ಸುದ್ದಿಮೂಲ ವಾರ್ತೆ ಕಲಬುರಗಿ, ಜ.20:
ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ನಿಷೇಧಿಸುವಿಕೆ, ನಿವಾರಣೆ 2013ರ ಕಾಯ್ದೆೆ ಅನ್ವಯ 10 ಕ್ಕಿಿಂತ ಹೆಚ್ಚು ಸಿಬ್ಬಂದಿಗಳು ಕೆಲಸ ಮಾಡುವ ಸರ್ಕಾರಿ ಕಚೇರಿಗಳಾಗಲಿ ಖಾಸಗಿ ಸಂಸ್ಥೆೆಗಳಿಗೆ ಆಂತರಿಕ ದೂರು ನಿವಾರಣಾ ಸಮಿತಿಯ ರಚನೆ ಕಡ್ಡಾಾಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಾಯಾಧೀಶರಾದ ಜಿಲ್ಲಾ ಕಾನೂನು ಸೇವಾ ಪ್ರಾಾಧಿಕಾರ ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಶ್ರೀನಿವಾಸ ನವಲೆ ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಾಧಿಕಾರ, ಪೋಲಿಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಿ ಇಲಾಖೆ ಹಾಗೂ ಮಹಿಳಾ ಸಬಲೀಕರಣ ಘಟಕ ಕಲಬುರಗಿ ಇವರ ಸಂಯುಕ್ತಾಾಶ್ರಯದಲ್ಲಿ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ, ನಿಷೇಧಿಸುವಿಕೆ ನಿವಾರಿಸುವಿಕೆ 2013ರ ಕಾಯ್ದೆೆ ಅನುಷ್ಠಾಾನ, ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಅರಿವು ಕಾರ್ಯಕ್ರಮ ಹಾಗೂ ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆೆ 2005 ನಿಯಮ 2006 ಅನುಷ್ಠಾಾನ ಕುರಿತು ಸಂರಕ್ಷಣಾಧಿಕಾರಿಗಳು ಮತ್ತು ಭಾಗೀದಾರ ಇಲಾಖೆಗಳ ಅಧಿಕಾರಿಗಳಿಗೆ ಎರಡು ದಿನದ ಓರಿಯೆಂಟೇಷನ್ ತರಬೇತಿ ಕಾರ್ಯಾಗಾರ ಉದ್ಫಾಾಟಿಸಿ ಮಾತನಾಡಿದರು.
ಮಹಿಳೆಯರಿಗೆ ಕಾನೂನು ಅರಿವಿನ ಬಗ್ಗೆೆ ಅಧಿಕಾರಿಗಳು ಹೆಚ್ಚಿಿನ ಜಾಗೃತಿ ಮೂಡಿಸುವಂತಹ ಕೆಲಸಗಳನ್ನು ಮಾಡಬೇಕು. ಮಹಿಳೆಯರ ಮೇಲಿನ ಲೈಂಗಿಕ ಪರಿಸ್ಥಿಿತಿ ಸಾಕಷ್ಟು ಚಿಂತಾಜನಕವಾಗಿತ್ತು. ಇತ್ತೀಚಿನ ದಿನಗಳಲ್ಲಿ ಸಂವಿಧಾನ ನಮಗೆ ಸಮಾನತೆ ಹಕ್ಕನ್ನು ಕೊಟ್ಟಿಿದೆ ಒಂದು ಸಮಾನ ರೀತಿಯಾದ ಹಕ್ಕನ್ನು ನಿರ್ಮಾಣ ಮಾಡಬೇಕು ಎಂದರು.
ಸರ್ಕಾರ ಲೈಂಗಿಕ ಕಿರುಕುಳಕ್ಕೆೆ ಒಳಗಾದ ಮಹಿಳೆಯರಿಗೆ ನ್ಯಾಾಯಾದೊರಕಿಸಿಕೊಟ್ಟಿಿದೆ. ಮಹಿಳೆಯರು ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರು ಸಂರಕ್ಷಣಾ ಕಾಯೆಯ (2005) ಅಡಿಯದಲ್ಲಿ ಅನ್ಯಾಾಯಕ್ಕೆೆ ಒಳಗಾದ ಮಹಿಳೆಗೆ ನ್ಯಾಾಯ ಒದಗಿಸಬಹುದು. ಪೋಲಿಸ್ ಇಲಾಖೆಯ ಹೆಣ್ಣು ಮಕ್ಕಳಿಗೆ ಧೈರ್ಯ ತುಂಬಬೇಕು ಎಂದರು.
ಜಿಲ್ಲಾಧಿಕಾರಿ ಬಿ ೌಜಿಯಾ ತರನ್ನುಮ್, ನಗರ ಪೋಲಿಸ್ ಆಯುಕ್ತ ಡಾ. ಶರಣಪ್ಪ ಎಸ್. ಡಿ ಜಿಲ್ಲಾ ಪಂಚಾಯತ್ ಸಿಇಓ ಭಂವರ್ ಸಿಂಗ್ ಮೀನಾ ಮಾತನಾಡಿದರು. ಕಲಬುರಗಿ ಜಿಲ್ಲಾ ನ್ಯಾಾಯಾಲದ ಹಿರಿಯ ನ್ಯಾಾಯವಾದಿಗಳು ಹಾಗೂ ಸಂಪನ್ಮೂಲ ವ್ಯಕ್ತಿಿಗಳಾದ ವಿನೋದ್ ಕುಮಾರ್, ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟುವ 2013 ಕಾಯ್ದೆೆ ಅನುಷ್ಠಾಾನ ಕುರಿತು ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಕರ ಪತ್ರಗಳನ್ನು ಬಿಡುಗಡೆ ಮಾಡಿದರು.
ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಆಯುಕ್ತರು ಅವಿನಾಶ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಾಧಿಕಾರಿ ಅಡ್ಡೂರು ಶ್ರೀನಿವಾಸಲು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಿ ಇಲಾಖೆಯ ಉಪನಿರ್ದೇಶಕ ರಾಜಕುರ್ಮಾ ರಾಠೋಡ, ತಾಲೂಕಾ ಶಿಶುಅಭಿವೃದ್ಧಿಿ ಯೋಜನಾಧಿಕಾರಿ ಶಿವಲೀಲಾ ಡೆಂಗಿ, ಸಹಾಯಕ ನಿರ್ದೇಶಕ ಶಿವಶರಣಪ್ಪ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.
ಸರ್ಕಾರಿ, ಖಾಸಗಿ ಸಂಸ್ಥೆಗಳಿಗೆ ಅಂತರಿಕ ದೂರು ನಿವಾರಣಾ ಸಮಿತಿ ರಚನೆ ಕಡ್ಡಾಾಯ: ನ್ಯಾ.ಶ್ರೀನಿವಾಸ ನವಲೆ

