ಸುದ್ದಿಮೂಲ ವಾರ್ತೆ ಬೀದರ್, ೆ.1:
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ 9ನೇ ಬಜೆಟ್ನಲ್ಲಿ ಯಾವುದೇ ಗಣನೀಯ ಸುಧಾರಣೆ ಕಾಣಿಸಿಲ್ಲ. ಸರ್ಕಾರಿ ವೆಚ್ಚಗಳ ಮೇಲೆ ನಿಯಂತ್ರಣದ ಲಕ್ಷಣವೂ ಇಲ್ಲ. ಹೆಚ್ಚು ತೆರಿಗೆ ಪಾವತಿಸುವ ರಾಜ್ಯವಾದ ಕರ್ನಾಟಕಕ್ಕೆೆ ಹೇಳಿಕೊಳ್ಳುವಂತಹ ಪ್ರಯೋಜನ ಈ ಬಜೆಟ್ನಲ್ಲಿ ಕಾಣುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆೆ ಪ್ರತಿಕ್ರಿಿಯೆ ನೀಡಿದ್ದಾರೆ.
ಹೈದ್ರಾಾಬಾದ್-ಬೆಂಗಳೂರು ಹೈಸ್ಪೀಡ್ ರೈಲು ಯೋಜನೆ ಸಮಾಧಾನಕರ ಬಹುಮಾನವಷ್ಟೇ. ರೈತರು ಬೆಳೆಯುವ ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುವಲ್ಲಿ ಕೇಂದ್ರ ಸರ್ಕಾರ ಮತ್ತೊೊಮ್ಮೆೆ ವಿಲವಾಗಿದೆ.
ಕೇಂದ್ರ ಸರ್ಕಾರ ಈ ಬಜೆಟ್ನಲ್ಲಿ ಶ್ರೀಗಂಧ ಬೆಳೆಗೆ ಉತ್ತೇಜನದ ಮಾತುಗಳನ್ನಾಾಡಿದೆ. ಆದರೆ ಅದು ಹೇಗೆ ಕಾರ್ಯಗತವಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಸ್ವಾಾಭಾವಿಕವಾಗಿ ಬೆಳೆಯುವ ಶ್ರೀಗಂಧದಲ್ಲಿ ತೈಲದ ಅಂಶ ಹೆಚ್ಚು ಇರುತ್ತದೆ. ಆದರೆ ರೈತರು ಜಮೀನಿನಲ್ಲಿ ಗೊಬ್ಬರ ಹಾಕಿ ಬೆಳೆಯುವ ಶ್ರೀಗಂಧಕ್ಕೆೆ ಹೆಚ್ಚಿಿನ ಬೆಲೆ ದೊರಕುವುದಿಲ್ಲ. ಇದರಿಂದ ಮುಂದಿನ ದಿನಗಳಲ್ಲಿ ರೈತರು ಸಂಕಷ್ಟ ಅನುಭವಿಸುವ ಸಾಧ್ಯತೆ ಇದೆ ಎಂದಿದ್ದಾರೆ.
ಕಳೆದ 12 ವರ್ಷಗಳಲ್ಲಿ ದೇಶದಲ್ಲಿ ನಿರುದ್ಯೋೋಗ ಪ್ರಮಾಣ ಏರಿಕೆಯಾಗಿದೆ. ವರ್ಷಕ್ಕೆೆ 2 ಕೋಟಿ ಉದ್ಯೋೋಗದ ಭರವಸೆ ನೀಡಿದ್ದರೂ, ಯುವಜನರಿಗೆ ಉದ್ಯೋೋಗ ಸೃಷ್ಟಿಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಲವಾಗಿದೆ. ಈ ಬಜೆಟ್ನಲ್ಲಿಯೂ ರಾಜ್ಯದ ಯುವಕರಿಗೆ ಭರವಸೆ ನೀಡುವಂತಹ ಯಾವುದೇ ಯೋಜನೆ ಕಾಣುತ್ತಿಿಲ್ಲ ಎಂದು ತಿಳಿಸಿದ್ದಾರೆ.
ಉದ್ಯೋಗ ಭರವಸೆ ನೀಡದ ನಿರಾಶಾದಾಯಕ ಬಜೆಟ್ : ಖಂಡ್ರೆ

