ಸುದ್ದಿಮೂಲ ವಾರ್ತೆ
ಕೆಜಿಎಫ್, ಜೂ.15: ನಿರಂತರ ಪರಿಶ್ರಮ, ಆಸಕ್ತಿ, ಶ್ರದ್ದೆ, ಮತ್ತು ಏಕಾಗ್ರತೆ ಇದ್ದಲ್ಲಿ ಏನನ್ನು ಬೇಕಾದರೂ ಸಾಧಿಸಬಹುದು ಎಂದು ಆರ್.ಕೆ. ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ವಿ ಮೋಹನ್ ಕೃಷ್ಣ ಹೇಳಿದರು.
ನಗರದ ಬಾಲಕರ ಮತ್ತು ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತಮ್ಮ ಸಂಸ್ಥೆ ವತಿಯಿಂದ ಉಚಿತವಾಗಿ ನೋಟ್ ಪುಸ್ತಕ ವಿತರಿಸಿ ಮಾತನಾಡಿದರು.
ಸಮಾಜದಲ್ಲಿ ಅತ್ಯುನ್ನತ ಸೇವೆ ಸಲ್ಲಿಸುತ್ತಿರುವ ಅನೇಕ ಮಹನೀಯರು ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದವರೇ ಆಗಿದ್ದಾರೆ. ಹಿಂದಿನ ಗುರುಕುಲ ಪದ್ಧತಿಯಿಂದ ಹಿಡಿದು ಇಂದಿನ ಆಧುನಿಕತೆಗೆ ತಕ್ಕಂತೆ ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಮಹತ್ತರ ಬದಲಾವಣೆಗಳಗಿರುವುದನ್ನು ನಾವು ಕಾಣಬಹುದು. ಸರ್ಕಾರ ಶಿಕ್ಷಣವನ್ನು ಹಂತ ಹಂತವಾಗಿ ಡಿಜಿಟಲೀಕರಣ ಮಾಡುತ್ತಿದೆ. ವಿದ್ಯಾರ್ಥಿಗಳು ಸಹ ಇದಕ್ಕೆ ಹೊಂದಿಕೊಂಡು ಉತ್ತಮ ವ್ಯಾಸಂಗ ಮಾಡಬೇಕೆಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಮುಖಂಡರಾದ ರವಿ ರೆಡ್ಡಿ, ಪ್ರಾಂಶುಪಾಲರಾದ ಕೆ.ವಾಣಿ, ಶಿಕ್ಷಕಿ ಗಾಯತ್ರಿ, ತೇಜು, ನಾಗೇಶ್ ಇನ್ನು ಮೊದಲಾದವರು ಉಪಸ್ಥಿರಿದ್ದರು.