ಸುದ್ದಿಮೂಲ ವಾರ್ತೆ ಹಾಸನ, ೆ.13:
ಕುಟುಂಬದಲ್ಲಿ ಮಕ್ಕಳು ಬೇರೆ ಕಡೆ ಕೆಲಸ ಮಾಡಿಕೊಂಡು ಆದಾಯ ತೆರಿಗೆ ಪಾವತಿಸುತ್ತಿಿದ್ದರೆ ತಂದೆ-ತಾಯಿಗೆ ಬಿಪಿಎಲ್ ಕಾರ್ಡ್ ನೀಡಬಹುದು. ಈ ಬಗ್ಗೆೆ ಸೂಕ್ಷ್ಮವಾಗಿ ಪರಿಶೀಲಿಸಬೇಕು ಎಂದು ಸಚಿವ ಕೆಹೆಚ್. ಮುನಿಯಪ್ಪ
ಹಾಸನ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕುಟುಂಬದಲ್ಲಿ ಮಕ್ಕಳು ಬೇರೆ ಕಡೆ ಕೆಲಸ ಮಾಡಿಕೊಂಡು ಆದಾಯ ತೆರಿಗೆ ಪಾವತಿಸುತ್ತಿಿದ್ದರೆ ಪೋಷಕರಿಗೆ ತೊಂದರೆಯಾಗಬಾರದು. ಇಂತಹ ಪ್ರಕರಣಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿ ಬಿಪಿಎಲ್ ಕಾರ್ಡ್ ನೀಡಬಹುದು ಎಂದು ಹೇಳಿದರು.
ಬಿಪಿಎಲ್ ಕಾರ್ಡ್ ಪರಿಷ್ಕರಣೆ ವೇಳೆ ಮನೆ ಸಾಲ, ಬೈಕ್ ಸಾಲಕ್ಕಾಾಗಿ ಆದಾಯ ತೆರಿಗೆ ಪಾವತಿಸುತ್ತಿಿರುವ ವಿನಾಯಿತಿ ನೀಡಬೇಕು. ದೀರ್ಘ ಕಾಲದಿಂದ ತೆರಿಗೆ ಪಾವತಿ ಮಾಡುತ್ತಿಿರುವರ ಕಾರ್ಡ್ಗಳನ್ನು ಎ.ಪಿ.ಎಲ್ ಮಾತ್ರ ಪರಿವರ್ತಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
75 ವಯಸ್ಸಿಿನ ಮೇಲ್ಪಟ್ಟ ಒಂಟಿ ಹಿರಿಯ ನಾಗರೀಕರು ಮಾತ್ರ ಇರುವ ಮನೆಗಳಿಗೆ ಅನ್ನಸುವಿಧಾ ಯೋಜನೆ ಮೂಲಕ ಅರ್ಹ ಲಾನುಭವಿಗಳ ನ್ಯಾಾಯಬೆಲೆ ಅಂಗಡಿಯವರು ಮನೆ ಬಾಗಿಲಿಗೆ ಪಡಿತರ ವಿತರಣೆ ಮಾಡಬೇಕು ಅಧಿಕಾರಿಗಳು ಆದ್ಯತೆ ಮೇಲೆ ಸಮರ್ಪಕವಾಗಿ ಅನುಷ್ಠಾಾನ ಮಾಡುವಂತೆ ತಿಳಿಸಿದರು.
ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಗೆ ನಿಗದಿಪಡಿಸಿರುವ ರಾಗಿ ಖರೀದಿ ವೇಳೆಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಆಹಾರ ಇಲಾಖೆಯ ಜಂಟಿ ನಿರ್ದೇಶಕರು ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ನಿರ್ದೇಶನ ನೀಡಿದರು.
ಹೊಸ ನ್ಯಾಾಯಬೆಲೆ ಅಂಗಡಿಗಳನ್ನು ಮಂಜೂರು ಮಾಡುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಸಮುದಾಯದ ಸಂಘ ಸಂಸ್ಥೆೆಗಳಿಗೆ/ಸಮುದಾಯದ ಖಾಸಗಿ ವ್ಯಕ್ತಿಿಗಳಿಗೆ ಮೀಸಲಾತಿಯನ್ನು ಅನುಸರಿಸಿ ಹೊಸ ನ್ಯಾಾಯಬೆಲೆ ಅಂಗಡಿ ಮಂಜೂರು ಮಾಡಲು ಆದ್ಯತೆ ನೀಡಬೇಕು ಎಂದು ತಿಳಿಸಿದರು.
ದೇಶದ ವಿವಿಧ ರಾಜ್ಯಗಳಿಗೆ ಹಾಗೂ ವಿದೇಶಗಳಿಗೆ ರಾಗಿಗೆ ಬೇಡಿಕೆ ಬರುತ್ತಿಿದ್ದು, ಅಧಿಕಾರಿಗಳು ಗುಣಮಟ್ಟದ ಕಾಯ್ದುಕೊಂಡು ರಾಗಿಯನ್ನು ಖರೀದಿ ಮಾಡಬೇಕು. ರೈತರು ಸಹ ಒಳ್ಳೆೆಯ ರಾಗಿ ಮಾರಾಟ ಮಾಡಬೇಕು ಎಂದರು.
ಸರ್ಕಾರದಿಂದ ಇಂದಿರಾ ಕಿಟ್ ನೀಡುವ ಯೋಜನೆ ಜಾರಿಗೊಳಿಸಿದ್ದು, ಟೆಂಡರ್ ಪ್ರಕ್ರಿಿಯೆ ನಡೆಯುತ್ತಿಿದೆ. ೆಬ್ರವರಿ ಅಂತ್ಯ ಅಥವಾ ಮಾರ್ಚ್ ತಿಂಗಳಲ್ಲಿ ಕಿಟ್ ನೀಡಲಾಗುವುದು. ಕಿಟ್ನಲ್ಲಿ ಬೆಲೆ, ಸಕ್ಕರೆ, ಅಡುಗೆ ಎಣ್ಣೆೆ, ಉಪ್ಪುು ನೀಡಲಾಗುವುದು. ಅದರಿಂದ ಪೌಷ್ಟಿಿಕ ಆಹಾರ ಸಿಗುತ್ತದೆ ಎಂದು ಅವರು ತಿಳಿಸಿದರು.
ತೂಕ ಅಳತೆಯ ಪರಿಶೀಲನೆಯನ್ನು ನಡೆಸಬೇಕು. ಗ್ರಾಾಹಕರಿಗೆ ಉಂಟಾಗುವ ನಷ್ಟವನ್ನು ತಡೆಯಬೇಕು, ಇಲಾಖೆಗೆ ನಿಗದಿಪಡಿಸುವ ಗುರಿಯನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಆರ್.ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಟಾಾಧಿಕಾರಿ ಶುಭನ್ವಿಿತಾ, ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ್, ಸಮಾಜ ಕಲ್ಯಾಾಣ ಇಲಾಖೆ ಉಪನಿರ್ದೇಶಕ ದೂದಪೀರ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಾಹಕ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ಅರುಣ್ ಕುಮಾರ್ ಸಂಗಾವಿ ಹಾಗೂ ಮತ್ತಿಿತರರು ಉಪಸ್ಥಿಿತರಿದ್ದರು.
ಅಧಿಕಾರಿಗಳಿಗೆ ಸೂಚನೆ ನೀಡಿದ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಮಕ್ಕಳು ಐಟಿ ರಿಟರ್ನ್ ಸಲ್ಲಿಸುತ್ತಿದ್ದರೂ ಪೋಷಕರಿಗೆ ಬಿಪಿಎಲ್ ಕಾರ್ಡ್

