ಸುದ್ದಿಮೂಲ ವಾರ್ತೆ ಸಿಂಧನೂರು, ೆ.03:
ಶಿಕ್ಷಕ ಸಮುದಾಯ ಎದುರಿಸುತ್ತಿಿರುವ ದೀರ್ಘಕಾಲದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಾಯಿಸಿ ಅಖಿಲ ಭಾರತ ಶಿಕ್ಷಕರ ಜಂಟಿ ಕ್ರಿಿಯಾ ಸಮಿತಿ ೆಬ್ರುವರಿ 5 ರಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ’ದೆಹಲಿ ಚಲೋ’ ಹೋರಾಟ ಹಮ್ಮಿಿಕೊಂಡಿದೆ. ಈ ಬೃಹತ್ ಚಳವಳಿಗೆ ಅಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಶನ್ (ಐಟಾ) ಸಂಪೂರ್ಣ ಬೆಂಬಲ ನೀಡಿದೆ ಎಂದು ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಷನ್ ತಾಲೂಕಾಧ್ಯಕ್ಷ ನೂರುದ್ದೀನ್ ತಿಳಿಸಿದ್ದಾಾರೆ.
ಹೊಸ ಪಿಂಚಣಿ ಯೋಜನೆ(ಎನ್ಪಿಎಸ್) ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ(ಒಪಿಎಸ್) ಮರು ಜಾರಿಗೊಳಿಸಬೇಕು. ಸೇವೆಯಲ್ಲಿರುವ ಶಿಕ್ಷಕರಿಗೆ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಯಿಂದ ವಿನಾಯಿತಿ ನೀಡಬೇಕು. ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಪ್ರಾಾಥಮಿಕ ಶಾಲಾ ಶಿಕ್ಷಕರಿಗೂ ಮತದಾನದ ಹಕ್ಕು ನೀಡಬೇಕು ಎಂಬುದು ಪ್ರಮುಖ ಬೇಡಿಕೆಗಳಾಗಿವೆ.
‘ದೆಹಲಿ ಚಲೋ’ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲ ಶಿಕ್ಷಕರು ಹೆಚ್ಚಿಿನ ಸಂಖ್ಯೆೆಯಲ್ಲಿ ಪಾಲ್ಗೊೊಂಡು ಹೋರಾಟ ಯಶಸ್ವಿಿಗೊಳಿಸಬೇಕು ಎಂದು ಪತ್ರಿಿಕಾ ಹೇಳಿಕೆಯಲ್ಲಿ ಮನವಿ ಮಾಡಿದ್ದಾಾರೆ.
ಶಿಕ್ಷಕರ ದೆಹಲಿ ಚಲೋ ಹೋರಾಟಕ್ಕೆ ಐಟಾ ಬೆಂಬಲ

