ಸುದ್ದಿಮೂಲ ವಾರ್ತೆ ಬೆಂಗಳೂರು, ೆ.08:
ರಾಜ್ಯದ ಎಲ್ಲ ವಸತಿ ನಿಲಯಗಳಲ್ಲಿ ವಿದ್ಯಾಾರ್ಥಿನಿಯರ ಆರೋಗ್ಯ ತಪಾಸಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಹೇಳಿದರು.
ರಾಜ್ಯದ ವಸತಿ ನಿಲಯಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮೂರು ತಿಂಗಳಿಗೊಮ್ಮೆೆ ವಿದ್ಯಾಾರ್ಥಿನಿಯರ ಆರೋಗ್ಯ ತಪಾಸಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ವಿದ್ಯಾಾರ್ಥಿ ನಿಲಯಗಳಲ್ಲಿ ಗುಣಮಟ್ಟದ ಆಹಾರ ನೀಡಬೇಕು. ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು. ಸರ್ಕಾರಿ ಯೋಜನೆ, ಸೌಲಭ್ಯಗಳ ಬಗ್ಗೆೆ ಈ ಭಾಗದ ಜನರಿಗೆ ಇನ್ನೂ ಹೆಚ್ಚಿಿನ ಜಾಗೃತಿಯ ಅವಶ್ಯಕತೆ ಇದೆ. ಸರ್ಕಾರಿ ಸೌಲಭ್ಯವನ್ನು ಒದಗಿಸುವುದು ಅಧಿಕಾರಿಗಳ ಜವಾಬ್ದಾಾರಿಯಾಗಿದ್ದರೂ, ಸೌಲಭ್ಯಗಳನ್ನು ಹೇಗೆ ಪಡೆಯಬೇಕು ಎಂಬ ಬಗ್ಗೆೆ ಸಾರ್ವಜನಿಕರಿಗೂ ಅರಿವಿರಬೇಕು. ಪ್ರತಿ ಹಳ್ಳಿಿಯಲ್ಲಿಯೂ ಮಹಿಳಾ ಗ್ರಾಾಮಸಭೆಯನ್ನು ಕಡ್ಡಾಾಯವಾಗಿ ನಡೆಸಿ, ಮಹಿಳೆಯರ ಸಮಸ್ಯೆೆಗಳನ್ನು ಪರಿಹರಿಸಬೇಕು ಎಂದು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಅವರು ತಿಳಿಸಿದರು.
ಮಹಿಳೆಯರಿಗೆ ಸಂಬಂಧಿಸಿದ ಯಾವುದೇ ಸಮಸ್ಯೆೆಗಳನ್ನು ಪರಿಹರಿಸಲು ರಾಜ್ಯ ಮಹಿಳಾ ಆಯೋಗವು ಸದಾ ಸಿದ್ದವಾಗಿದೆ. ಮಹಿಳೆಯರ ರಕ್ಷಣೆಗೆ ಹಾಗೂ ಮಹಿಳೆಯರಿಗೆ ಕಾನೂನಾತ್ಮಕ ನೆರವು ನೀಡಲು ಬದ್ಧವಾಗಿರುತ್ತದೆ ಎಂದಯ ಹೇಳಿದ್ದಾರೆ.
ಆಂತರಿಕ ದೂರು ನಿವಾರಣಾ ಸಮಿತಿ ರಚನೆ:
ಜಿಲ್ಲೆಯ ಎಲ್ಲ ಸರ್ಕಾರಿ, ಖಾಸಗಿ ಸಂಸ್ಥೆೆಗಳಲ್ಲಿ 10ಕ್ಕಿಿಂತ ಹೆಚ್ಚು ಉದ್ಯೋೋಗಿಗಳು ಕಾರ್ಯನಿರ್ವಹಿಸುವ ಸ್ಥಳಗಳಲ್ಲಿ ಕಡ್ಡಾಾಯವಾಗಿ ಆಂತರಿಕ ದೂರು ನಿವಾರಣಾ ಸಮಿತಿಯನ್ನು ರಚಿಸಲು ಸೂಚಿಸಲಾಗಿದೆ. ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಸುರಕ್ಷತೆಯ ವಾತಾವರಣ ನಿರ್ಮಿಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ. ಮದ್ಯ ಹಾಗೂ ಮಾದಕ ವಸ್ತುಗಳ ಮಾರಾಟ ಮತ್ತು ಬಳಕೆಗೆ ಕಡಿವಾಣ ಹಾಕುವಂತೆ ಅಬಕಾರಿ ಇಲಾಖೆಗೆ ಸೂಚಿಸಲಾಗಿದೆ ಎಂದರು.
ಕೊಪ್ಪಳ ನಗರದ ಸಿದ್ದೇಶ್ವರ ನಗರದಲ್ಲಿನ ಅಲೆಮಾರಿ ಜನಾಂಗ ಭೇಟಿ ಮಾಡಿದ್ದು, ಅವರಿಗೆ ನಗರಸಭೆಯಿಂದ ಅಗತ್ಯ ಸೌಕರ್ಯ ಒದಗಿಸಲಾಗಿದೆ. ಆ ಪ್ರದೇಶದಲ್ಲಿನ ವಿದ್ಯುತ್ ಕಂಬ ದುರಸ್ಥಿಿಗೊಳಿಸಲಾಗಿದೆ. ಆದರೆ ಅಲ್ಲಿನ ಅಂಗನವಾಡಿ ಪಕ್ಕದಲ್ಲಿಯೇ ರೈಲು ಹಳಿ ಇರುವುದರಿಂದ ಪೋಷಕರು ಮಕ್ಕಳನ್ನು ಅಂಗನವಾಡಿಗೆ ಕಳುಹಿಸಲು ಹಿಂದೇಟು ಹಾಕುತ್ತಿಿದ್ದು, ಸುಮಾರು 3 ಕಿ.ಮೀ ವ್ಯಾಾಪ್ತಿಿಯಲ್ಲಿ ಸುರಕ್ಷಾ ೆನ್ಸಿಿಂಗ್ ಅಳವಡಿಸಲು ಸೂಚನೆ ನೀಡಿದ್ದೇನೆ ಎಂದು ಅವರು ಮಾಹಿತಿ ನೀಡಿದರು.
ಕೊಪ್ಪಳದ ತಾಯಿ ಮತ್ತು ಮಗುವಿನ ಆಸ್ಪತ್ರೆೆಯಲ್ಲಿ ಎಲ್ಲ ರೀತಿಯ ಸೌಕರ್ಯಗಳನ್ನು, ಗುಣಮಟ್ಟದ ಆಹಾರವನ್ನು ನೀಡುತ್ತಿಿರುವುದು ಪ್ರಶಂಸನೀಯ. ಕಾರಟಗಿ ತಾಲ್ಲೂಕಿನ ಮೊರಾರ್ಜಿ ದೇಸಾಯಿ ವಿದಾರ್ಥಿನಿಯರ ವಸತಿ ನಿಲಯಕ್ಕೆೆ ಭೇಟಿ ನೀಡಿದ್ದು, ಅಲ್ಲಿ ಉತ್ತಮ ಸೌಕರ್ಯಗಳನ್ನು ವಿದ್ಯಾಾರ್ಥಿನಿಯರಿಗೆ ಒದಗಿಸಲಾಗಿದೆ. ಜಿಲ್ಲೆಯ ಎಲ್ಲ ವಸತಿ ನಿಲಯಗಳಲ್ಲಿಯೂ ಇಂತಹ ವ್ಯವಸ್ಥೆೆಗಳನ್ನು ಒದಗಿಸಬೇಕು. ನರೇಗಾ ಕಾರ್ಯಕ್ರಮದಡಿ ಶೇ.50 ರಷ್ಟು ಜಾಬ್ಕಾಾರ್ಡ್ಗಳನ್ನು ಮಹಿಳೆಯರಿಗೆ ನೀಡಬೇಕು. ಹೆಚ್ಚಿಿನ ಉದ್ಯೋೋಗದಿನಗಳನ್ನು ಒದಗಿಸಬೇಕು ಎಂದು ಇಲಾಖಾ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮಾಹಿತಿ ನೀಡಿದರು.
ಮೂರು ತಿಂಗಳಿಗೊಮ್ಮೆ ವಿದ್ಯಾರ್ಥಿನಿಯರ ಆರೋಗ್ಯ ತಪಾಸಣೆ ಕಡ್ಡಾಯ – ನಾಗಲಕ್ಷ್ಮೀ ಚೌಧರಿ

