ಸುದ್ದಿಮೂಲ ವಾರ್ತೆ ಬೆಂಗಳೂರು, ಅ.09:
ಉದ್ಯೋೋಗಸ್ಥ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಋತು ಚಕ್ರ ರಜೆ ಅಥವಾ ಮುಟ್ಟಿಿನ ರಜೆ ನೀಡುವ ಪ್ರಸ್ತಾಾವನೆಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಮುಖ್ಯಮಂತ್ರಿಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಿ ನಡೆಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ. ಪಾಟೀಲ್, ತಿಂಗಳಿಗೆ ಒಂದು ದಿನ ಮುಟ್ಟಿಿನ ರಜೆ ನೀಡಲಾಗುವುದು ಎಂದರು.
ರಾಜ್ಯದ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್, ಬಹುರಾಷ್ಟ್ರೀಯ ಕಂಪನಿಗಳು, ಐಟಿ, ಖಾಸಗಿ ಕೈಗಾರಿಕಾ ವಲಯಗಳಲ್ಲಿ ಮುಟ್ಟಿಿನ ರಜೆ ಅನ್ವಯವಾಗಲಿದೆ ಎಂದು ಪಾಟೀಲ್ ತಿಳಿಸಿದರು.
ಸಭೆ ಬಳಿಕ ವಿಧಾನಸೌಧದ ಹೊರತೆ ಈ ಬಗ್ಗೆೆ ಮಾತನಾಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್, ಮುಟ್ಟಿಿನ ರಜೆ ಕೊಡುವ ನಿಯಮ ಜಾರಿಗೆ ತರಲು ಕಳೆದ ಒಂದು ವರ್ಷದದಿಂದ ಪ್ರಯತ್ನ ಮಾಡಿದ್ದೆವು. ಮಹಿಳೆಯರು ಹಲವು ಕೆಲಸಗಳನ್ನು ಮಾಡುತ್ತಾಾರೆ. ಮನೆ ಕೆಲಸದ ಜೊತೆ ಮಕ್ಕಳನ್ನು ನೋಡಿಕೊಳ್ಳಬೇಕು. ಮುಟ್ಟಿಿನ ಸಂದರ್ಭದಲ್ಲಿ ಮಾನಸಿಕವಾಗಿಯೂ ಒತ್ತಡ ಅನುಭವಿಸುತ್ತಾಾರೆ. ಹೀಗಾಗಿ ಮುಟ್ಟಿಿನ ರಜೆ ನೀಡುವ ಬಗ್ಗೆೆ ಪರಾಮರ್ಶೆ ನಡೆಸಲು ಸಮಿತಿ ರಚನೆ ಮಾಡಿದ್ದೆವು. ಸಮಿತಿ 6 ದಿನಗಳ ಕಾಲ ರಜೆ ಕೊಡಬೇಕು ಎಂದು ಸಲಹೆ ನೀಡಿತ್ತು. ಸರಕಾರ ವಾರ್ಷಿಕ 12 ದಿನ ರಜೆ ಕೊಡುವ ನಿರ್ಧಾರವನ್ನು ಮಾಡಿದೆ. ಬೇರೆ ರಾಜ್ಯಗಳಲ್ಲಿ ಹೇಗೆ ಅನುಷ್ಠಾಾನವಾಗಿದೆ ಗೊತ್ತಿಿಲ್ಲ. ಕರ್ನಾಟಕಲ್ಲಿ ನಾವು ಅನುಷ್ಠಾಾನ ಮಾಡುತ್ತೇವೆ. ಎಲ್ಲ ವಲಯದಲ್ಲೂ ಅನ್ವಯವಾಗುತ್ತೆೆ. ಸರ್ಕಾರಿ, ಖಾಸಗಿ ವಲಯದಲ್ಲೂ ಅನ್ವಯವಾಗಲಿದೆ ಎಂದು ತಿಳಿಸಿದರು.
ಬಿಹಾರ ಮುಟ್ಟಿಿನ ರಜೆ ಘೋಷಿಸಿದ ಮೊದಲ ರಾಜ್ಯ ದೇಶದಲ್ಲಿ ಮೊದಲ ಬಾರಿಗೆ 1992 ರಲ್ಲಿ ಬಿಹಾರದಲ್ಲಿ ಮುಟ್ಟಿಿನ ರಜೆಯನ್ನು ಘೋಷಿಸಲಾಗಿತ್ತು. ಆ ಮೂಲಕ ಮುಟ್ಟಿಿನ ರಜೆ ಪರಿಚಯಿಸಿದ ದೇಶದ ಮೊದಲ ರಾಜ್ಯವಾಗಿ ಬಿಹಾರ ಹೊರಹೊಮ್ಮಿಿತ್ತು.
ಅಲ್ಲಿ ಪ್ರತಿ ತಿಂಗಳು ಎರಡು ದಿನಗಳ ಮುಟ್ಟಿಿನ ರಜೆ ಒದಗಿಸಲಾಗಿದೆ. ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಕೂಡ ಮಹಿಳೆಯರಿಗೆ ಕೆಲವು ನಿಬಂಧನೆಗಳೊಂದಿಗೆ ಮುಟ್ಟಿಿನ ರಜೆ ನೀಡಲಾಗುತ್ತಿಿದೆ.

