ಸುದ್ದಿಮೂಲ ವಾರ್ತೆ ಬೆಂಗಳೂರು, ಜ.13:
ವಿಬಿಜಿ ರಾಮ್ ಜಿ ಕಾಯ್ದೆೆ ರದ್ದಾಗಿ ಮನರೇಗಾ ಕಾಯ್ದೆೆ ಪುನಃಸ್ಥಾಾಪನೆ ಆಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿಿ ಸಿದ್ದರಾಮಯ್ಯ ಹೇಳಿದರು.
ಕೆಪಿಸಿಸಿಯಿಂದ ಗಾಯತ್ರಿಿ ವಿಹಾರದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಮನರೇಗಾ ಉಳಿಸಿ ಆಂದೋಲನ ಆಯೋಜನೆ, ಬಿಎಲ್ಎ ಪಟ್ಟಿಿ, ಸ್ಥಳೀಯ ಸಂಸ್ಥೆೆ ಚುನಾವಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇದು ಗ್ರಾಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಆಗುವ ಆಂದೋಲನ. ಉತ್ತರ ಭಾರತದಲ್ಲಿ ಕಾಯ್ದೆೆಗಳ ಬದಲಾವಣೆಗೆ ರೈತರು ಹೋರಾಡಿದಂತೆ ಹೋರಾಟ ಮಾಡಬೇಕು ಎಂದು ಹೇಳಿದರು.
ಕಳೆದ ತಿಂಗಳು ಎಐಸಿಸಿ ಕಾರ್ಯಕಾರಿ ಸಮಿತಿ ಸಭೆ ನಡೆದಿದೆ. ಮನರೇಗಾ ರದ್ದು ಮಾಡಿರುವುದನ್ನು ಪಕ್ಷ ಬಹಳ ಗಂಭೀರವಾಗಿ ಪರಿಗಣಿಸಿದೆ. ಕೇಂದ್ರ ಸರ್ಕಾರ ಮನರೇಗಾ ರದ್ದು ಮಾಡಿ ವಿಬಿ ಜಿ ರಾಮ್ ಜಿ ಎಂಬ ಹೊಸ ಕಾಯ್ದೆೆ ರೂಪಿಸಿದೆ. 20 ವರ್ಷಗಳಿಂದ ಜಾರಿಯಲ್ಲಿದ್ದ ಕಾಯ್ದೆೆಯಡಿ 12.16 ಕೋಟಿ ಕಾರ್ಮಿಕರು ದೇಶದಲ್ಲಿ ಕೆಲಸ ಮಾಡುತ್ತಿಿದ್ದು, 6.21ಕೋಟಿ ಮಹಿಳೆಯರು ಕೆಲಸಮಾಡುತ್ತಿಿದ್ದಾರೆ. ಕಾಯ್ದೆೆಯಡಿ ಕೆಲಸ ಕೊಡಲಿಲ್ಲ ಎಂದು ನ್ಯಾಾಯಾಲಯಕ್ಕೆೆ ಕೂಡ ಹೋಗಬಹುದಿತ್ತು. ಇಂತಹ ಕಾಯ್ದೆೆಯನ್ನು ದುರ್ಬಲ ಗೊಳಿಸಿದ್ದಾರೆ ಎಂದು ಹೇಳಿದರು.
ಗ್ರಾಾಮೀಣ ಪ್ರದೇಶದಲ್ಲಿ 365 ದಿನಗಳ ಕಾಲ ಕೆಲಸ ಕೇಳಬಹುದಾಗಿತ್ತು. ಕಾರ್ಮಿಕರು ಅವರ ಊರಿನಲ್ಲಿ, ಅವರ ಜಮೀನಿನಲ್ಲಿಯೇ ಕೆಲಸ ಮಾಡಬಹುದಾಗಿತ್ತು. ಇದನ್ನು ಬದಲಾಯಿಸಿ ಮೋದಿ ಸರ್ಕಾರ ವಿಬಿಜಿ ರಾಮ್ ಜಿ ಕಾಯ್ದೆೆ ಜಾರಿಗೆ ತಂದಿದೆ. ದಶರಥ ರಾಮ, ಸೀತಾ ರಾಮ ಅಥವಾ ಕೌಶಲ್ಯ ರಾಮನಲ್ಲ. ಮಹಾತ್ಮಾಾ ಗಾಂಧಿ ಕೊಂದ ನಾಥೂರಾಮ ಇದು ಎಂದು ಸಿದ್ದರಾಮಯ್ಯ ಕಿಡಿಕಾರಿದರ.
ಈಗ ಕೇಂದ್ರ ಸರ್ಕಾರ ಅಧಿಸೂಚನೆ ಮೂಲಕ ಇಂಥ ಕಡೆ ಕೆಲಸ ಎಂದು ನಿಗದಿ ಮಾಡುತ್ತದೆ. ಅಲ್ಲಿ ಕೆಲಸ ಮಾಡಬೇಕು. ಈಗ ರಾಜ್ಯಗಳು ಶೇ 40 ವೆಚ್ಚವನ್ನು ಭರಿಸಬೇಕಿದೆ. 2500 ಕೋಟಿ ರೂಪಾಯಿಯನ್ನು ರಾಜ್ಯ ಸರ್ಕಾರ ಕೊಡಬೇಕಾಗುತ್ತದೆ. ಅದಕ್ಕಾಾಗಿಯೇ ನರೇಗಾ ಬಚಾವ್ ಆಂದೋಲನವನ್ನು ರೂಪಿಸಿದೆ. ಇದು ಜನಾಂದೋಲನವಾಗಿ ಪರಿವರ್ತನೆ ಆಗಬೇಕು ಎಂದರು.
ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲೂ ಪ್ರತಿಭಟನೆ:
ಉಪಮುಖ್ಯಮಂತ್ರಿಿ ಡಿ.ಕೆ. ಶಿವಕುಮಾರ್ ಮಾತನಾಡಿ, ಗ್ರಾಾಮೀಣ ಭಾಗದ ಅಭಿವೃದ್ಧಿಿಗೆ ನೆರವಾಗಿದ್ದ ಮನರೇಗಾ ಯೋಜನೆಯನ್ನು ಕೇಂದ್ರ ಬಿಜೆಪಿ ಸರ್ಕಾರ ಕೊಂದಿದೆ. ಸೋನಿಯಾ ಗಾಂಧಿ ಅವರು ಮನಮೋಹನ್ ಸಿಂಗ್ ಸರ್ಕಾರದಲ್ಲಿ ಸಂವಿಧಾನದ ಮೂಲಕ ಬಡವರಿಗೆ ಉದ್ಯೋೋಗ ಖಾತರಿ ಹಕ್ಕನ್ನು ನೀಡಿದ್ದರು. ಇದರಿಂದ ನಮ್ಮ ರಾಜ್ಯದ ಪಂಚಾಯಿತಿ ಹಾಗೂ ಗ್ರಾಾಮಗಳ ಮಟ್ಟದಲ್ಲಿ ಪ್ರತಿ ವರ್ಷ 6 ಸಾವಿರ ಕೋಟಿ ಮೊತ್ತದ ಕಾಮಗಾರಿಗಳು ನಡೆಯುತ್ತಿಿದ್ದವು ಎಂದು ಹೇಳಿದರು.
ನಾಳೆ ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರವಾಗಿ 2 ದಿನಗಳ ವಿಶೇಷ ಅಧಿವೇಶನ ಕರೆಯುವ ಬಗ್ಗೆೆ ತೀರ್ಮಾನ ಮಾಡಲಾಗುವುದು. ಈ ಅಧಿವೇಶನದಲ್ಲಿ ಮನರೇಗಾ ಯೋಜನೆ ಮರುಜಾರಿಯ ಮಹತ್ವ ಹಾಗೂ ಕೇಂದ್ರ ಸರ್ಕಾರದ ನೂತನ ಕಾಯ್ದೆೆಯ ಅನಾನುಕೂಲಗಳ ಬಗ್ಗೆೆ ವಿಸ್ತೃತವಾಗಿ ಚರ್ಚೆ ಮಾಡಲಾಗುವುದು. ನಂತರ ಸರ್ಕಾರ ನಿರ್ಣಯ ಕೈಗೊಳ್ಳಲಿದೆ ಎಂದು ಹೇಳಿದರು.
ಇನ್ನು ಈ ಎಐಸಿಸಿ ಕಾರ್ಯಕ್ರಮಗಳನ್ನು ನಿಮ್ಮ ಸ್ಥಳೀಯ ಮಟ್ಟದಲ್ಲಿ ನಡೆಸುವಾಗ ಎಲ್ಇಡಿ ಪರದೆ ಹಾಕಿಸಿ ಸೋನಿಯಾ ಗಾಂಧಿ ಅವರ ಸಂದೇಶವನ್ನು ಕಡ್ಡಾಾಯವಾಗಿ ಪ್ರಸಾರ ಮಾಡಬೇಕು. ಬಳಿಕ ಜ.26ರಿಂದ ೆ.7ರವರೆಗೆ ಎಲ್ಲಾ ವಿಧಾನಸಭೆ ಕ್ಷೇತ್ರ ಮಟ್ಟದಲ್ಲಿ 5-10 ಕಿ.ಮೀ ಪಾದಯಾತ್ರೆೆ ಮಾಡಬೇಕು. ಇದರಲ್ಲಿ ಎಲ್ಲಾ ಗ್ರಾಾಮ ಪಂಚಾಯಿತಿ ಸದಸ್ಯರು, ನಮ್ಮ ನಾಯಕರು ಶಾಸಕರು ಹಾಗೂ ಸಚಿವರ ನೇತೃತ್ವದಲ್ಲಿ ಪಾದಯಾತ್ರೆೆ ಮಾಡಬೇಕು. ನಂತರ ಮನರೇಗಾ ಮರುಜಾರಿಗೆ ತಾಲ್ಲೂಕು ಕಚೇರಿಯಲ್ಲಿ ಮನವಿ ಸಲ್ಲಿಸಬೇಕು. ಸುಮಾರು ಐದಾರು ಕಡೆ ಪಾದಯಾತ್ರೆೆ ಮಾಡಲು ನಾನೇ ಖುದ್ದಾಗಿ ಬರುತ್ತೇನೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎಐಸಿಸಿ ಕಾರ್ಯದರ್ಶಿಗಳಾದ ಗೋಪಿನಾಥ್ ಪಳನಿಯಪ್ಪನ್, ಮಯೂರ್ ಜೈಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್, ಸಚಿವರಾದ ಕೆ ಜೆ ಜಾರ್ಜ್, ಕೆ ಎಚ್ ಮುನಿಯಪ್ಪ, ಪ್ರಿಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿಿ, ಕೃಷ್ಣ ಬೈರೇಗೌಡ, ಸಂಸದ ಜಿ.ಕುಮಾರ ನಾಯಕ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಮತ್ತಿಿತರರು ಉಪಸ್ಥಿಿತರಿದ್ದರು.
ಮಹಾತ್ಮಾಾಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ ಎಂದು ಟೀಕೆ ಮನರೇಗಾ ಪುನಃ ಸ್ಥಾಪಿಸುವವರೆಗೂ ಹೋರಾಟ: ಸಿದ್ದರಾಮಯ್ಯ

