ಸುದ್ದಿಮೂಲ ವಾರ್ತೆ ಕಲಬುರಗಿ, ಜ.12:
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ ಎಂಬ ವಿಶ್ವಾಾಸ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಾಸ ವ್ಯಕ್ತಪಡಿಸಿದರು.
ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕಲ್ಯಾಾಣ ಕರ್ನಾಟಕ ಅಭಿವೃದ್ಧಿಿ ಮಂಡಳಿ ಕಲಬುರಗಿ ಇವರ ಸಂಯುಕ್ತಾಾಶ್ರಯದಲ್ಲಿ ಕೆಪಿಎಸ್ ಶಾಲಾ ಆವರಣ ಜಿಲ್ಲೆಯ ಯಡ್ರಾಾಮಿ ತಾಲೂಕು ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಪ್ರಜಾಸೌಧಹಾಗೂ ಕೆಪಿಎಸ್ ಶಾಲೆ ಹಾಗೂ ವಿವಿಧ ಇಲಾಖೆಗಳ ಕಾಮಗಾರಿಗಳ ಶಂಕುಸ್ಥಾಾಪನೆ ಹಾಗೂ ಉದ್ಘಾಾಟನೆ ಹಾಗೂ ಲಾನುಭವಿಗಳಿಗೆ ಸೌಲಭ್ಯಗಳ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಉದ್ಘಾಾಟನೆ ಮಾಡಿ ನಂತರ ವಿವಿಧ ಇಲಾಖೆಗಳ ಕಾರ್ಯಕ್ರವ ಗಳಿಗೆ ಶಂಕುಸ್ಥಾಾಪನೆ ನೆರೆವೇರಿಸಿ ವಿವಿಧ ಇಲಾಖೆಗಳ ಲಾನುಭವಿಗಳಿಗೆ ಸೌಲಭ್ಯ ವಿತರಣೆ ಮಾಡಿ ಮಾತನಾಡಿದರು.
ನೂತನವಾಗಿ ಘೋಷಣೆಯಾಗಿರುವ ಯಡ್ರಾಾಮಿ ತಾಲ್ಲೂಕಿನಲ್ಲಿ, ಜೇವರ್ಗಿ ಮತಕ್ಷೇತ್ರದಲ್ಲಿ 87 ಕಾಮಗಾರಿಗಳ 867.49 ಕೋಟಿ ವೆಚ್ಚದ , 38.29 ಕೋಟಿ ವೆಚ್ಚ ಕಾಮಗಾರಿಗಳಿಗೆ ಉದ್ಘಾಾಟನೆ ಮಾಡಲಾಗಿದೆ. ಒಟ್ಟಾಾರೆ 906 ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿಗಳಿಗೆ ಶಂಕುಸ್ಥಾಾಪನೆ ಮತ್ತು ಉದ್ಘಾಾಟನೆ ನೆರವೇರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ರಾಜಕಾರಣಕ್ಕಾಾಗಿ ಸುಳ್ಳನ್ನು ಹೇಳುವ ವಿರೋಧ ಪಕ್ಷಗಳು:
ವಿರೋಧಪಕ್ಷದವರು ರಾಜಕಾರಣಕ್ಕಾಾಗಿ ಸುಳ್ಳನ್ನೇ ಹೇಳುತ್ತಿಿದ್ದಾರೆ. ಗ್ಯಾಾರಂಟಿ ಯೋಜನೆಗಳಿಂದ ಮೂಲಸೌಕರ್ಯ ಕಾಮಗಾರಿಗಳಿಗೆ ಸರ್ಕಾರದಲ್ಲಿ ಅನುದಾನವಿಲ್ಲ ಎಂದು ಎಲ್ಲೆಡೆ ಅಪಪ್ರಚಾರ ಮಾಡುತ್ತಿಿದ್ದಾರೆ. ಸರ್ಕಾರ ದಿವಾಳಿಯಾಗಿದ್ದರೆ ಜೇವರ್ಗಿ ಮತಕ್ಷೇತ್ರ ಒಂದರಲ್ಲಿ 906 ಕೋಟಿ ಗಳನ್ನು ವೆಚ್ಚ ಮಾಡಲಾಗುತ್ತಿಿರಲಿಲ್ಲ ಎಂದರು.
ಕೊಟ್ಟ ಮಾತಿನಂತೆ ನಡೆದುಕೊಳ್ಳುವ ಸರ್ಕಾರ
1 ಲಕ್ಷದ 12 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಅನುದಾನ ವೆಚ್ಚ ಮಾಡಲಾಗಿದೆ.ಚುನಾವಣೆ ಪೂರ್ವದಲ್ಲಿ ನೀಡಿದ್ದ ಆಶ್ವಾಾಸನೆಯಂತೆ ಅಧಿಕಾರಕ್ಕೆೆ ಬಂದ ಒಂದೇ ವರ್ಷದಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಿದೆ ಎನ್ನುವುದನ್ನು ಜನ ಅರ್ಥ ಮಾಡಿಕೊಳ್ಳಬೇಕು. ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದರು.
ಕಳೆದ ಚುನಾವಣೆಯಲ್ಲಿ ನಮ್ಮ ಪಕ್ಷದ ವತಿಯಿಂದ 592 ಭರವಸೆಗಳನ್ನು ನೀಡಲಾಗಿತ್ತು. 243 ಭರವಸೆಗಳನ್ನು ಈಡೇರಿಸಲಾಗಿದೆ. ಉಳಿದ ಅವಧಿಯಲ್ಲಿ ಮಿಕ್ಕ ಭರವಸೆಗಳನ್ನು ಈಡೇರಿಸಲಾಗುವುದು ಎಂದರು.
ಕಳೆದ ಬಾರಿ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ. ಪ್ರಣಾಳಿಕೆಯಲ್ಲಿ ಸೇರಿರದ 30 ಕಾರ್ಯಕ್ರಮಗಳನ್ನು ಜಾರಿ ಮಾಡಲಾಗಿತ್ತು. ಎರಡೂವರೆ ವರ್ಷದಲ್ಲಿ ಕೊಟ್ಟ ಎಲ್ಲಾ ಭರವಸೆಗಳ ಜೊತೆಗೆ ಗ್ಯಾಾರಂಟಿ ಯೋಜನೆಗಳನ್ನು ಈಡೇರಿಸಲಾಗಿದೆ ಎಂದರು.
ಬಿಜೆಪಿ 2018 ರಿಂದ ಅಧಿಕಾರದಲ್ಲಿದ್ದು, ಅವರು ನೀಡಿದ್ದ 600 ಭರವಸೆಗಳಲ್ಲಿ 10% ಭರವಸೆಗಳನ್ನು ಈಡೇರಿಸಲಾಗಲಿಲ್ಲ ಎಂದು ತಿಳಿಸಿದರು.
49 ತಾಲ್ಲೂಕುಗಳಲ್ಲಿ ಕೂಡ ಪ್ರಜಾಸೌಧ ಮಂಜೂರು:
ರಾಜ್ಯದಲ್ಲಿ 63 ಹೊಸ ತಾಲೂಕುಗಳನ್ನು ಘೋಷಣೆ ಮಾಡಲಾಗಿತ್ತು. 2018 ರಿಂದ 2023 ರವರೆಗೆ ನೂತನ ತಾಲ್ಲೂಕುಗಳಿಗೆ ಬಿಜೆಪಿ ಸೌಲಭ್ಯ ಒದಗಿಸಿದ್ದು ಕೇವಲ 14 ತಾಲ್ಲೂಕುಗಳಲ್ಲಿ ಮಾತ್ರ ಮಾಡಿದರು. 2023 ರಲ್ಲಿ ಅಧಿಕಾರಕ್ಕೆೆ ಬಂದ ನಂತರ 49 ತಾಲ್ಲೂಕುಗಳಲ್ಲಿ ಕೂಡ ಪ್ರಜಾಸೌಧಗಳನ್ನು ಮಂಜೂರು ನಮ್ಮ ಸರ್ಕಾರ ಮಾಡಿದ್ದು, ನಿರ್ಮಾಣ ಮಾಡಲಾಗುವುದು ಎಂದರು.
ಬಿಜೆಪಿ ವತಿಯಿಂದ ಕಲ್ಯಾಾಣ ಕರ್ನಾಟಕದಲ್ಲಿ 19 ತಾಲ್ಲೂಕುಗಳು ಮಂಜೂರಾಗಿದ್ದರೆ, ಕೇವಲ ಎರಡು ಕಟ್ಟಡ ಮಾತ್ರ ನಿರ್ಮಾಣವಾಗಿದೆ. ನಮ್ಮ ಸರ್ಕಾರ 17 ತಾಲ್ಲೂಕುಗಳು ಮಂಜೂರಾಗಿದ್ದು,97 ನಾಡ ಕಚೇರಿಗಳು ಮಂಜೂರಾಗಿವೆ. ಕಲ್ಯಾಾಣ ಕರ್ನಾಟಕದಲ್ಲಿ 39 ಕಚೇರಿಗಳನ್ನು ಮಂಜೂರು ಮಾಡಲಾಗಿದೆ. ಎರಡನೇ ಹಂತದಲ್ಲಿ 53 ನಿರ್ಮಾಣವಾಗಿವೆ. ಕಲ್ಯಾಣ ಕರ್ನಾಟಕದ 25 ತಾಲ್ಲೂಕುಗಳಲ್ಲಿ ನಾಡ ಕಚೇರಿಗಳನ್ನು ನಮ್ಮ ಸರ್ಕಾರ ಮಂಜೂರು ಮಾಡಿದೆ ಎಂದರು.
ರೈತರ ಪರವಾದ ಸರ್ಕಾರ:
ಈ ಬಾರಿ ಮಳೆ ಹೆಚ್ಚಾಾಗಿ ಬೆಳೆ ಹಾನಿಯಾಗಿರುವುದರಿಂದ ವೈಮಾನಿಕ ಸಮೀಕ್ಷೆ ಕೈಗೊಂಡು ಪರಿಶೀಲಿಸಿ ಪರಿಹಾರ ಕೊಡಲು ನಿರ್ಧರಿಸಿ ಎಸ್ ಡಿ.ಆರ್.ಎ್ ನಿಂದ 1218 ಕೋಟಿ ಜೊತೆಗೆ ಸರ್ಕಾರದ ವತಿಯಿಂದ ಒಟ್ಟು 1031ಕೋಟಿ ಹೆಚ್ಚುವರಿಯಾಗಿ ಒದಗಿಸಲಾಗಿದೆ.ರಾಜ್ಯದಲ್ಲಿ ಒಟ್ಟು 14.21 ಲಕ್ಷ ರೈತರ ಬೆಳೆ ಹಾನಿಯಾಗಿದ್ದು, ಕಲ್ಯಾಾಣ ಕರ್ನಾಟಕ ಭಾಗದಲ್ಲಿ 721786 ರೈತರ ಬೆಳೆ ಹಾನಿಗೊಳಗಾಗಿದೆ. 1072 ಕೋಟಿ ಬೆಳೆ ಹಾನಿಗೆ ಪರಿಹಾರ ನೀಡಿದೆ. ಕಲಬುರ್ಗಿ ಜಿಲ್ಲೆಯಲ್ಲಿ 323318 ರೈತರ ಬೆಳೆ ಹಾನಿಯಾಗಿದ್ದು 498 ಕೋಟಿ ಪರಿಹಾರ ನೀಡಲಾಗಿದೆ ಎಂದರು.
ರೈತರ ಖಾತೆಗಳಿಗೆ ಅನುದಾನ ತಲುಪಿಸುವ ಕೆಲಸ ಮಾಡಿದ್ದೇವೆ. ರೈತರ ಸಹಾಯಕ್ಕೆೆ ಸರ್ಕಾರ ಸದಾ ಮುಂದಾಗಿದೆ. ನೆಟೆ ರೋಗಕ್ಕೆೆ ತುತ್ತಾಾದ ತೊಗರಿ ಬೆಳೆಗೆ 233 ಕೋಟಿ ರೂ. ಗಳನ್ನು ಒದಗಿಸಲಾಗಿದೆ. ಕಬ್ಬಿಿನ ಬೆಲೆ ಕಡಿಮೆ ಎಂದು ರೈತರು ಪ್ರತಿಭಟಿಸಿದಾಗ ಅವರ ನೆರವಿಗೆ ಸರ್ಕಾರ ಧಾವಿಸಿ ಸರ್ಕಾರದಿಂದ 50 ಹಾಗೂ ಕಾರ್ಖಾನೆಯಿಂದ 50 ರೂ. ನಿಗದಿ ಮಾಡಿ 300 ಕೋಟಿ ಗಳನ್ನು ಸರ್ಕಾರದಿಂದ ಕಬ್ಬಿಿನ ಬೆಳೆಗಾರರಿಗೆ ನೀಡಲಾಗಿದೆ ಎಂದರು.
371 ಜೆ ಜಾರಿಯಾಗಿದ್ದು ಕಾಂಗ್ರೆೆಸ್ ಸರ್ಕಾರದಿಂದ:
ಬಿಜೆಪಿಯ ಗೃಹ ಸಚಿವ ಹಾಗೂ ಉಪಪ್ರಧಾನಿಯಾಗಿದ್ದ ಅಡ್ವಾಣಿ ಯವರು 371 (ಜೆ) ಜಾರಿ ಮಾಡಲು ಸಾಧ್ಯವಿಲ್ಲ ಎಂದಿದ್ದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಇದನ್ನು ಜಾರಿ ಮಾಡಿದರು. ಮಲ್ಲಿಕಾರ್ಜುನ ಖರ್ಗೆ ಹಾಗೂ ಧರ್ಮಂ ಸಿಂಗ್ ಹೋರಾಟದಿಂದ ಇದು ಸಾಧ್ಯವಾಯಿತು ಎಂದರು. ಇದರಿಂದಾಗಿ ಕಲ್ಯಾಾಣ ಕರ್ನಾಟಕ ಅಭಿವೃದ್ಧಿಿ ಮಂಡಳಿ ರಚನೆಯಾಯಿತು. 13000 ಕೋಟಿ ಗಳನ್ನು ಮೂರು ವರ್ಷಗಳಲ್ಲಿ ಒದಗಿಸಲಾಗಿದ್ದು, ಈ ವರ್ಷದಲ್ಲಿ 3000 ಕೋಟಿ ಒದಗಿಸಲಾಗಿದೆ ಎಂದರು.
300 ಕರ್ನಾಟಕ ಪಬ್ಲಿಿಕ್ ಶಾಲೆಗಳಿಗೆ ಅಡಿಗಲ್ಲು ಹಾಕಲಾಗಿದೆ
ಶಾಸಕ ಅಜಯ್ ಸಿಂಗ್ ಅವರು ಅನುದಾನವನ್ನು ಪೂರ್ಣವಾಗಿ ವೆಚ್ಚ ಮಾಡಬೇಕು. ಶಿಕ್ಷಣ ಮತ್ತು ಆರೋಗ್ಯಕ್ಕೆೆ ಹೆಚ್ಚಿಿನ ಒತ್ತು ನೀಡಬೇಕೆಂದು ಅಜಯ್ ಸಿಂಗ್ ಅವರಿಗೆ ತಿಳಿಸಲಾಗಿತ್ತು. ಅದರಂತೆ 300 ಕರ್ನಾಟಕ ಪಬ್ಲಿಿಕ್ ಶಾಲೆಗಳಿಗೆ ಅಡಿಗಲ್ಲು ಹಾಕಲಾಗಿದೆ. ರಾಜ್ಯದಲ್ಲಿ ಒಟ್ಟು 900 ರಾಜ್ಯಕ್ಕೆೆ ಕೆಪಿಎಸ್ ಮಂಜೂರಾಗಿದೆ ಎಂದರು.
371 ಜೆ ಜಾರಿಯಲ್ಲಿ ಬಿಜೆಪಿಯ ಪಾತ್ರವಿಲ್ಲ:
ಬಿಜೆಪಿ ಕೇವಲ ಸುಳ್ಳು ಆರೋಪಗಳನ್ನು ಮಾತ್ರ ಮಾಡುತ್ತದೆ. 371 (ಜೆ) ಜಾರಿಯಾಗಿದ್ದರೆ ಅದಕ್ಕೆೆ ಕಾರಣ ಮಲ್ಲಿಕಾರ್ಜುನ ಖರ್ಗೆ, ಧರ್ಮ ಸಿಂಗ್ ಅವರು ಕಾರಣ. ಇದರಲ್ಲಿ ಬಿಜೆಪಿಯ ಪಾತ್ರವಿಲ್ಲ ಎಂದರು.
ಬಿಜೆಪಿ ಬೊಗಳೆದಾಸರು, ಸುಳ್ಳು ಹೇಳುವುದು, ಅಪಪ್ರಚಾರ ಬಿಟ್ಟರೆ ಬೇರೇನೂ ಮಾಡುವುದಿಲ್ಲ ಎಂದರು.
ಅಸಮಾನತೆ ಹೋಗಲಾಡಿಸಲು ನಂಜುಂಡಪ್ಪ ಅವರ ವರದಿ ಆಧರಿಸಿ ಶಿಾರಸ್ಸುಗಳನ್ನು ಜಾರಿಗೆ ತರಲಾಗಿದೆ. ಇದರ ಪರಿಣಾಮಗಳ ಬಗ್ಗೆೆ ವರದಿ ಸಲ್ಲಿಸಲು ಗೋವಿಂದ ರಾವ್ ಸಮಿತಿ ರಚಿಸಲಾಗಿದೆ. ಶೀಘ್ರದಲ್ಲಿ ವರದಿಯ ಶಿಾರಸುಗಳನ್ನು ಜಾರಿ ಮಾಡಲಾಗುವುದು ಎಂದರು.
ಎ ಐ ಸಿ ಸಿ ಅಧ್ಯಕ್ಷರು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ. ಶಿವಕುಮಾರ್, ಸಚಿವರಾದ ಪ್ರಿಿಯಾಂಕ ಖರ್ಗೆ, ಕೃಷ್ಣಭೈರೇಗೌಡ, ಚನ್ನಬಸಪ್ಪ ದರ್ಶನಾಪುರ, ಶರಣ ಪ್ರಕಾಶ್ ಪಾಟೀಲ್, ಮಧು ಬಂಗಾರಪ್ಪ, ರಹೀಂ ಖಾನ್, ಅಜಯ್ ಸಿಂಗ್ಶಾಸಕರು ಉಪಸ್ಥಿಿತರಿದ್ದರು.
ಯಡ್ರಾಮಿ ತಾಲ್ಲೂಕಿನಲ್ಲಿ 906 ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿಗಳಿಗೆ ಶಂಕುಸ್ಥಾಾಪನೆ ಮತ್ತು ಉದ್ಘಾಾಟನೆ: ಹತ್ತು ವರ್ಷಗಳಲ್ಲಿ ಕಲ್ಯಾಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ: ಸಿಎಂ ಸಿದ್ದರಾಮಯ್ಯ

