ಸುದ್ದಿಮೂಲ ವಾರ್ತೆ ಬೆಂಗಳೂರು, ನ.10:
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ(ಕೆಯುಡಬ್ಲೂಜೆ) 2025-2028ನೇ ಸಾಲಿನ ಚುನಾವಣೆಯಲ್ಲಿ ಆಯ್ಕೆೆಯಾಗಿರುವ ರಾಜ್ಯಾಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ರಾಜ್ಯ ಪದಾಧಿಕಾರಿಗಳು ಸೋಮವಾರ ಸಂಘದ ಸಭಾಂಗಣದಲ್ಲಿ ಅಧಿಕಾರ ಸ್ವೀಕಾರ ಮಾಡಿದರು.
ಚುನಾವಣಾ ಲಿತಾಂಶವನ್ನು ಅಧಿಕೃತವಾಗಿ ಘೋಷಣೆ ಮಾಡಿದ ಮುಖ್ಯ ಚುನಾವಣಾಧಿಕಾರಿ ಎನ್.ರವಿಕುಮಾರ್ (ಟೆಲೆಕ್ಸ್) ಅವರು, ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧನೆ ಮಾಡಿದರು.
ಅಧ್ಯಕ್ಷರಾಗಿ ಶಿವಾನಂದ ತಗಡೂರು, ಉಪಾಧ್ಯಕ್ಷರಾಗಿ ಹೆಚ್.ಬಿ.ಮದನಗೌಡ, ಅಜ್ಜಮಾಡ ರಮೇಶ್ ಕುಟ್ಟಪ್ಪ, ಮತ್ತಿಿಕೆರೆ ಜಯರಾಮ, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಕಾರ್ಯದರ್ಶಿಗಳಾಗಿ ನಿಂಗಪ್ಪ ಚಾವಡಿ, ಪುಂಡಲೀಕ ಭೀ ಬಾಳೋಜಿ, ಸೋಮಶೇಖರ ಕೆರೆಗೋಡು, ಖಜಾಂಚಿಯಾಗಿ ವಾಸುದೇವ ಹೊಳ್ಳ ಅವರು ಪ್ರಮಾಣ ವಚನ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳಿಗೆ ಚುನಾವಣಾ ಪ್ರಮಾಣ ಧೃಢೀಕರಣ ಪತ್ರ ಮತ್ತು ಹೂ ಬೊಕ್ಕೆೆ ಮತ್ತು ಪುಸ್ತಕ ನೀಡುವ ಮೂಲಕ ಅಭಿನಂದಿಸಲಾಯಿತು.
ಸಂಘದ ಜವಾಬ್ದಾಾರಿ ನಿಭಾಯಿಸಿರುವೆ:
ಇದೇ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ಚುನಾವಣಾಧಿಕಾರಿ ಎನ್.ರವಿಕುಮಾರ್ ಅವರು, ಸಂಘವು ತನಗೆ ವಹಿಸಿದ್ದ ಜವಾಬ್ದಾಾರಿಯನ್ನು ಬೈಲಾ ಮತ್ತು ಸಂಘದ ನಿಯಮಾವಳಿಗಳ ಅಡಿಯಲ್ಲಿ ಅತ್ಯಂತ ಪಾರದರ್ಶಕವಾಗಿ ನಿಭಾಯಿಸಿದ ತೃಪ್ತಿಿ ನನಗಿದೆ. ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಎಲ್ಲರಿಗೂ ಮತ್ತು ಚುನಾವಣೆಯಲ್ಲಿ ಆಯ್ಕೆೆಯಾದ ನೂತನ ಸಾಲಿನ ಎಲ್ಲಾ ಪದಾಧಿಕಾರಿಗಳನ್ನು ಅಭಿನಂದಿಸುತ್ತೇನೆ ಎಂದರು.

