ಸುದ್ದಿಮೂಲ ವಾರ್ತೆ ಬೆಂಗಳೂರು, ೆ.02:
ಇದೇ ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಾಯವಾಗಲಿರುವುದರಿಂದ ಗ್ರಾಾ.ಪಂ. ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಆದೇಶ ಹೊರಡಿಸಲಾಗಿದೆ ಎಂದು ಗ್ರಾಾಮೀಣಾಭಿವೃದ್ಧಿಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಿಯಾಂಕ ಖರ್ಗೆ ತಿಳಿಸಿದರು.
ಇಂದು ಮಧ್ಯಾಾಹ್ನ ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆಯಡಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ್ ಅವರು ರಾಜ್ಯ ವ್ಯಾಾಪ್ತಿಿಯಲ್ಲಿ ಗ್ರಾಾಮ ಪಂಚಾಯಿತಿ ಸದಸ್ಯರ ಅವಧಿ ಮುಕ್ತಾಾಯಗೊಳ್ಳುತ್ತಿಿರುವುದರಿಂದ ಮುಂದಿನ ಚುನಾವಣೆ ನಡೆಸುವವರೆಗೂ ಆಡಳಿತಾಧಿಕಾರಿ ನೇಮಿಸುವ ಬದಲು ಈಗಿರುವ ಗ್ರಾಾಮ ಪಂಚಾಯಿತಿ ಸದಸ್ಯರನ್ನೇ ಮುಂದುವರೆಸಬೇಕೆಂದು ತಿಳಿಸಿದ್ದಕ್ಕೆೆ ಸಚಿವರು ಉತ್ತರಿಸಿದರು.
ಚುನಾವಣೆ ನಡೆಸುವುದು ತುಂಬಾ ತಡವಾಗುವುದಾದರೆ ಮಾತ್ರ ಕಾನೂನಿನಡಿ ಗ್ರಾಾಮ ಪಂಚಾಯಿತಿ ಸದಸ್ಯರನ್ನೇ ಮುಂದುವರೆಸಲು ಅವಕಾಶವಿರುತ್ತದೆ. ಆದರೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿರುವುದರಿಂದ ಗ್ರಾಾಮ ಪಂಚಾಯಿತಿ ಸದಸ್ಯರನ್ನೇ ಮುಂದುವರೆಸುವ ಅವಶ್ಯಕತೆ ಬರುವುದಿಲ್ಲ. ಚುನಾವಣೆಯನ್ನು ಸರ್ಕಾರ ಆದಷ್ಟು ಬೇಗ ನಡೆಸಲಿದೆ. ಆದಾಗ್ಯೂ ಚುನಾವಣೆ ನಡೆಸುವುದು ತಡವಾದಲ್ಲಿ ಸದಸ್ಯರ ಮನವಿ ಕುರಿತು ಕಾನೂನಿನಡಿ ಪರಿಶೀಲಿಸಲಾಗುವುದು ಎಂದರು.
ಗ್ರಾ.ಪಂ. ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ: ಪ್ರಿಯಾಂಕ ಖರ್ಗೆ

