ಸುದ್ದಿಮೂಲ ವಾರ್ತೆ
ತುಮಕೂರು, ಆ.3 : ಜಿಲ್ಲೆಯ ಪಾಲೆಹಟ್ಟಿಗೆ ಆ. 2 ರಂದು ಭೇಟಿ ನೀಡಿದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ. ನೂರುನ್ನೀಸ್ ರವರು ಕಾನೂನು ಅರಿವು ಮೂಲಕ ನಾಗರೀಕರಣ ಅಭಿಯಾನವನ್ನು ಹಮ್ಮಿಕೊಂಡು ಅರಿವು ಮೂಡಿಸಿದರು.
ಪೋಕ್ಸೋ ಕಾಯ್ದೆ ಹಾಗೂ ಕರ್ನಾಟಕ ಅಮಾನವೀಯ ಕೆಟ್ಟ ಪದ್ಧತಿ ಪ್ರತಿಬಂಧ ಮತು ನಿರ್ಮೂಲನೆ ಅಧಿನಿಯಮ -2017 ಮೊದಲಾದ ಕಾನೂನುಗಳ ಬಗ್ಗೆ ಗ್ರಾಮಸ್ಥರೊಂದಿಗೆ ಸಂವಾದ ನಡೆಸಿದರು. ಅಮಾನವೀಯತೆಯ ಹಾಗೂ ಮೌಢ್ಯಚಾರಣೆ ವಿರುದ್ಧದ ಅರಿವು ನಾಗರಿಕರಲ್ಲಿ ಮೂಡಬೇಕು. ಸಾರ್ವಜನಿಕರ ಸಂಪೂರ್ಣ ಸಹಕಾರದಿಂದ ಸಮಾಜದಲ್ಲಿರುವ ಮೌಢ್ಯಗಳನ್ನು ಹೋಗಲಾಡಿಸಲು ಸಾಧ್ಯವಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಸ್ಥಳೀಯ ಜನ ಪ್ರತಿನಿಧಿಗಳು, ಪಂಚಾಯತ್ಸದಸ್ಯರು ಹಾಗೂ ಊರಿನ ಮುಖಂಡರು , ಮತ್ತಿತರರ ಹಾಜರಿದ್ದರು.