ಸುದ್ದಿಮೂಲ ವಾರ್ತೆ
ಚಿಂತಾಮಣಿ,ನ.8 : ಮಾದಕ ವಸ್ತುಗಳ ಮಾರಾಟ ಜಾಲದ ಹಿಂದೆ ಬಿದ್ದಿರುವ ಪೊಲೀಸರಿಗೆ ದಾಳಿ ವೇಳೆ ಹುಲಿ ಉಗುರು ಪತ್ತೆಯಾಗಿದೆ.
ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಸೂಲದೇನಹಳ್ಳಿಯಲ್ಲಿ ಯುವಕನೊಬ್ಬ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದಿತ್ತು. ಹೀಗಾಗಿ ಚಿಂತಾಮಣಿ ಗ್ರಾಮಾಂತರ ಪೊಲೀಸರು ಮನೆ ಮೇಲೆ ದಾಳಿ ಮಾಡಿದಾಗ ಹುಲಿ ಉಗುರು ಮಾದರಿಯ ವಸ್ತುಗಳು ಪತ್ತೆಯಾಗಿವೆ.
ನವೀನ್ ಎಂಬಾತನ ಮನೆಯಲ್ಲಿ ಹುಲಿ ಉಗುರು ಪತ್ತೆಯಾಗಿರುವುದು. ಹುಲಿ ಉಗುರಿನ ಮಾದರಿಯನ್ನು ಪೊಲೀಸರು ಸ್ಥಳೀಯ ಅರಣ್ಯಾಧಿಕಾರಿಗಳಿಗೆ ನೀಡಿದ್ದಾರೆ. ವನ್ಯ ಜೀವಿ ಸಂರಕ್ಷಣಾ ಕಾಯ್ದೆಯಡಿ ಅರಣ್ಯ ಇಲಾಖೆಯಲ್ಲಿ ದೂರು ದಾಖಲಾಗಿದೆ. ಪೊಲೀಸ್ ದಾಳಿ ವಿಚಾರ ತಿಳಿಯುತ್ತಿದ್ದಂತೆ ನವೀನ್ ನಾಪತ್ತೆಯಾಗಿದ್ದಾನೆ. ಪೊಲೀಸರು ನವೀನ್ಗಾಗಿ ಹುಡುಕಾಟವನ್ನು ನಡೆಸಿದ್ದಾರೆ. ಗಾಂಜಾ ಮಾರಾಟ ಮಾತ್ರವಲ್ಲದೆ ವನ್ಯಜೀವಿಗಳ ಉತ್ಪನ್ನಗಳನ್ನೂ ಮಾರಾಟ ಮಾಡುತ್ತಿದ್ದನಾ ಎಂಬುದರ ಕುರಿತು ತನಿಖೆಯನ್ನು ನಡೆಸುತ್ತಿದ್ದಾರೆ.