ಸುದ್ದಿಮೂಲ ವಾರ್ತೆ ಸಿಂಧನೂರು, ಜ.18:
ಬಸವ ಚಾರಿಟೇಬಲ್ ಟ್ರಸ್ಟ್ ಅಡಿಯಲ್ಲಿ ಕ್ರಿಿಯಾತ್ಮಕ ಚಟುವಟಿಕೆಗಳನ್ನು ಮಾಡುವ ಮೂಲಕ ಅದರ ಏಳಿಗೆಗೆ ಹಗಲಿರುಳು ಶ್ರಮಿಸುತ್ತೇನೆ ಎಂದು ಟ್ರಸ್ಟ್ನ ನೂತನ ಅಧ್ಯಕ್ಷ ಶರಣಪ್ಪ ತೆಂಗಿನಕಾಯಿ ಹೇಳಿದರು.
ನಗರದ ಬಸವ ಚಾರಿಟೇಬಲ್ ಟ್ರಸ್ಟ್ನಲ್ಲಿ ರವಿವಾರ ನಡೆದ ಕಾರ್ಯ ಕ್ರಮದಲ್ಲಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಅವರು ಮಾತನಾಡಿದರು. ಟ್ರಸ್ಟ್ ನ ಅನೇಕ ಟ್ರಸ್ಟಿಿಗಳ ಹಾಗೂ ಸದಸ್ಯರ ಸಹಕಾರದೊಂದಿಗೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿಿದೆ. ಹಿಂದೆ ಬಾಲಕರ ವಸತಿ ನಿಲಯ ಆರಂಭಿಸಲಾಗಿತ್ತು. ಈಗ ಬಾಲಕಿಯರ ವಸತಿ ನಿಲಯ ನಡೆಯುತ್ತಿಿದೆ. ಹಿರಿಯರ ಮಾರ್ಗದರ್ಶನದಲ್ಲಿ ಅಭಿವೃದ್ದಿಗೆ ಶ್ರಮಿಸುವೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ.ಕೆ.ಶಿವರಾಜ ಅವರು ನೂತನ ಅಧ್ಯಕ್ಷ ಶರಣಪ್ಪ ತೆಂಗಿನಕಾಯಿ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಮಾಜಿ ಅಧ್ಯಕ್ಷ ಮುದ್ದನಗೌಡ ಪಾಟೀಲ್, ಕಾರ್ಯಾಧ್ಯಕ್ಷ ಗುಂಡಪ್ಪ ಬಳಿಗಾರ, ಖಜಾಂಚಿ ಪಂಪನಗೌಡ, ಕಾರ್ಯದರ್ಶಿ ಶಂಭನಗೌಡ ಹಾಗೂ ಇತರರು ಇದ್ದರು. ಪರಶುರಾಮ ಮಲ್ಲಾಾಪುರ ಕಾರ್ಯಕ್ರಮ ನಿರ್ವಹಣೆ ಮಾಡಿದರು.
ಬಸವ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಟ್ರಸ್ಟ್ನ ಏಳಿಗೆಗೆ ಶ್ರಮವಹಿಸುವೆ – ಶರಣಪ್ಪ ತೆಂಗಿನಕಾಯಿ

