ಸುದ್ದಿಮೂಲ ವಾರ್ತೆ
ತುಮಕೂರು, ಏ.27: ಒಂದಕ್ಕಿಂತ ಹೆಚ್ಚಿನ ಮತಗಟ್ಟೆಗಳು ಇರುವ ಕಡೆ ಹಾಗೂ ಕಡಿಮೆ ಮತದಾನವಾಗಿರುವ ಮತಗಟ್ಟೆಗಳ ಮತದಾರರಿಗೆ ಏಪ್ರಿಲ್ 29 ಹಾಗೂ 30 ರಂದು “ನಮ್ಮ ನಡೆ ಮತದಾರರಿಗೆ ಮತಗಟ್ಟೆ ತೋರಿಸುವ ಕಡೆ” ಕಾರ್ಯಕ್ರಮದಡಿ ಬೂತ್ ವಾಕ್ ಆಯೋಜಿಸಲಾಗುವುದು ಎಂದು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆ ಅಂಗವಾಗಿ ಮತದಾರರಿಗೆ ಜಾಗೃತಿ ಮೂಡಿಸಲು ಜಿಲ್ಲಾದ್ಯಂತ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಈ ಪ್ರಯುಕ್ತ ಮತಗಟ್ಟೆಗಳ ವಿವರಗಳನ್ನು ಮತದಾರರಿಗೆ ನೀಡುವ ಸಂಬಂಧ ಜಿಲ್ಲೆಯ ಎಲ್ಲಾ ಮತದಾರರು ಅವರುಗಳು ಮತ ಹಾಕುವ ಮತಗಟ್ಟೆಗಳನ್ನು ನೋಡಿಕೊಂಡು ಹೋಗುವ ಈ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲೆಡೆ ಹಮ್ಮಿಕೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.