ಸುದ್ದಿಮೂಲ ವಾರ್ತೆ ಬೆಂಗಳೂರು, ಜ.13:
ರಾಜ್ಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಸಮಗ್ರ ಅಭಿವೃದ್ಧಿಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಕೆಎಸ್ಟಿಎ ಅಕಾಡೆಮಿಗೆ ಮುಂದಿನ ದಿನಗಳಲ್ಲಿ ಇನ್ನಷ್ಟು ಅಗತ್ಯ ಸಹಕಾರ ನೀಡುವ ಮೂಲಕ ಇದನ್ನು ಇಡೀ ದೇಶಕ್ಕೆೆ ಮಾದರಿ ಸಂಸ್ಥೆೆಯನ್ನಾಾಗಿ ರೂಪಿಸಲಾಗುವುದು ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಭರವಸೆ ನೀಡಿದರು.
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ ನೀಡಲಾಗುವ ಪ್ರತಿಷ್ಠಿಿತ ಜೀವಮಾನ ಸಾಧನೆ ಪ್ರಶಸ್ತಿಿಗಳನ್ನು ಇಬ್ಬರು ಹಿರಿಯ ವಿಜ್ಞಾನಿಗಳಿಗೆ ಪ್ರದಾನ ಮಾಡಿ ಮಾತನಾಡಿದರು.
ವಿದ್ಯಾಾರ್ಥಿಗಳಲ್ಲಿ ಹಾಗೂ ಯುವಜನರಲ್ಲಿ ವೈಜ್ಞಾನಿಕ ಮನೋಭಾವ ಮತ್ತು ತರ್ಕಬದ್ಧ ಚಿಂತನೆಯನ್ನು ಬೆಳೆಸುವುದು ಇಂದಿನ ತುರ್ತು ಅಗತ್ಯವಾಗಿದೆ. ಸಂಶೋಧನೆ ಮತ್ತು ಆವಿಷ್ಕಾಾರಗಳು ಕೇವಲ ಪ್ರಯೋಗಾಲಯಗಳಿಗೆ ಸೀಮಿತವಾಗದೆ. ಅವುಗಳ ಲಾಭ ಸಮಾಜದ ಕಟ್ಟಕಡೆಯ ವ್ಯಕ್ತಿಿಗೂ ತಲುಪಬೇಕು. ವಿಜ್ಞಾನ ಮತ್ತು ಸಮಾಜದ ನಡುವಿನ ಅಂತರವನ್ನು ಕಡಿಮೆ ಮಾಡಲು ಇಂತಹ ಕಾರ್ಯಕ್ರಮಗಳು ಸ್ಫೂರ್ತಿದಾಯಕವಾಗಿವೆ ಎಂದು ಅವರು ಅಭಿಪ್ರಾಾಯಪಟ್ಟರು.
ಕಾರ್ಯಕ್ರಮದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನಿರ್ದೇಶಕ ಸದಾಶಿವ ಪ್ರಭು (ಐಎಎಸ್), ಕೆಎಸ್ಟಿಎ ಅಧ್ಯಕ್ಷ ಪ್ರೊೊ. ರಾಜಾಸಾಬ್ ಎ.ಎಚ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಆರ್. ಇದ್ದರು.
ಪ್ರಶಸ್ತಿಿ ಪುರಸ್ಕೃತರು
ಪ್ರೊೊ. ಸಿ.ಎನ್.ಆರ್ ರಾವ್ ಕೆಎಸ್ಟಿಎ ಜೀವಮಾನ ಸಾಧನೆ ಪ್ರಶಸ್ತಿಿಯನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಕ್ಕೆೆ ನೀಡಿದ ಅಪಾರ ಕೊಡುಗೆಗಾಗಿ ಭಾರತೀಯ ಪ್ರಾಾಣಿಶಾಸ ಸರ್ವೇಕ್ಷಣಾ ಇಲಾಖೆಯ ಮಾಜಿ ನಿರ್ದೇಶಕ ಹಾಗೂ ಖ್ಯಾಾತ ವಿಜ್ಞಾನಿ ಡಾ. ರಾಮಕೃಷ್ಣ ಅವರಿಗೆ ಹಾಗೂ ಕನ್ನಡದಲ್ಲಿ ವಿಜ್ಞಾನ ಸಂವಹನಕ್ಕಾಾಗಿ ಜೀವಮಾನ ಸಾಧನೆ ಪ್ರಶಸ್ತಿಿ(2023) ಅನ್ನು ಕನ್ನಡ ಭಾಷೆಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಜನಪ್ರಿಿಯಗೊಳಿಸುವಲ್ಲಿ ಮಹತ್ತರ ಸೇವೆ ಸಲ್ಲಿಸಿದ ಸಿಎ್ಟಿಆರ್ಐ ಸಂಸ್ಥೆೆಯ ಮಾಜಿ ವಿಜ್ಞಾನಿ ಹರಿಪ್ರಸಾದ್ ಅವರಿಗೆ ಈ ಪ್ರಶಸ್ತಿಿಯನ್ನು ಪ್ರದಾನ ಮಾಡಲಾಯಿತು.
ವಿಜ್ಞಾನ ತಂತ್ರಜ್ಞಾನ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಬದ್ಧ

