ನವದೆಹಲಿ, ೆ.11:
ರಾಷ್ಟ್ರದ ಮೂರು ಪ್ರಮುಖ ಬಂದರುಗಳನ್ನು ಜೋಡಿಸುವ ಬೆಂಗಳೂರಿನಿಂದ – ಮಂಗಳೂರಿನವರೆಗೆ ಕೈಗಾರಿಕಾ ಕಾರಿಡಾರ್ ಅನ್ನು ವಿಸ್ತರಣೆ ಮಾಡಬೇಕು ಎಂದು ರಾಜ್ಯ ಸಭಾ ಸದಸ್ಯ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕೋರಿದರು.
ರಾಜ್ಯ ಸಭಾ ಕಲಾಪದಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊೊಂಡು ಮಾತನಾಡಿದರು.
ಈಗಾಗಲೇ ಚೆನ್ನೈನಿಂದ ಬೆಂಗಳೂರು ಮತ್ತು ಹೈದರಾಬಾದ್ನಿಿಂದ ಬೆಂಗಳೂರು ನಡುವಿನ ಪ್ರಮುಖ ಬಂದರುಗಳನ್ನು ಹೊಂದಿರುವ ಕೈಗಾರಿಕಾ ಕಾರಿಡಾರ್ ಯೋಜನೆಗಳಿಗೆ ಅನುಮೋದನೆ ನೀಡುವ ಸರ್ಕಾರದ ನಿರ್ಧಾರ ಸ್ವಾಾಗತಿಸುತ್ತೇನೆ. ಅದೇ ರೀತಿ, ಬೆಂಗಳೂರಿನಿಂದ ಮಂಗಳೂರಿನವರೆಗೆ ಈ ಕೈಗಾರಿಕಾ ಕಾರಿಡಾರ್ ವಿಸ್ತರಿಸಿದರೆ ಕೈಗಾರಿಕಾ ಅಭಿವೃದ್ಧಿಿಗೆ ಬಹಳಷ್ಟು ಅನುಕೂಲ ಆಗುತ್ತದೆ. ಮಂಗಳೂರು ಕೂಡ ಪ್ರಮುಖ ಬಂದರು ಆಗಿದ್ದು; ವಿಶಾಖಪಟ್ಟಣ, ಚೆನ್ನೈ ಹಾಗೂ ಮಂಗಳೂರು ಬಂದರುಗಳನ್ನುಜೋಡಿಸಿದರೆ ರಾಷ್ಟ್ರದ ಕೈಗಾರಿಕಾಭಿವೃದಿಗೆ ಪರಿವರ್ತನಾತ್ಮಕ ವೇಗ ಬರುತ್ತದೆ ಎಂದು ಅವರು ಪ್ರತಿಪಾದಿಸಿದರು.
ಹಲಸು, ಹುಣಸೆ, ನೇರಳೆ ಮಂಡಳಿ ರಚನೆ:
ಕರ್ನಾಟಕವೂ ಸೇರಿ ತಮಿಳುನಾಡು, ಕೇರಳ ಮುಂತಾದ ರಾಜ್ಯಗಳಲ್ಲಿ ಬೆಳೆಯಲಾಗುವ ಹಲಸು, ಹುಣಸೆ, ನೇರಳೆಗೆ ಉತ್ತೇಜನ ನೀಡಲು ಮಕಾನ ಮಂಡಳಿಯಂತೆ ಪ್ರತ್ಯೇಕ ಮಂಡಳಿ ರಚನೆ ಮಾಡಬೇಕು. ಈ ಮೂರು ಬೆಳೆಗಳು ಔಷಧೀಯ ಗುಣಗಳನ್ನು ಹೊಂದಿದ್ದು, ದಕ್ಷಿಣದ ಭಾಗದಲ್ಲಿ ವ್ಯಾಾಪಕವಾಗಿ ಬೆಳೆಯಲಾಗುತ್ತಿಿದೆ. ಕಡಿಮೆ ಮಳೆ ಅಗತ್ಯವಿರುವ ಬೆಳೆಗಳು ಎಂದು ದೇವೇಗೌಡರು ಮನವಿ ಮಾಡಿದರು.
ಮಂಡಳಿ ರಚನೆ ಬಗ್ಗೆೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಅಗತ್ಯ ಕ್ರಮ ವಹಿಸುತ್ತಾಾರೆ ಎಂಬ ನಂಬಿಕೆ ಹೊಂದಿದ್ದೇನೆ ಎಂದು ವಿಶ್ವಾಾಸ ವ್ಯಕ್ತಪಡಿಸಿದರು.

