ಸುದ್ದಿಮೂಲ ವಾರ್ತೆ,
ನವದೆಹಲಿ, ಏ.10 ಆಮ್ ಆದ್ಮಿ ಪಕ್ಷಕ್ಕೆ ರಾಷ್ಟ್ರೀಯ ಪಕ್ಷ ಮಾನ್ಯತೆ ನೀಡಿ ಕೇಂದ್ರ ಚುನಾವಣಾ ಆಯೋಗವು ಆದೇಶ ಹೊರಡಿಸಿದೆ.
ಆಮ್ ಆದ್ಮಿ ಪಕ್ಷಕ್ಕೆ ರಾಷ್ಟ್ರೀಯ ಪಕ್ಷ ಮಾನ್ಯತೆ ಕೋರಿ ಸಲ್ಲಿಸಿದ ರಿಟ್ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಈ ಬಗ್ಗೆ ನಿರ್ಧರಿಸಲು ಚುನಾವಣೆ ಆಯೋಗಕ್ಕೆ ಗಡುವು ನೀಡಿತ್ತು. ಇದರ ಬೆನ್ನಲ್ಲೇ ಆಪ್ಗೆ ರಾಷ್ಟ್ರೀಯ ಸ್ಥಾನಮಾನ ನೀಡಲಾಗಿದೆ.
ದೆಹಲಿ, ಪಂಜಾಬ್ ನಂತರ ಗುಜರಾತ್ ರಾಜ್ಯದಲ್ಲೂ ಕೆಲವೊಂದು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ರಾಷ್ಟ್ರೀಯ ಸ್ಥಾನಮಾನ ಪಡೆಯುವ ಅರ್ಹತೆಯನ್ನು ಗಿಟ್ಟಿಸಿಕೊಂಡಿತ್ತು. ಸದ್ಯ ಚುನಾವಣಾ ಆಯೋಗವು ಆಪ್ ಪಕ್ಷಕ್ಕೆ ರಾಷ್ಟ್ರೀಯ ಸ್ಥಾನಮಾನ ನೀಡಿದೆ. ಅದರಂತೆ ಕೇವಲ 10 ವರ್ಷಗಳಲ್ಲಿ ರಾಷ್ಟ್ರೀಯ ಪಕ್ಷವಾಗಿ ಹೊರಹೊಮ್ಮಿದೆ.
ಇದೇ ವೇಳೆ ತೃಣ ಮೂಲ ಕಾಂಗ್ರೆಸ್ (ಟಿಎಂಸಿ) ಹಾಗೂ ಭಾರತೀಯ ಕಮ್ಯುನಿಸ್ಟ್ ಪಕ್ಷ (ಸಿಪಿಐ) ರಾಷ್ಟ್ರೀಯ ಪಕ್ಷಗಳು ಅಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.