ಸುದ್ದಿಮೂಲ ವಾರ್ತೆ
ಮೈಸೂರು, ಜೂ.25: ಇಲ್ಲಿನ ಚಾಮುಂಡಿಬೆಟ್ಟದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಅಕ್ರಮ ಸಾಗಣಿಕೆ ವಿರೋಧಿ ದಿನದ ಅಂಗವಾಗಿ ಮೈಸೂರು ನಗರ ಪೊಲೀಸ್ ಠಾಣೆ ವತಿಯಿಂದ ಕಾಲ್ನಡಿಗೆ ಜಾಗೃತಿ ಜಾಥವನ್ನು ಭಾನುವಾರ ಹಮ್ಮಿಕೊಳ್ಳಲಾಗಿತ್ತು.
ದೇವರಾಜ ಉಪ ವಿಭಾಗದ ಎಸಿಪಿ ಶಾಂತಮಲ್ಲಪ್ಪ ಹಾಗೂ ಪೊಲೀಸ್ ಇನ್ ಸ್ಪೆಕ್ಟರ್ ಎನ್. ಜಯಕುಮಾರ್ ಹಾಗೂ ಸಿಬಂದ್ದಿ ನೆರೆದಿದ್ದ ಸಾರ್ವಜನಿಕರಿಗೆ ಮಾದಕ ವಸ್ತು ಗಳಿಂದ ಆಗಬಹುದಾದ ದುಷ್ಟರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿದರು.