ್ಯಾಾರ್ಥಿಗಳಿಗೆ ಸೂಕ್ತ ತರಬೇತಿ ನೀಡುವ ಕೇಂದ್ರದ ಕೊರತೆ ಇತ್ತು. ಆ ಕೊರತೆಯನ್ನು ಪ್ರಬುದ್ಧ ಅಕಾಡೆಮಿ ನೀಗಿಸಲಿದೆ.
ಕಾರ್ಯಕ್ರಮದಲ್ಲಿ ಶಾಸಕರಾದ ಅಲ್ಲಮಪ್ರಭು ಪಾಟೀಲ, ಎಂ. ವೈ.ಪಾಟೀಲ, ವಿಧಾನಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ, ಕುರಿ ಮತ್ತು ಉಣ್ಣೆೆ ಅಭಿವೃದ್ದಿ ಮಂಡಳಿ ಅಧ್ಯಕ್ಷ ದೇವಿಂದ್ರಪ್ಪ ಮರತೂರು, ಕೆಕೆಆರ್ ಟಿಸಿ ಅಧ್ಯಕ್ಷ ಅರುಣಕುಮಾರ್ ಎಂ ವೈ ಪಾಟೀಲ, ಜೆಸ್ಕಾಾಂ ಅಧ್ಯಕ್ಷ ಪ್ರವೀಣ್ ಪಾಟೀಲ ಹರವಾಳ, ಕೆಕೆಆರ್ ಡಿಬಿ ಕಾರ್ಯದರ್ಶಿ ನಲಿನ್ ಅತುಲ್, ಜಿಲ್ಲಾಧಿಕಾರಿ ೌಜಿಯಾ ತರನ್ನುಮ್, ಜಿಲ್ಲಾ ಪಂಚಾಯತ್ ಸಿಒಇ ಭಂವರ್ ಸಿಂಗ್ ಮೀನಾ, ನಗರ ಪೊಲೀಸ್ ಕಮೀಷನರ್ ಡಾ ಶರಣಪ್ಪ ಎಸ್ ಡಿ, ಎಸ್ಪಿಿ ಅಡ್ಡೂರು ಶ್ರೀನಿವಾಸಲು ಸೇರಿದಂತೆ ವಿದ್ಯಾಾರ್ಥಿಗಳು ಉಪಸ್ಥಿಿತರಿದ್ದರು.
ಪ್ರಬುದ್ಧ ಅಕಾಡೆಮಿ ಉದ್ಘಾಟಿಸಿದ ಸಚಿವ ಪ್ರತಿಭಾವಂತರ ಭವಿಷ್ಯ ಅರಳಲಿ – ಪ್ರಿಯಾಂಕ್ ಖರ್ಗೆ

