ಸುದ್ದಿಮೂಲ ವಾರ್ತೆ ಬಳ್ಳಾರಿ, ೆ.03:
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎ್.ಎ.ಕ್ಯೂ ಗುಣಮಟ್ಟದ ಕಡಲೆಕಾಳು ಉತ್ಪನ್ನ ಖರೀದಿಸಲಾಗುವುದು ಎಂದು ಜಿಲ್ಲಾಾ ಟಾಸ್ಕ್ ೆರ್ಸ್ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಿಳಿಸಿದ್ದಾಾರೆ.
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎ್.ಎ.ಕ್ಯೂ ಗುಣಮಟ್ಟದ ಹಿಂಗಾರು ಹಂಗಾಮಿನ ಕಡಲೆಕಾಳು ಉತ್ಪನ್ನ ಖರೀದಿಸುವ ಮತ್ತು ಖರೀದಿ ಕೇಂದ್ರಗಳನ್ನು ಆರಂಭಿಸುವ ಕುರಿತು ನೂತನ ಜಿಲ್ಲಾಾಡಳಿತ ಭವನದ ಕೆಸ್ವಾಾನ್ ವಿಡಿಯೋ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾಾ ಟಾಸ್ಕ್ ೆರ್ಸ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಸಕ್ತ 2025-26ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಿಂಟಾಲ್ಗೆ ರೂ.5,875 ದಂತೆ ್ರೂಟ್ಸ್ ತಂತ್ರಾಾಂಶದಲ್ಲಿ ನೋಂದಣಿಯಾಗಿರುವ ರೈತರಿಂದ ಕಡಲೆಕಾಳು ಬೆಳೆದ ವಿಸ್ತೀರ್ಣಕ್ಕೆೆ ಅನುಗುಣವಾಗಿ ಉತ್ಪನ್ನ ಖರೀದಿಸಲಾಗುತ್ತದೆ. ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರಗಳನ್ನು ಸ್ಥಾಾಪಿಸಿ, ್ರೂಟ್ಸ್ ತಂತ್ರಾಾಂಶದ ಆಧಾರದ ಮೇಲೆ ರೈತರಿಂದ ಖರೀದಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕ ಓಂಕಾರಯ್ಯ, ಕೃಷಿ ಜಂಟಿ ನಿರ್ದೇಶಕ ಸೋಮಸುಂದರ್, ಸಹಕಾರ ಇಲಾಖೆಯ ಉಪನಿಬಂಧಕ ಜಿ.ಎಂ. ವೀರಭದ್ರಯ್ಯ, ಕಾನೂನು ಮಾಪನ ಶಾಸ ಇಲಾಖೆಯ ನಿರೀಕ್ಷಕ ಮನೋಜ್ ಕುಮಾರ್ ಸೇರಿದಂತೆ ಇತರರು ಇದ್ದರು.
ಕಡಲೆಕಾಳಿಗೆ ಕ್ವಿಿಂಟಾಲ್ಗೆ ರೂ.5,875 ಎಂಎಸ್ಪಿ

