ಸುದ್ಧಿಮೂಲವಾರ್ತೆ
ಯಾದಗಿರಿ,ಮೇ 20:ವಡಗೇರಾ .ತಾಲೂಕಿನ ತುಮಕೂರು ಗ್ರಾಮದಲ್ಲಿ ಇಂದು ಸಿದ್ದರಾಮಯ್ಯ 2ನೇ ಬಾರಿ ಮುಖ್ಯಮಂತ್ರಿ ಯಾಗಿ ಪ್ರಮಾಣವಚನ ಸ್ವೀಕರಿಸಿದ ನಿಮಿತ್ಯ ತುಮಕೂರಿನ ಸಿದ್ದರಾಮಯ್ಯ ಅಭಿಮಾನಿ ಬಳಗದ ದಿಂದ ಸಿದ್ದರಾಮಯ್ಯನವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದರು.
ಕಾಂಗ್ರೆಸ್ ಯುವ ಮುಖಂಡ ಬಸವರಾಜ ಪಿಲ್ಲಿ ಮಾತನಾಡಿ, ಸಿದ್ದರಾಮಯ್ಯ ಬಡವರ ಬಂಧು ಬಡವರ ಕಷ್ಟವನ್ನು ಅರಿತವರು ಇವರು ಜಾತಿ ರಾಜಕಾರಣ ಮಾಡದೆ ಎಲ್ಲರನ್ನು ಒಗ್ಗೂಡಿಸಿ ಕರೆದುಕೊಂಡು ಹೋಗುವ ಶಕ್ತಿ ಸಾಮರ್ಥ್ಯ ಹೊಂದಿದ್ದಾರೆ ಇಂಥವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ ಕಾಂಗ್ರೆಸನ ಎಲ್ಲಾ ಹಿರಿಯ ಮುಖಂಡರುಗಳಿಗೆ ಧನ್ಯವಾದಗಳು ಸಲ್ಲಿಸುತ್ತೇವೆ ಚುನಾವಣೆಯ ಪ್ರಣಾಳಿಕೆಯಲ್ಲಿ ನಿಡಿದ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸುವುದರ ಜೊತೆಗೆ ಬ್ರಷ್ಟಾಚಾರ ರಹಿತ ಆಡಳಿತವನ್ನು ನೀಡಿ ನಮ್ಮ ರಾಜ್ಯದ ಅಭಿವೃದ್ಧಿಗಾಗಿ ಹಗಲಿರಲು ಶ್ರಮಿಸುತ್ತಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮರಿಲಿಂಗಪ್ಪ ಮಲ್ಲು ಸುಣಗಾರ.ಅಬ್ದುಲ್ ಮಸಕಲ್ .ಮೌನೇಶ್ ಪತ್ತಾರ್. ವೆಂಕಟೇಶ್ ಮದನೂರ್. ಅಬ್ದುಲ್ ಕೊರಬ. ಮಮ್ಮದ್. ತಿಮ್ಮಪ್ಪ ಬಡಿಗೇರ್. ಹಾಗೂ ಇನ್ನಿತರರು ಉಪಸ್ಥಿತರಿದ್ದರು