ಸುದ್ದಿಮೂಲ ವಾರ್ತೆ ನವದೆಹಲಿ, ಅ.19:
ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಉಂಟಾದ ಬೆಳೆ ಪರಿಹಾರ ನಷ್ಟಕ್ಕಾಾಗಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆೆ 384.40 ಕೋಟಿ ರೂ. ಬಿಡುಗಡೆ ಮಾಡಿದೆ.
ರಾಜ್ಯ ಪ್ರಾಾಕೃತಿಕ ವಿಕೋಪ ಪರಿಹಾರ ನಿಧಿ (ಎಸ್ಡಿಆರ್ಎ್)ಗೆ ಕೇಂದ್ರದ ಪಾಲಿನ ಎರಡನೇ ಕಂತು ಆಗಿ ಈ ಹಣ ನೀಡಲಾಗಿದ್ದು, ಇದೇ ವೇಳೆ ಮಹಾರಾಷ್ಟ್ರಕ್ಕೆೆ 1,566.40 ಕೋಟಿ ರೂ. ನೀಡಲು ಅನುಮೋದಿಸಲಾಗಿದೆ.
ಕರ್ನಾಟಕ ಮತ್ತು ಮಹಾರಾಷ್ಟ್ರ ಸೇರಿ ಎಸ್ಡಿಆರ್ಎ್ನ ಕೇಂದ್ರ ಪಾಲಿನ ಎರಡನೇ ಕಂತಾಗಿ 1950.80 ಕೋಟಿ ರೂ. ಮುಂಗಡ ಬಿಡುಗಡೆಗೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅನುಮೋದನೆ ನೀಡಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
2025-26ನೇ ಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರವು ಎಸ್ಡಿಆರ್ಎ್ ಅಡಿಯಲ್ಲಿ 27 ರಾಜ್ಯಗಳಿಗೆ 13,603.20 ಕೋಟಿ ರೂ.ಗಳನ್ನು ಮತ್ತು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯ ಅಡಿಯಲ್ಲಿ 15 ರಾಜ್ಯಗಳಿಗೆ 2,189.28 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಈ ವರ್ಷದ ಮುಂಗಾರು ಸಮಯದಲ್ಲಿ, ರಕ್ಷಣಾ ಮತ್ತು ಪರಿಹಾರ ಕಾರ್ಯಗಳಿಗಾಗಿ 30 ರಾಜ್ಯಗಳು ಅಥವಾ ಕೇಂದ್ರಾಾಡಳಿತ ಪ್ರದೇಶಗಳಲ್ಲಿ ದಾಖಲೆಯ 199 ಎನ್.ಡಿ.ಆರ್.ಎ್ ತಂಡಗಳನ್ನು ನಿಯೋಜಿಸಲಾಗಿತ್ತು ಎಂದು ಹೇಳಲಾಗಿದೆ.
ಪ್ರವಾಹ, ಭೂಕುಸಿತ ಮತ್ತು ಮೇಘ ಸ್ಫೋೋಟದಿಂದ ಹಾನಿಗೊಳಗಾದ ರಾಜ್ಯಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ಕೇಂದ್ರ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಕೇಂದ್ರ ಸರ್ಕಾರದ ಪ್ರಕಟಣೆ ತಿಳಿಸಿದೆ.