ಸುದ್ದಿಮೂಲ ವಾರ್ತೆ
ಕಲಬುರಗಿ,ಮೇ.11: ಬಿಜೆಪಿ ಕಾರ್ಯಕರ್ತನಾದ ರಾಮು ರಾಥೋಡ್ ಅವರು ಇಂದು ಬೆಳಗ್ಗೆ ಹೊಲದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಈ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ ಬಸಂತಪುರದಲ್ಲಿ ನಡೆದಿದೆ. ಬಿಜೆಪಿ ಕಾರ್ಯಕರ್ತ ರಾಮು ರಾಥೋಡ್ ನಿನ್ನೆ ರಾತ್ರಿ ಮನೆಗೆ ಬಂದಿರಲಿಲ್ಲ ಇಂದು ಬೆಳಗ್ಗೆ ಹೊಲ ಒಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಮೇ.10 ರಂದು ಚುನಾವಣ ಹಿನ್ನೆಲೆ ಬಿಜೆಪಿ ಪೋಲಿಂಗ್ ಬೂತ್ ಏಜೆಂಟ್ ಆಗಿ ಕಾರ್ಯನಿರ್ವಹಿಸಿದ್ದ ರಾಮು ರಾಥೋಡ್ (45) ಇಂದು ಶವವಾಗಿ ಪತ್ತೆಯಾಗಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಇದರ ಬೇನ್ನಲೆ ರಾಮು ಅವರನ್ನು ಕೊಲೆ ಮಾಡಿ ನೇಣು ಹಾಕಿದ್ದಾರೆಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಈ ಪ್ರಕರಣ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.