ಸುದ್ದಿಮೂಲ ವಾರ್ತೆ ರಾಯಚೂರು, ೆ.13:
ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಲಿತಾಂಶ ಸುಧಾರಿಸಿ, ರಾಜ್ಯದಲ್ಲಿ ರಾಯಚೂರು ಜಿಲ್ಲೆಯು ಉತ್ತಮ ಸ್ಥಾಾನ ಕಾಯ್ದುಕೊಳ್ಳುವ ಹಾಗೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಸಂಬಂಧಿಸಿದ ಅಧಿಕಾರಿಗಳು ತಮ್ಮ ಜವಾಬ್ದಾಾರಿ ಅರಿತು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೀಶ್ ಕೆ. ಅವರು ಹೇಳಿದರು.
ೆ.12ರ ಗುರುವಾರ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಲಿತಾಂಶ ಸುಧಾರಣೆಗಾಗಿ ಹಮ್ಮಿಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ವೇಳೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ ಅವರು ಮಾತನಾಡಿ, ವಾರ್ಷಿಕ ಪರೀಕ್ಷೆಗೆ ವಿದ್ಯಾಾರ್ಥಿಗಳನ್ನು ಸನ್ನದ್ಧಗೊಳಿಸಲು ಪೂರಕ ಬೋಧನೆ ಮತ್ತು ಪುನರಾವರ್ತನೆಗೆ ಆದ್ಯತೆ ನೀಡಬೇಕೆಂದರು.
ಇದೇ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆ.ಡಿ.ಬಡಿಗೇರ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸಿಆರ್ಪಿ, ಬಿಆರ್ಪಿ ಸೇರಿದಂತೆ ವಿವಿಧ ಶಾಲೆಯ ಮುಖ್ಯಗುರುಗಳು ಇದ್ದರು.
ಎಸ್ಎಸ್ಎಲ್ಸಿ ಪರೀಕ್ಷಾ ಲಿತಾಂಶ ಸುಧಾರಣೆಗೆ ಜಿಲ್ಲಾಾಧಿಕಾರಿ ಸೂಚನೆ

