ಸುದ್ದಿಮೂಲ ವಾರ್ತೆ
ಹೊಸಕೋಟೆ,ಆ.30 : ಕುಟುಂಬ ನಿರ್ವಹಣೆಯಲ್ಲಿ ಯಜಮಾನಿಯ ಪಾತ್ರ ಪ್ರಮುಖವಾಗಿದ್ದು, ಆಕೆ ಆರ್ಥಿಕವಾಗಿ ಸಬಲವಾದಲ್ಲಿ ಕುಟುಂಬ ನಿರ್ವಹಣೆ ಉತ್ತಮ ಗುಣಮಟ್ಟದಿಂದ ಕೂಡಿರುತ್ತದೆ. ಆದ್ದರಿಂದ ರಾಜ್ಯ ಸರ್ಕಾರ ಮನೆ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ. ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಇಂದಿನಿಂದಲೇ ಜಾರಿಗೆ ತಂದಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಸಿಇಓ ಕೆ.ಎನ್.ಅನುರಾಧ ಹೇಳಿದರು.
ಹೊಸಕೋಟೆ ತಾಲೂಕು ನಂದಗುಡಿ ಹೋಬಳಿ ಮುಗಬಾಳ ಗ್ರಾಮದಲ್ಲಿ ಆಯೋಜಿಸಿದ್ದ ಗೃಹಲಕ್ಷ್ಮಿ ಯೋಜನೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಉದ್ಯೋಗದಲ್ಲಿ ತೊಡಗದೆ ಇರುವ ಅನೇಕ ಮಹಿಳೆಯರು ತಾವು ಬಯಸಿದ ವಸ್ತು ಪಡೆಯಲು ಇಂದಿಗೂ ತಂದೆ, ಗಂಡನ ಮೇಲೆ ಅವಲಂಬಿತರಾಗಿದ್ದು ಸರ್ಕಾರದ ಈ ಯೋಜನೆಯು ಅವರನ್ನು ಆರ್ಥಿಕವಾಗಿ ಸಲಬರನ್ನಾಗಿಸುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರತಿಭಾ ಶರತ್ ಬಚ್ಚೇಗೌಡ, ಜಿಲ್ಲಾ ಪಂಚಾಯಿತಿಯ ಡಿಎಸ್. ರಮೇಶ್, ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕರಾದ ವಿಠಲ್ ಕವಳೆ, ಜಿಲ್ಲಾ ಪಂಚಾಯತಿಯ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ನಾಗರಾಜ್, ಹೊಸಕೋಟೆ ಇ.ಓ. ಚಂದ್ರಶೇಖರ್,
ತಹಶೀಲ್ದಾರ್ ವಿಜಯಕುಮಾರ್, ಸಿಡಿಪಿಓ ವಿದ್ಯಾ ವಸ್ತ್ರದ್,, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ರೇಖಾ, ಮುಗಬಾಳ ಗ್ರಾಮ ಪಂಚಾಯತಿ ಅಧ್ಯಕ್ಷೆ ಭಾಗ್ಯ, ಉಪಾಧ್ಯಕ್ಷ ನಾರಾಯಣಮ್ಮ ಸೇರಿದಂತೆ ತಾಲೂಕಿನ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತಿ ಸದಸ್ಯರುಗಳು ಸಾವಿರಕ್ಕೂ ಹೆಚ್ಚು ಫಲಾನುಭವಿಗಳು ಭಾಗವಹಿಸಿದ್ದರು.