ಸುದ್ದಿಮೂಲ ವಾರ್ತೆ
ಬೆಂಗಳೂರು,ಏ.28: ಜನತಾದಳದ ರಾಜ್ಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಶಮ್ಶುಲ್ಲಾ ಖಾನ್ ಹಾಗೂ ಆಮ್ ಆದ್ಮೀ ಪಕ್ಷದ ರಾಜ್ಯ ಕಾರ್ಯದರ್ಶಿಗಳಾದ ಸೊಹೇಲ್ ದಿಲ್ವಾಜಿ ಇಂದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ರಾಜ್ಯದಲ್ಲಿ ಬೇರೆ ಪಕ್ಷಗಳ ನಾಯಕರು ಸಾಗರೋಪಾದಿಯಲ್ಲಿ ಕಾಂಗ್ರೆಸ್ ಪಕ್ಷ ಸೇರುತ್ತಿರುವುದನ್ನು ನೋಡಿದರೆ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 150ಕ್ಕಿಂತ ಹೆಚ್ಚಿನ ಕ್ಷೇತ್ರಗಳನ್ನು ಗೆಲ್ಲುವುದರಲ್ಲಿ ಅನುಮಾನವಿಲ್ಲ.
40% ಬಿಜೆಪಿ 40 ಕ್ಷೇತ್ರಗಳಿಗೆ ಸೀಮಿತವಾಗಲಿದ್ದು, ಉಳಿದಂತೆ ಇತರೆ ಪಕ್ಷಗಳು ಉಳಿದ ಕ್ಷೇತ್ರಗಳನ್ನು ಗೆಲ್ಲಲಿವೆ. ಎಐಸಿಸಿ ಹಾಗೂ ಕೆಪಿಸಿಸಿ ಪರವಾಗಿ ಈ ಇಬ್ಬರೂ ನಾಯಕರನ್ನು ಪಕ್ಷಕ್ಕೆ ಆತ್ಮೀಯವಾಗಿ ಸ್ವಾಗತಿಸುತ್ತೇನೆ. ಬಿಜೆಪಿಯ ಭ್ರಷ್ಟಾಚಾರ ಹಾಗೂ ದ್ವೇಷ ರಾಜಕಾರಣದ ವಿರುದ್ಧದ ಕಾಂಗ್ರೆಸ್ ಹೋರಾಟಕ್ಕೆ ಈ ನಾಯಕರ ಪಕ್ಷ ಸೇರ್ಪಡೆಯಿಂದ ಶಕ್ತಿ ಹೆಚ್ಚಲಿದೆ.
ಶಮ್ಶುಲ್ಲಾ ಖಾನ್ ಜನತಾದಳದ ರಾಜ್ಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿದ್ದು, ಜೆಡಿಎಸ್ ನಲ್ಲಿ ಅಲ್ಪಸಂಖ್ಯಾತರ ಘಟಕ ಕಟ್ಟಿದ್ದಾರೆ. ರಾಜ್ಯದಲ್ಲಿ ಮತ್ತೆ ಈ ಭ್ರಷ್ಟ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಬಾರದು ಎಂದರೆ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗಬೇಕು. ಬಿಜೆಪಿ ವಿರುದ್ಧ ಹೋರಾಡಲು ಜೆಡಿಎಸ್ ಪಕ್ಷಕ್ಕೆ ಶಕ್ತಿ ಇಲ್ಲ. ಈ ಕಾರಣದಿಂದ ಕಾಂಗ್ರೆಸ್ ಸೇರುತ್ತಿದ್ದಾರೆ. ಪಕ್ಷದ ಅಲ್ಪಸಂಖ್ಯಾತ ಘಟಕದ ಹಾಲಿ ಅಧ್ಯಕ್ಷರೇ ಆ ಪಕ್ಷದ ಮೇಲೆ ನಂಬಿಕೆ ಇಡದಿದ್ದರೆ ಆ ಪಕ್ಷ ಚುನಾವಣೆಯಲ್ಲಿ ಬಿಜೆಪಿಯನ್ನು ಯಾವ ಮಟ್ಟಿಗೆ ಎದುರಿಸಲಿದೆ ಎಂಬುದು ಅರ್ಥವಾಗುತ್ತಿಲ್ಲ. ಜೆಡಿಎಸ್ ಅಧ್ಯಕ್ಷ ಸಿಎಂ ಇಬ್ರಾಹಿಂ ಅವರು ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದು, ಅವರು ತಮ್ಮದೇ ಪಕ್ಷದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರ ವಿಶ್ವಾಸ ಗಳಿಸುವಲ್ಲಿ ವಿಫಲರಾಗಿದ್ದಾರೆ. ಈ ಚುನಾವಣೆಯಲ್ಲಿ ಜೆಡಿಎಸ್ ನಿಜವಾಗಿಯೂ ಬಿಜೆಪಿ ವಿರುದ್ಧ ಹೋರಾಟ ಮಾಡುತ್ತಿದೆಯೇ ಅಥವಾ ಕಾಟಾಚಾರದ ಹೋರಾಟ ಮಾಡುತ್ತಿದೆಯೇ ಎಂದು ಇಬ್ರಾಹಿಂ ಅವರು ಹೇಳಬೇಕು. ಇವರ ಜತೆ ಆಮ್ ಆದ್ಮೀ ಪಕ್ಷದ ರಾಜ್ಯ ಕಾರ್ಯದರ್ಶಿಗಳಾದ ಸೊಹೇಲ್ ದಿಲ್ವಾಜಿ ಅವರು ಪಕ್ಷ ಸೇರುತ್ತಿದ್ದಾರೆ.